ಕಳೆದ ಕೆ.ಆರ್‌.ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಮೂಲಕ ದಾಖಲೆ ಮಾಡಿದ್ದೆವು. ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪಕ್ಷ ಗೆಲುವಿಗೆ ಶ್ರಮಿಸುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

 ಕೆ.ಆರ್.ಪೇಟೆ : ಕಳೆದ ಕೆ.ಆರ್‌.ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಮೂಲಕ ದಾಖಲೆ ಮಾಡಿದ್ದೆವು. ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪಕ್ಷ ಗೆಲುವಿಗೆ ಶ್ರಮಿಸುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪಟ್ಟಣದಲ್ಲಿ ಬಿಜೆಪಿ ಪಕ್ಷದ ಮುಖಂಡರೊಬ್ಬರ ನೂತನ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಕೆ.ಆರ್‌.ಪೇಟೆ ನಮ್ಮ ತಂದೆ ಯಡಿಯೂರಪ್ಪನವರ ಹುಟ್ಟೂರು. ಈ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ. ಕಳೆದ ಬಾರಿ ಒಂದಷ್ಟು ವ್ಯತ್ಯಾಸ ಆಯ್ತು. ಕೇವಲ ಕೆಆರ್‌ಪೇಟೆ ಮಾತ್ರ ಅಲ್ಲ, ರಾಜ್ಯದಲ್ಲಿ ವ್ಯತ್ಯಾಸ ಆಯ್ತು ಎಂದರು.

ಕೆ.ಆರ್.ಪೇಟೆ ನನ್ನ ತಂದೆಯವರ ಜನ್ಮ ಭೂಮಿ. ಇಲ್ಲಿನ ಮಣ್ಣಿನ ಋಣ ನನ್ನ ಮೇಲಿದೆ. ಮಂಡ್ಯ ಜಿಲ್ಲೆಯಲ್ಲಿ ಅಂದು ಬಿಜೆಪಿ ಗೆಲುವಿದೆ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ಪಕ್ಷ ಸಂಘಟನೆಗೆ ನೆರವಾಗಿದ್ದು ಮುಂದೆಯೂ ಇದು ಮುಂದುವರಿಯಲಿದೆ ಎಂದರು.

ಭಾರತ ಗೆಲುವಿಗೆ ಶುಭಕೋರಿದ ವಿಜಯೇಂದ್ರ:

ಇಂದು ಭಾರತ‌ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯ ನಡೆಯಲಿದೆ. ಕೋಟಿ ಕೋಟಿ ಭಾರತೀಯರು ದೇಶ ಗೆಲ್ಲಲು ಶುಭಕೋರುತ್ತಿದ್ದಾರೆ. ಭಾರತದ ಗೆಲುವಿನ ನಗೆ ಮೂಲಕ ಜನರಲ್ಲಿ ನಗೆ ಬೀರಬೇಕು. ಭಾರತ ಗೆದ್ದು ಬರಲಿ ಎಂದು ನಾನು ಶುಭಕೋರುತ್ತೇನೆ ಎಂದರು.

ಈ ವೇಳೆ ಹಾಸನದ ಮಾಜಿ ಶಾಸಕ ಪ್ರೀತಂಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್, ಜಿಲ್ಲಾ ಬಿಜೆಪಿ ಮುಖಂಡರಾದ ಇಂದ್ರೇಶ್, ಸಚ್ಚಿದಾನಂದ, ತಾಲೂಕು ಮುಖಂಡರಾದ ಸಿಂಧಘಟ್ಟ ಅರವಿಂದ್, ಶಿಳನೆರೆ ಭರತ್, ಬಸ್ ಕೆ.ಎಸ್.ಸಂತೋಷ್ ಕುಮಾರ್ ಸೇರಿದಂತೆ ಹಲವರಿದ್ದರು.

ನಾನು ವಿಜಯೇಂದ್ರ ಜೋಡೆತ್ತುಗಳು

ಬೆಂಗಳೂರು (ನ.18): ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾವೆಲ್ಲ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು ಎಂದು ಬಿಜೆಪಿಯ ಶಾಸಕಾಂಗ ಪಕ್ಷದ ನೂತನ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಪಕ್ಷದ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನಾನು ಜೋಡೆತ್ತು ರೀತಿ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಸಂಘಟನೆ ಬಲಪಡಿಸುತ್ತೇವೆ ಎಂದೂ ಅವರು ತಿಳಿಸಿದ್ದಾರೆ. ಶುಕ್ರವಾರ ಸಂಜೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ವಿರೋಧ ಪಕ್ಷದ ಅಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಅವರು ಮಾತನಾಡಿದರು. 

ನಾನು ಬಿಜೆಪಿಯಲ್ಲಿ 45 ವರ್ಷ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಈದ್ಗಾ ಹೋರಾಟ, ಅಯೋಧ್ಯಾ ಹೋರಾಟ ಸೇರಿದಂತೆ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದೆ. ನನ್ನ 17ನೇ ವಯಸ್ಸಿನಲ್ಲಿ ತುರ್ತು ಪರಿಸ್ಥಿತಿ ವೇಳೆ ಇಂದಿರಾ ಗಾಂಧಿ ವಿರುದ್ಧ ಹೋರಾಟ ಮಾಡಿ ಒಂದು ತಿಂಗಳು ಜೈಲುವಾಸ ಅನುಭವಿಸಿದ್ದೆ. ಬಿಜೆಪಿ ಪಕ್ಷ ಹಾಗೂ ಪಕ್ಷದ ಹಿರಿಯರು ನನ್ನ ಮೇಲೆ ವಿಶ್ವಾಸವಿಟ್ಟು ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನೀಡಿದ್ದಾರೆ. ಎಲ್ಲರ ಸಹಕಾರ ಪಡೆದು ಮತ್ತೆ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಟ ಮಾಡುವೆ ಎಂದರು.

ಕಾಂಗ್ರೆಸ್‌ ಸೇಡಿನ ರಾಜಕೀಯಕ್ಕೆ ಜಗ್ಗೋಲ್ಲ, ಯಾವ ತನಿಖೆಗೂ ಸಿದ್ಧ: ಎಚ್‌ಡಿಕೆ ಸವಾಲ್‌

ನಮ್ಮ ಮುಂದೆ ಸವಾಲುಗಳಿವೆ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹಕಾರದೊಂದಿಗೆ ನಾವೆಲ್ಲ ಮುನ್ನಡೆಯಬೇಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನನಗೆ ಮುಂದೆ ಬಹಳ ಸವಾಲುಗಳಿವೆ. ಮುಂಬರುವ ಲೋಕಸಭಾ ಚುನಾವಣೆ, ಜಿಲ್ಲಾ ಪಂಚಾಯಿತಿ ಚುನಾವಣೆ, ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತಮ ಫಲಿತಾಂಶ ತರುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು. 

28 ಸ್ಥಾನ ಗೆಲ್ಲುವ ಪರಿಸ್ಥಿತಿ ಇದೆ: ರಾಜ್ಯದಲ್ಲಿ ನಾವು ಸೋತಿದ್ದೇವೆ. ಆ ಸೋಲಿನ ಭಯ ಬಿಟ್ಟು ಮತ್ತೆ ಸೂರ್ಯ ಉದಯಿಸುವ ಭರವಸೆಯಲ್ಲಿ ಪಕ್ಷವನ್ನು ಮತ್ತೆ ಅಧೀಕಾರಕ್ಕೆ ತರಲು ಕೆಲಸ ಮಾಡಬೇಕಿದೆ. ಈ ಬಾರಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 23-24 ಸ್ಥಾನ ಗೆಲ್ಲುವ ಪರಿಸ್ಥಿತಿ ಇತ್ತು. ಕಳೆದ ಆರು ತಿಂಗಳಲ್ಲಿ ಕಾಂಗ್ರೆಸ್‌ನ ದುರಾಡಳಿತದಿಂದ ಜನ ಬೇಸರಗೊಂಡಿದ್ದಾರೆ. ಮುಖ್ಯಮಂತ್ರಿ ಪುತ್ರನೇ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಇದನ್ನೆಲ್ಲಾ ಜನ ಗಮನಿಸಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರವೂ ಸೇರಿದಂತೆ 28 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳೇ ಗೆಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.