ಬೆಳಗಾವಿ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ.  ಮೇ 2 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು  ಅಭ್ಯರ್ಥಿಗಳು ಮಾತ್ರ ತಮ್ಮದೇ ಗೆಲುವಿನ ವಿಶ್ವಾಸದಲ್ಲಿದ್ದಾರೆ. 

ಗೋಕಾಕ (ಏ.18): ಬೆಳಗಾವಿ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಇದೇ ವೇಳೆ ಅಭ್ಯರ್ಥಿಗಳು ಹಾಗೂ ಪಕ್ಷಗಳು ತಮ್ಮದೇ ಗೆಲುವಿನ ವಿಶ್ವಾದಲ್ಲಿದ್ದಾರೆ. ಇತ್ತ ಬಿಜೆಪಿ ಮುಖಂಡರು ಗೆಲುವು ತಮ್ಮ ಪಾಳಯಕ್ಕೆ ಎನ್ನುತ್ತಿದ್ದರೆ, ಕೈ ನಾಯಕರು ತಮ್ಮ ಗೆಲುವು ನಿಶ್ಚಿತ ಎನ್ನುವ ಭವಿಷ್ಯ ನುಡಿದಿದ್ದಾರೆ. 

 ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಬೆಳಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. 

ಕರ್ನಾಟಕದ 3 ಕ್ಷೇತ್ರಗಳಿಗೆ ಬೈ ಎಲೆಕ್ಷನ್: ಯಾವ ಕ್ಷೇತ್ರದಲ್ಲಿ ಎಷ್ಟು ಪರ್ಸೆಂಟ್‌ ಮತದಾನ? ..

ರಾಜ್ಯ ಮಟ್ಟದ ನಾಯಕರು, ನನ್ನ ಮಕ್ಕಳು ಇಡೀ ಕ್ಷೇತ್ರದಾದ್ಯಂತ ಸಂಚರಿಸಿ ನನ್ನ ಪರ ಪ್ರಚಾರ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ ಎಂದರು.

ಏಪ್ರಿಲ್ 17 ರಂದು ಮತದಾನ ನಡೆದಿದ್ದು ಮೇ 2 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು ಅಂದು ಸೋಲು ಗೆಲುವಿನ ಮಾಹಿತಿ ಹೊರಬೀಳಲಿದೆ.