Asianet Suvarna News Asianet Suvarna News

ಲೋಕಸಭಾ ಚುನಾವಣೆ : ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಚಲುವರಾಯಸ್ವಾಮಿ?

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನನ್ನ ಸಹಮತವಿದೆ ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.

i will Support Cheluvarayaswamy If he Contest in Lok Sabha Election snr
Author
First Published Dec 24, 2023, 6:48 PM IST

 ಮದ್ದೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಕೃಷಿ ಸಚಿವ ಚಲುವರಾಯಸ್ವಾಮಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನನ್ನ ಸಹಮತವಿದೆ ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಚಲುವರಾಯಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ನಿಲ್ಲುವ ಬಗ್ಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸಿಲ್ಲ. ಒಂದು ವೇಳೆ ಎಐಸಿಸಿ ಅಥವಾ ಕೆಪಿಸಿಸಿ ವರಿಷ್ಠರು ಚಲುವರಾಯಸ್ವಾಮಿಯವರನ್ನು ಸ್ಪರ್ಧೆ ಮಾಡುವಂತೆ ಸೂಚಿಸಿದರೆ ಅವರು ಅನಿವಾರ್‍ಯವಾಗಿ ಕಣಕ್ಕಿಳಿಯಬೇಕಾಗುತ್ತದೆ. ಚಲುವರಾಯಸ್ವಾಮಿ ಸ್ಪರ್ಧೆಗೆ ನನ್ನ ಸಹಮತವಿದೆ ಎಂದರು.

ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಚಲುವರಾಯಸ್ವಾಮಿ ಅವರಿಗೆ ಹೆಚ್ಚಿನ ಮತಗಳನ್ನು ದೊರಕಿಸುವ ಮೂಲಕ ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಆಶ್ವಾಸನೆ ನೀಡಿದರು.

ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತವಿದ್ದು, ಶೀಘ್ರದಲ್ಲೇ ಸರ್ಕಾರ ಪತನವಾಗುತ್ತದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಉದಯ್, ಹಿಂದೆ ಬಿಜೆಪಿ-ಜೆಡಿಎಸ್ ಮೈತ್ರಿಯು ಸರ್ಕಾರವನ್ನು ನಡೆಸಿದ್ದನ್ನು ನೋಡಿದ್ದೇವೆ. ಅಶೋಕ್ ಅವರ ಕನಸು ನನಸಾಗುವುದಿಲ್ಲ. ಮುಂದೆಯೂ ಐದು ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಶಾಸಕ ಉದಯ್ ಹೇಳಿದರು. 

ಶೀಘ್ರ ಕೇಂದ್ರದಿಂದ ಬರ ಪರಿಹಾರ ಬರಲಿದೆ

ಶ್ರೀರಂಗಪಟ್ಟಣ (ಡಿ.23): ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾರಿಗೆ ಮನವರಿಕೆ ಮಾಡಿದ್ದೇವೆ. ಕೇಂದ್ರದಿಂದ ಆದಷ್ಟು ಬೇಗ ಬರ ಪರಿಹಾರ ಹಣ ಬರಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಸಚಿವರು ಪ್ರಧಾನಿ ಸೇರಿದಂತೆ ಕೇಂದ್ರದ ಗೃಹ ಸಚಿವರು, ಸಂಬಂಧಪಟ್ಟ ಇಲಾಖೆ ಸಚಿವರಿಗೆ ವಾಸ್ತವ ಸ್ಥಿತಿ ಮನವರಿಕೆ ಮಾಡಿದ್ದೇವೆ. ಸಮಿತಿ ಮುಖ್ಯಸ್ಥರಾಗಿರುವ ಅಮಿತ್ ಶಾ ನಮ್ಮ ಮನವಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಆದಷ್ಟು ಬೇಗ ಬರ ಪರಿಹಾರದ ಹಣ ಬಿಡುಗಡೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದಿಂದ ಹಣ ಬಿಡುಗಡೆ ವಿಳಂಬವಾಗಿದ್ದರಿಂದ ರಾಜ್ಯ ಸರ್ಕಾರ ರಾಜ್ಯದ ರೈತರ ಪ್ರತಿ ಹೆಕ್ಟೇರ್‌ಗೆ 2 ಸಾವಿರ ಬರ ಪರಿಹಾರ ನೀಡಲು ಘೋಷಣೆ ಮಾಡಲಾಯಿತು. ಉಳಿದಂತೆ ಕೇಂದ್ರದಿಂದ ಹಣ ಬಂದ ಕೂಡಲೇ ರೈತರ ಅಕೌಂಟ್ ಗೆ ತಲುಪಲಿದೆ ಎಂದರು. ರೈತರು ಯಾವ ವಿಚಾರವಾಗಿ ಧರಣಿ ಮುಂದುವರೆಸಿದ್ದಾರೋ ಗೊತ್ತಿಲ್ಲ. ಕಾವೇರಿ ಚಳವಳಿ ಸ್ಥಳಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ನಾನು, ಜಿಲ್ಲಾ ಮಟ್ಟದ ಅಧಿಕಾರಿಗಳು ರೈತರ ಮನವಿ ಆಲಿಸಿ ಚಳವಳಿ ಕೈ ಬಿಡುವಂತೆ ಮನವಿ ಮಾಡಿದ್ದೇವೆ. ಆದರೂ ಧರಣಿ ಮುಂದುವರೆಸಿದ್ದಾರೆ ಎಂದರು.

ಕಾರ್ಮಿಕ ಕಾನೂನು ವ್ಯಾಪ್ತಿಗೆ ಐಟಿ, ಬಿಟಿ ಕಂಪನಿ?: ಸಚಿವ ಸಂತೋಷ್‌ ಲಾಡ್‌

ಎರಡು ತಿಂಗಳಿಂದ ತಮಿಳುನಾಡಿಗೆ ನೀರು ಬಿಡುತ್ತಿಲ್ಲ. ಅಣೆಕಟ್ಟೆಯಲ್ಲಿ ನೀರು ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡುಲು ಹೇಗೆ ಸಾಧ್ಯ. ಎರಡು ತಿಂಗಳಿಂದ ತಮಿಳುನಾಡಿಗೆ ಒಂದು ಹನಿ ನೀರು ಬಿಟ್ಟಿಲ್ಲ. ಧರಣಿ ಕೈ ಬಿಡುವಂತೆ , ನಮ್ಮ ಜೊತೆ ಚರ್ಚೆ ನಡೆಸುವಂತೆ ಕೋರಿದ್ದೇವೆ. ಹೋರಾಟಗಾರರು ಮಾತ್ರ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯ ಎಲ್ಲೆಡೆ ಭತ್ತ ಕಟಾವು ನಡೆಯುತ್ತಿದೆ. ದಲ್ಲಾಳಿಗಳು ರೈತರ ಜಮೀನಿನಲ್ಲೇ ಭತ್ತ ಖರೀದಿಸುತ್ತಿದ್ದಾರೆ. ರೈತರಿಗೆ ಲಾಭವಾದರೆ ನಮ್ಮ ಅಭ್ಯಂತರವಿಲ್ಲ. ಈಗಾಗಲೇ ಜಿಲ್ಲೆಯಲ್ಲಿ 13 ಕಡೆ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ. ಬಯೋಮೆಟ್ರಿಕ್ ನಲ್ಲಿ ತಾಂತ್ರಿಕ ಸಮಸ್ಯೆಯಿಂದ ಕೆಲವೆಡೆ ವಿಳಂಬವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Follow Us:
Download App:
  • android
  • ios