Bagalkot: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಇನ್ನಿಲ್ಲ

*  ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ವಿಧಿವಶ
*  ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯದ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದ ಸುತಾರ್‌
*  ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದ ಇಬ್ರಾಹಿಂ ಸುತಾರ್ 

Ibrahim Sutar Passes Away at age of 76 in Bagalkot grg

ಬಾಗಲಕೋಟೆ(ಫೆ.05): ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಹೃದಯಾಘಾತದಿಂದ ಇಂದು(ಶನಿವಾರ) ನಿಧನರಾಗಿದ್ದಾರೆ. ಬಾಗಲಕೋಟೆ(Bagalkot) ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಇಂದು ಬೆಳಗ್ಗೆ 6:30ಕ್ಕೆ ಇಬ್ರಾಹಿಂ ಸುತಾರ್ ಇಹಲೋಕ ತ್ಯಜಿಸಿದ್ದಾರೆ(Passed Away).

ಕಳೆದ ಮೂರ್ನಾಲ್ಕು ದಿನಗಳಿಂದ ಇಬ್ರಾಹಿಂ ಸುತಾರ್(Ibrahim Sutar) ಹೃದಯದ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ(Heart Attack). ತಕ್ಷಣ ಆಸ್ಪತ್ರೆಗೆ ಇಬ್ರಾಹಿಂ ಸುತಾರ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ. ಸುತಾರ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 

Ibrahim Sutar Passes Away at age of 76 in Bagalkot grg

Bagalkot: ಹಿರಿಯ ಕಾಂಗ್ರೆಸ್ಸಿಗ ಎಚ್‌.ಬಿ.ಪಾಟೀಲ ನಿಧನ

ಇಬ್ರಾಹಿಂ ಸುತಾರ್ ಅವರು ನಾಡಿನೆಲ್ಲೆಡೆ ಪ್ರವಚನ ನೀಡಿ ಭಾವೈಕ್ಯತೆ ಸಂದೇಶ ಸಾರಿ ಹೆಸರು ವಾಸಿಯಾಗಿದ್ದರು. ಹಿಂದೂ ಮುಸ್ಲಿಂ ಭಾವೈಕ್ಯತೆ ಶ್ರೇಷ್ಠ ಪ್ರವಚಕ, ಸೂಫಿ ಸಂತರಾಗಿದ್ದ ಸುತಾರ್‌ಗೆ ಪದ್ಮಶ್ರೀ(Padma Shri), ರಾಜ್ಯೋತ್ಸವ ಪ್ರಶಸ್ತಿ, ಏಷ್ಯಾನೆಟ್‌ ಸುವರ್ಣನ್ಯೂಸ್‌ನ ಅಸಮಾನ್ಯ ಕನ್ನಡಿಗ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. 

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಇಂದು ಸಂಜೆ 5 ಗಂಟೆಗೆ ಇಬ್ರಾಹಿಂ ಸುತಾರ್ ಅವರ ಅಂತ್ಯಕ್ರಿಯೆ(Funeral) ಮಾಡಲು ನಿರ್ಧರಿಸಲಾಗಿದೆ ಅಂತ ಇಬ್ರಾಹಿಂ ಸುತಾರ್ ಪುತ್ರ ಹುಮಾಯೂನ್‌ ಸುತಾರ್ ಏಷಿಯಾನೆಟ್ ಸುವರ್ಣನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.  

ಸಕಲ ಸರ್ಕಾರಿ ಗೌರವದೊಂದಿಗೆ ಸುತಾರ್ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇಬ್ರಾಹಿಂ ಸುತಾರ್ ಅವರ ಇಚ್ಚೆಯಂತೆ ಅವರ ತೋಟದಲ್ಲೇ ಅಂತ್ಯಕ್ರಿಯೆ ನಡೆಸಲು ಅವರ ಕುಟುಂಬ ನಿರ್ಧರಿಸಿದೆ. ತೋಟದಲ್ಲೇ ಅಂತ್ಯಕ್ರಿಯೆ ನಡೆಸಬೇಕು ಅಂತ ಪುತ್ರ ಹುಮಾಯೂನ್‌ ಮುಂದೆ ಇಬ್ರಾಹಿಂ ಸುತಾರ್ ತಮ್ಮ ಇಚ್ಛೆ ವ್ಯಕ್ತಪಡಿಸಿದ್ದರಂತೆ.  ಅಂತ್ಯಕ್ರಿಯೆಗೂ ಮುನ್ನ ಮಹಾಲಿಂಗಪೂರ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. 

ಸುತಾರ ನಿಧನಕ್ಕೆ ಗಣ್ಯರ ಸಂತಾಪ

ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಬೊಮ್ಮಾಯಿ, ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರು ಇಂದು ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ‌.

 

ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಶ್ರಮಿಸಿದ ಅವರ ದಿವ್ಯಾತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಅಂತ ಸಂತಾಪ ಸೂಚಿಸಿದ್ದಾರೆ. 
 

ಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕೃತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ ಅಂತ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. 

 

ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಅಂತ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. 
 

Latest Videos
Follow Us:
Download App:
  • android
  • ios