ಕರೆಂಟ್‌ ಬಿಲ್‌ ಕೊಡಬೇಡಿ, ನಾವು ಕಟ್ಟಲ್ಲ: ಮೆಸ್ಕಾಂ ಮೀಟರ್ ಬೋರ್ಡ್‌ಗೆ ಚೀಟಿ ಅಂಟಿಸಿದ ಉಡುಪಿ ನಾಗರಿಕ

ಕಾಂಗ್ರೆಸ್ ಮಾಡಿರುವ ಘೋಷಣೆ, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಒಂದು ಕಡೆ ಕರಾವಳಿಗರು ಸ್ವಾಭಿಮಾನದ ಸಂಕೇತವಾಗಿ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಲಾಗುತ್ತಿದೆ. ಇನ್ನೊಂದೆಡೆ ಈ ಬಾರಿ ಕರೆಂಟ್ ಬಿಲ್ ಕಟ್ಟೋದಿಲ್ಲಾ ಎಂದು ಸಾರ್ವಜನಿಕರು ಅಭಿಯಾನ ಆರಂಭಿಸಿದ್ದಾರೆ.

I will Not Pay the Electricity Bill to MESCOM Says Vasudhev Bhat in Udupi grg

ಉಡುಪಿ(ಮೇ.17):  ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಲವು ಉಚಿತ ಭಾಗ್ಯಗಳನ್ನು ಘೋಷಿಸಿತ್ತು. 200 ಯೂನಿಟ್ ವರೆಗೆ ವಿದ್ಯುತ್ ಬಳಕೆಗೆ ಯಾವುದೇ ಬಿಲ್ ಕಟ್ಟುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದ್ದು, ಚುನಾವಣಾ ಪ್ರಚಾರದಲ್ಲಿ ಪ್ರಧಾನ ಆಕರ್ಷಣೆಯಾಗಿತ್ತು. ರಾಜ್ಯಾದ್ಯಂತ ಈ ಘೋಷಣೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ, ಆದರೆ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಾತ್ರ ಮತದಾರರು ಬಿಜೆಪಿಗೆ ಮಣೆ ಹಾಕಿದ್ದಾರೆ. ಎಲ್ಲಾ ಐದು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿದ್ದಾರೆ.

ಈಗ ಕಾಂಗ್ರೆಸ್ ಮಾಡಿರುವ ಘೋಷಣೆ, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಒಂದು ಕಡೆ ಕರಾವಳಿಗರು ಸ್ವಾಭಿಮಾನದ ಸಂಕೇತವಾಗಿ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಲಾಗುತ್ತಿದೆ. ಇನ್ನೊಂದೆಡೆ ಈ ಬಾರಿ ಕರೆಂಟ್ ಬಿಲ್ ಕಟ್ಟೋದಿಲ್ಲಾ ಎಂದು ಸಾರ್ವಜನಿಕರು ಅಭಿಯಾನ ಆರಂಭಿಸಿದ್ದಾರೆ.

ಕಾಂಗ್ರೆಸ್‌ ಗ್ಯಾರಂಟಿಗೆ ಚಿತ್ರದುರ್ಗ ಜನತೆ ಟಕ್ಕರ್‌ : ವಿದ್ಯುತ್‌ ಬಿಲ್‌ ಕಟ್ಟಲ್ಲ ಎಂದು ಪಟ್ಟು- ವಿಡಿಯೋ ವೈರಲ್‌

ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಮನೆಯಲ್ಲಿ ಬೋರ್ಡ್ ಅಳವಡಿಕೆ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ದೊರಕಿದೆ. ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್, ನನ್ನ ಮನೆ ಮೀಟರ್ ಬೋರ್ಡ್ ಗೆ ಈ ರೀತಿ ಬೋರ್ಡ್ ಅಳವಡಿಸಿದ್ದಾರೆ. ಮೀಟರ್ ಬೋರ್ಡ್ ಗೆ ಚೀಟಿ ಅಂಟಿಸಿರುವ ವಾಸುದೇವ ಭಟ್, ನನ್ನ ಮನೆಗೆ ಬಿಲ್ ಕೊಡಲು ಬರಬೇಡಿ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ವಾಸುದೇವ ಭಟ್, ಕಾಂಗ್ರೆಸ್ ಸರಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ನಾನು ಕೂಡ ಬಿಲ್ ಕಟ್ಟುವುದಿಲ್ಲ ಎಂದಿದ್ದಾರೆ.

ರಾಜ್ಯದ ಜನತೆಗೆ ವಿದ್ಯುತ್‌ ಶಾಕ್: ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ

ಶೇ.95% ಜನತೆ ಇದರ ಲಾಭ ಪಡೆಯಬಹುದು ಎಂದು ಡಿಕೆಶಿ ಹೇಳಿದ್ದಾರೆ. ಡಿಕೆಶಿ ಹೇಳಿರುವ ಶೇ.95% ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲಾ. ನಾನು ತಿಂಗಳಿಗೆ 200 ಯೂನಿಟ್ ಖರ್ಚು ಮಾಡುತ್ತಿಲ್ಲ ಹಾಗಾಗಿ ಮೀಟರ್ ಬೋರ್ಡ್ ಗೆ ಚೀಟಿ ಆಂಟಿಸಿದ್ದೇನೆ ಎಂದು ಹೇಳಿದ್ದಾರೆ.

ನಾನು ಫಲಾನುಭವಿ ಆಗಿರುವುದರಿಂದ ಮೀಟರ್ ಬೋರ್ಡಿನಲ್ಲಿ ಫಲಕ ಹಾಕಿದ್ದೇನೆ. ನಾನು ಇಲ್ಲದಿರುವಾಗ ಮೆಸ್ಕಾಂನವರು ಬಂದರೆ ಅವರಿಗೆ ಗೊತ್ತಾಗಲಿ ಎಂದು ಬೋರ್ಡ್ ಅಳವಡಿಸಿದ್ದೇನೆ. ನನಗೆ ಮೆಸ್ಕಾಂನವರು ಕರೆಂಟ್ ಬಿಲ್ ಕೊಡಬೇಕಾಗಿಲ್ಲ. ನಾನು ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದರಿಂದ ಈ ಯೋಜನೆಗೆ ಅರ್ಹ ಫಲಾನುಭವಿ ಆಗಿದ್ದೇನೆ ಉಡುಪಿಯ ವಾಸುದೇವ ಭಟ್ ಪೆರಂಪಳ್ಳಿ ಹೇಳಿಕೆ ನೀಡಿದ್ದಾರೆ. ಸದ್ಯ ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

Latest Videos
Follow Us:
Download App:
  • android
  • ios