Asianet Suvarna News Asianet Suvarna News

'ನಾನು ಕಾಂಗ್ರೆಸ್‌ ಸೇರುವುದು ಖಚಿತ : ಅವಕಾಶ ಸಿಕ್ಕರೆ ಚುನಾವಣೆಗೂ ಸ್ಪರ್ಧೆ'

ತಾವು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದು ನಿಶ್ಚಿತ, ಈಗಾಗಲೇ ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಅವಕಾಶ ಸಿಕ್ಕರೆ 2023ರ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸುವೆ ಎಂದು ಜೆಡಿಎಸ್‌ ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.

 i will join Congress Soon Says Shrinivasa gowda snr
Author
First Published Dec 5, 2022, 6:21 AM IST

ಕೋಲಾರ: (ಡಿ. 05): ತಾವು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದು ನಿಶ್ಚಿತ, ಈಗಾಗಲೇ ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಅವಕಾಶ ಸಿಕ್ಕರೆ 2023ರ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸುವೆ ಎಂದು ಜೆಡಿಎಸ್‌ ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.

ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ ಕಾಂಗ್ರೆಸ್‌ (Congress)  ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar)  ಅವರನ್ನು ಭೇಟಿ ಮಾಡಿ ವಿಚಾರ ತಿಳಿಸಿದ್ದೇನೆ ಎಂದರು.

ತಾವು ಕಾಂಗ್ರೆಸ್‌ ಸೇರುವುದಕ್ಕೆ ಪಕ್ಷದ ಸ್ಥಳಿಯ ಮುಖಂಡರು ವಿರೋಧಿಸುತ್ತಿರುವ ಕುರಿತು ಹೆಚ್ಚಿಗೆ ಮಾತನಾಡಲು ಇಷ್ಟಪಡುವುದಿಲ್ಲ. ಈಗಾಗಲೇ ಈ ವಿಚಾರದಲ್ಲಿ ರಾಜ್ಯ ನಾಯಕರೊಂದಿಗೆ ಮಾತನಾಡಿದ್ದೇನೆ ಎಂದರು.

ರಾಜೀನಾಮೆ ದೊಡ್ಡ ವಿಷಯವಲ್ಲ

ನಾನು ಜೆಡಿಎಸ್‌ ಪಕ್ಷ ಬಿಡುವ ತೀರ್ಮಾನ ಮಾಡಿದ ಮೇಲೆ ರಾಜಿನಾಮೆ ಕೋಡೋದು ದೊಡ್ಡ ವಿಷಯ ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜೆಡಿಎಸ್‌ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ಚುನಾವಣೆಯಲ್ಲಿ ಗೆದ್ದಿಲ್ಲ, ರಾಜೀನಾಮೆ ಕೋಡು ಅನ್ನೋಕೆ ಅವರಾರ‍ಯರು. ಚುನಾವಣೆಯಲ್ಲಿ ಗೆದ್ದು ಹೇಳಿದ್ರೆ ನಾನು ಅವರ ಮಾತು ಕೇಳಬಹುದು. ನನಗೇನು ಜೆಡಿಎಸ್‌ ಅನಿವಾರ್ಯ ಅಲ್ಲ, ನಾನು ನಾನಾಗೇ ಜೆಡಿಎಸ್‌ ತೊರೆಯುತ್ತಿದ್ದೇನೆ ಎಂದು ಹೇಳಿದರು.

ಎಚ್ಡಿಕೆ ಕೊಳಚೆ ನೀರು ಎಂದಿದ್ದು ತಪ್ಪು

ಎಚ್‌.ಡಿ. ಕುಮಾರಸ್ವಾಮಿ ಕೆ.ಸಿ ವ್ಯಾಲಿ ನೀರಿನ ಬಗ್ಗೆ ಹಗುರವಾಗಿ ಮಾತನಾಡಿದರು, ಅದು ನನಗೆ ನೋವಾಯಿತು. ಕೆಸಿ ವ್ಯಾಲಿ ನೀರಿನಿಂದ ಜಿಲ್ಲೆಯ ರೈತರು ಬದುಕುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಹಾಗೆ ಮಾತನಾಡಬಹುದೇ ಎಂದರು.

ದೇವೇಗೌಡರ ಬಗ್ಗೆ ಗೌರವ ಇದೆ

ಎಚ್‌.ಡಿ.ದೇವೇಗೌಡರು ದೊಡ್ಡವರು ಅವರ ಬಗ್ಗೆ ಅಪಾರ ಗೌರವವಿದೆ. ಅವರು ಮಾಜಿ ಪ್ರಧಾನಿಗಳು ಅವರ ಬಗ್ಗೆ ಮಾತನಾಡುವಷ್ಟುದೊಡ್ಡವನು ನಾನಲ್ಲ ಎಂದರು.

ನನ್ನ ಸಿದ್ದರಾಮಯ್ಯ  ನಡುವೆ ಬಿರುಕಿಲ್ಲ

ಕಲಬುರಗಿ : ನನ್ನ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಯಾವುದೇ ಬಿರುಕಿಲ್ಲ. ಸುಖಾಸುಮ್ಮನೆ ನಮ್ಮಿಬ್ಬರ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂದು ಮಾಧ್ಯಮದವರು ಬಿಂಬಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಕಲಬುರಗಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮಿಬ್ಬರ ಮಧ್ಯೆ ಬಿರುಕಿದೆ ಎಂದು ಬಿಜೆಪಿಯವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯಲ್ಲಿ ಸದಾನಂದ ಗೌಡ, ಯತ್ನಾಳ್‌ ಹಾಗೂ ವಿಜಯೇಂದ್ರ ಮಧ್ಯೆ ಬಿರುಕಿಲ್ವಾ?. ಮೊದಲು ತಮ್ಮಲ್ಲಿರುವ ಬಿರುಕುಗಳನ್ನು ಬಿಜೆಪಿಯವರು ಮುಚ್ಚಿಕೊಳ್ಳಲಿ ಎಂದರು.

ಬಿಜೆಪಿಗೆ ಭಯ ಶುರುವಾಗಿದೆ:ಕಾರ್ಯಕರ್ತರೆಲ್ಲರೂ ಕಾಂಗ್ರೆಸ್‌ ಸೇರುತ್ತಿದ್ದಾರೆ. ಬಿಜೆಪಿಗೆ ಸರತಿಯಲ್ಲಿ ರೌಡಿಗಳು ಸೇರ್ಕೋತಿದ್ದಾರೆ. ಬಿಜೆಪಿಯವರು ಜನರ ಭಾವನೆಗಳ ಜೊತೆಗೆ ಆಟ ಆಡುತ್ತಿದ್ದಾರೆ. ಆದರೆ, ನಾವು ಜನರ ಬದುಕು ಕಟ್ಟುವ ಮಾತನ್ನಾಡುತ್ತಿದ್ದೇವೆ. ಹೀಗಾಗಿ, ಜನ ಈ ಬಾರಿ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್‌ಗೆ ಪಟ್ಟಕಟ್ಟುವ ಸಂಕಲ್ಪ ಮಾಡಿದ್ದಾರೆ. ಇದನ್ನು ಕಂಡು ಬಿಜೆಪಿಗೆ ಈಗಲೇ ಭಯ ಶುರುವಾಗಿದೆ. ಅನೇಕರು ಕಾಂಗ್ರೆಸ್‌ಗೆ ಬರುವ ಆತುರದಲ್ಲಿದ್ದಾರೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಅವರ ಹೆಸರುಗಳನ್ನು ನಾನು ಈಗಲೇ ಹೇಳುವುದಿಲ್ಲ ಎಂದರು.

Chikkaballapur: ಡಿ.ಕೆ.ಶಿವಕುಮಾರ್‌ ಹಿನ್ನಲೆ ಏನು: ಸಂಸದರ ಪ್ರಶ್ನೆ

ಖರ್ಗೆ ಭೇಟಿ ಕುರಿತು ಪ್ರತಿಕ್ರಿಯಿಸಿ, ಕಲಬುರಗಿಯವರಾದ ಡಾ.ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರೋದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ. ಅವರು ಡಿ.10ರಂದು ತಮ್ಮ ತವರೂರಿಗೆ ಭೇಟಿ ನೀಡಲಿದ್ದಾರೆ. ಅವರ ಮೊದಲ ಭೇಟಿಯನ್ನು ಕಲ್ಯಾಣ ನಾಡಲ್ಲಿ ಕಾಂಗ್ರೆಸ್‌ ಪಕ್ಷದ ಸಂಘಟನೆಗೆ ಹೊಸ ಶಕ್ತಿ, ಹುರುಪು ತುಂಬುವ ಸಮಾವೇಶವನ್ನಾಗಿ ಸಂಘಟಿಸಲಾಗುತ್ತಿದೆ ಎಂದರು. ಗಡಿ ವಿಚಾರ ಕುರಿತು ಪ್ರತಿಕ್ರಿಯಿಸಿ, ಗಡಿ ವಿಚಾರದಲ್ಲಿ ಬಿಜೆಪಿ ಸರ್ಕಾರ ರಾಜಕೀಯ ಮಾಡಬಾರದು. ಅವರ ಊರನ್ನು ಅವರಿಗೆ ಬಿಡಿ, ನಮ್ಮೂರು ನಮಗಿರಲಿ. ಗಡಿ ವಿಚಾರದಲ್ಲಿ ಜನರ ಭಾವನೆ ಕೆರಳಿಸುವುದು ಸರಿಯಲ್ಲ ಎಂದರು.

ರೌಡಿಗಳು ಬಿಜೆಜಿ ಸೇರ್ಕೋತಿದ್ದಾರಷ್ಟೆ: ಕಾರ್ಯಕರ್ತರೆಲ್ಲರೂ ಕಾಂಗ್ರೆಸ್‌ ಸೇರ್ಕೋತಿದ್ದಾರೆ, ಬಿಜೆಪಿಗೆ ಸರತಿಯಲ್ಲಿ ರೌಡಿಗಳು ಸೇರ್ಕೋತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮ್‌ ಲೇವಡಿ ಮಾಡಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ಭಾವನೆ ಜೊತೆಗೆ ಆಟ ಆಡುತ್ತಿದ್ದಾರಷ್ಟೆ, ಕಾಂಗ್ರೆಸ್‌ನವರು ನಾವು ಜನರ ಬದುಕು ಕಟ್ಟುವ ಮಾತನ್ನಾಡುತ್ತಿದ್ದೇವೆ. ಹೀಗಾಗಿ ಜನ ಈ ಬಾರಿ ಬಿಜಜೆಎಪಿಗ ಸೋಲಿಸಿ ಕಾಂಗ್ರೆಸ್‌ಗೆ ಪಟ್ಟಕಟ್ಟುವ ಸಂಕಲ್ಪ ಮಾಡಿದ್ದಾರೆ. ಇದನ್ನು ಕಂಡು ಬಿಜೆಪಿಗೆ ಈಗಲೇ ಭಯ ಶುಉರವಗಿದೆ ಎಂದರು.

ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯವಿಲ್ಲ: ಡಿ.ಕೆ.ಶಿವಕುಮಾರ್‌

ಬಿಜೆಪಿ ಕಾಂಗ್ರೆಸ್‌ ಪಕ್ಷವನ್ನು ಹತ್ತಿಕ್ಕಲು ನೋಡುತ್ತಿದೆ. ಯಾವ ರೂತಿಯಲ್ಲೂ ಅದು ಆಗುತ್ತಿಲ್ಲ, ಕೊನೆಗೆ ಮತ ಪಟ್ಟಿಯಲ್ಲಿ ಇರುವವರ ಹೆಸರು ತೆಗೆದು ಹಾಕುವ ಕೆಲಸ ಮಾಡುತ್ತಿದ್ದಾರೆ. ಹಲವು ಸಂಚು ರೂಪಿಸಿ ಬಿಜೆಪಿ ಅಧಿಕಾರಕ್ಕೆ ಬರುವ ಯತ್ನದಲ್ಲಿದೆ. ರಾಜ್ಯದ ಜನ ಬಿಜೆಪಿಯವರ ಆ ಪ್ರಯತ್ನ ವಿಫಲ ಮಾಡುತ್ತಾರೆಂದು ಡಿಕೆಶಿ ಹೇಳಿದರು. ಅನೇಕರು ಕಾಂಗ್ರೆಸ್‌ ಪಕ್ಷಕ್ಕೆ ಬರುವ ಆತುರದಲ್ಲಿದ್ದಾರೆ, ಚರ್ಚೆಗಳು ಸಾಗಿವೆ, ನಾನು ಯಾರಂತ ಹೆಸರು ಹೇಳೋದಿಲ್ಲ, ಸ್ವಾಭಿಮಾನಿಗಳು ಇದ್ದಾರೆ. ಅವರೆಲ್ಲರೂ ಕಂಗ್ರೆಸ್‌ಗೆ ಬರಲಿದ್ದಾರೆಂದರು. ಸಿದ್ದರಾಮಯ್ಯ ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಹಾಕಿದ್ದಾರೆ, ಕ್ಷೇತ್ರದ ವಿಚಾರದಲ್ಲಿ ಹೈಕಮಾಂಡ್‌ ಸೂಚನೆ ಕೇಳೋದಾಗಿಯೂ ಹೇಳಿದ್ದಾರೆಂದರು.

Follow Us:
Download App:
  • android
  • ios