ಕಳೆದ 2018ರ ವಿಧಾನಸಭಾ ಚುನಾವಣೆ ಹಾಗೂ ಉಪ ಉಪಚುನಾವಣೆಯಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿದ್ದರೂ, ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ಟಿಕೆಟ್‌ ತ್ಯಾಗ ಮಾಡಿದ್ದೇನೆ. ಆದರೆ, ಈ ಬಾರಿ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ ಎಂದು ಮದುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಕೆ. ಮಂಜುನಾಥ್‌ ಹೇಳಿದರು.

ಶಿರಾ : ಕಳೆದ 2018ರ ವಿಧಾನಸಭಾ ಚುನಾವಣೆ ಹಾಗೂ ಉಪ ಉಪಚುನಾವಣೆಯಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿದ್ದರೂ, ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ಟಿಕೆಟ್‌ ತ್ಯಾಗ ಮಾಡಿದ್ದೇನೆ. ಆದರೆ, ಈ ಬಾರಿ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ ಎಂದು ಮದುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಕೆ. ಮಂಜುನಾಥ್‌ ಹೇಳಿದರು.

ಪ್ರತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ವರಿಷ್ಠರು ನನಗೆ ಟಿಕೆಟ್‌ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಚುನಾವಣೆಯಲ್ಲಿ ಎಸ್‌ ಆರ್‌ ಗೌಡ ಅವರಿಗೆ ಪಕ್ಷದಿಂದ ಟಿಕೆಟ್‌ ನೀಡಲಾಗಿತ್ತು, ಆಗ ನಾನು, ಪಕ್ಷ ವಿರೋಧಿ ಚಟುವಟಿಕೆ ಮಾಡದೆ ತಟಸ್ಥನಾಗಿದ್ದೆ. ನಂತರ ನಡೆದ ಉಪ ಉಪಚುನಾವಣೆಯಲ್ಲಿಯೂ ಟಿಕೆಟ್‌ ಆಕಾಂಕ್ಷಿಯಾಗಿದ್ದೆ. ಪಕ್ಷ ಡಾ. ಸಿಎಂ ರಾಜೇಶ್‌ಗೌಡ ಅವರಿಗೆ ಟಿಕೆಟ್‌ ನೀಡಿತು. ಆಗಲೂ ನಾನು, ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ. ಡಾ.ಸಿ.ಎಂ.ರಾಜೇಶ್‌ಗೌಡ ಅವರ ಗೆಲುವಿಗೆ ಶ್ರಮಿಸಿದ್ದೇನೆ. ಈ ಬಾರಿ ನಾನು ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ವರಿಷ್ಠರಿಗೂ ನನ್ನ ಮನವಿಯನ್ನು ಸಲ್ಲಿಸಿದ್ದೇನೆ. ಪಕ್ಷದ ವರಿಷ್ಠರು ಸಮೀಕ್ಷೆ ಮಾಡಿ, ಟಿಕೆಟ್‌ ನೀಡುವುದಾಗಿ ತಿಳಿಸಿದ್ದಾರೆ. ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದರು.

ಮೂರು ಕ್ಷೇತ್ರಗಳಾದ ಮಧುಗಿರಿ, ಪಾವಗಡ, ಕೊರಟಗೆರೆಯಲ್ಲಿ ಬಿಜೆಪಿ ಒಮ್ಮೆಯೂ ವಿಜಯ ಸಾಧಿಸಿಲ್ಲ. ಬಿಜೆಪಿ ಬೂತ್‌ ಅಭಿಯಾನ, ವಿಜಯ ಸಂಕಲ್ಪ ಅಭಿಯಾನಗಳ ಮೂಲಕ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಿಳಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.

ನಾನು, ಬಿಜೆಪಿ ಶಿಸ್ತಿನ ಕಾರ್ಯಕರ್ತ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್‌ ಪ್ರಬಲ ಆಕಾಂಕ್ಷಿಯಾಗಿದ್ದೆನೆ. ಆದರೆ, ಪಕ್ಷ ಯಾರಿಗೆ ಟಿಕೆಟ್‌ ನೀಡಿದರೂ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಆದರೆ, ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಮಾತ್ರ ತಟಸ್ಥನಾಗುತ್ತೇನೆ ಎಂದು ಮಂಜುನಾಥ್‌ ಹೇಳಿದರು.

ಓಬಿಸಿ ಮೋರ್ಚಾ ಅಧ್ಯಕ್ಷ ಆರ್‌.ಕೆ. ಶ್ರೀನಿವಾಸ, ನಗರ ಬಿಜೆಪಿ ಅಧ್ಯಕ್ಷ ವಿಜಯರಾಜ್‌, ಗ್ರಾಮಾಂತರ ಅಧ್ಯಕ್ಷ ರಂಗಸ್ವಾಮಿ, ಮಾಜಿ ಅಧ್ಯಕ್ಷ ಸಿ.ಮಾಲಿಮರಿಯಪ್ಪ, ಬಿಜೆಪಿ ಓಬಿಸಿ ಘಟಕದ ಗ್ರಾಮಾಂತರ ಅಧ್ಯಕ್ಷ ಬಿ.ಇ.ಮಲ್ಲಯ್ಯ, ಶಿರಾ ಯೋಜನಾ ಪ್ರಾಧಿಕಾರದ ಸದಸ್ಯ ಕೃಷ್ಣಮೂರ್ತಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ರವಿಕಿರಣ್‌, ಎಪಿಎಂಸಿ ಉಪಾಧ್ಯಕ್ಷ ರಾಮರಾಜು, ನಗರಸಭಾ ಮಾಜಿ ಸದಸ್ಯ ಪ್ರಕಾಶ್‌ ಮುದ್ದುರಾಜ್‌, ಸಂತೇಪೇಟೆ ನಟರಾಜ್‌, ಮಾಲಿ ಸುರೇಶ್‌, ಮಾಲಿ ಭರತ್‌, ಮುದಿಮಡು ಮಂಜುನಾಥ್‌, ಮಹಿಳಾ ಅಧ್ಯಕ್ಷೆ ಲಲಿತಮ್ಮ, ರತ್ನಮ್ಮ, ಸುಮಾ, ತಿಪ್ಪೇಸ್ವಾಮಿ, ಹುಲಿಕುಂಟೆ ಸಂಪತ್‌, ಕೃಷ್ಣಮೂರ್ತಿ, ಈರಣ್ಣ, ಮದ್ದೆವಳ್ಳಿ ರಾಮಕೃಷ್ಣ, ಮನೋಹರ್‌ ನಾಯಕ್‌, ಕರಿಯಣ್ಣ, ಗೋವಿಂದರಾಜು, ಮಧು, ಧನುಷ್‌, ಮಂಜೇಶ್‌ ಇದ್ದರು.