Asianet Suvarna News Asianet Suvarna News

ಬೆಂಗಳೂರಲ್ಲಿ 5 ಕಡೆ ಟೌನ್‌ಶಿಪ್‌, 4 ಕಡೆ ವಿಲ್ಲಾಗೆ ಜಾಗ ಗುರುತಿಸಿ: ಸಚಿವ ಜಮೀರ್‌ ಅಹ್ಮದ್‌

ಟೌನ್‌ಶಿಪ್‌ ನಿರ್ಮಾಣಕ್ಕೆ ತಲಾ ಎರಡು ಸಾವಿರ ಎಕರೆ ಹಾಗೂ ತಲಾ 500 ಎಕರೆಯಲ್ಲಿ ವಿಲ್ಲಾ ಯೋಜನೆ ಕೈಗೆತ್ತಿಕೊಳ್ಳಲು ಯೋಜಿಸಲಾಗಿದೆ. ಈ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕಾಗಿದ್ದು, ಶೀಘ್ರದಲ್ಲೇ ರೂಪುರೇಷೆ ಹಾಕಿಕೊಂಡು ಅಧಿಕಾರಿಗಳ ಪ್ರತ್ಯೇಕ ವಿಭಾಗ ರಚನೆ ಮಾಡಿ ಕಾರ್ಯಪ್ರವೃತ್ತರಾಗುವಂತೆ ಆದೇಶಿಸಿದ ವಸತಿ ಸಚಿವ ಜಮೀರ್‌ ಅಹ್ಮದ್‌ಖಾನ್‌

Identify Land for Township and Villa in Bengaluru Says Zameer Ahmed Khan grg
Author
First Published Aug 31, 2023, 5:17 AM IST

ಬೆಂಗಳೂರು(ಆ.31): ರಾಜಧಾನಿ ಬೆಂಗಳೂರಿನ ಐದು ಕಡೆ ಟೌನ್‌ಶಿಪ್‌ ಹಾಗೂ ನಾಲ್ಕು ಕಡೆ ವಿಲ್ಲಾ ಯೋಜನೆಗೆ ಅಗತ್ಯವಾದ ಭೂಮಿ ಗುರುತಿಸುವ ಕಾರ್ಯವನ್ನು ತಕ್ಷಣವೇ ಆರಂಭಿಸುವಂತೆ ಸುವಂತೆ ವಸತಿ ಸಚಿವ ಜಮೀರ್‌ ಅಹ್ಮದ್‌ಖಾನ್‌ ಅವರು ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ಗೃಹಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಟೌನ್‌ಶಿಪ್‌ ನಿರ್ಮಾಣಕ್ಕೆ ತಲಾ ಎರಡು ಸಾವಿರ ಎಕರೆ ಹಾಗೂ ತಲಾ 500 ಎಕರೆಯಲ್ಲಿ ವಿಲ್ಲಾ ಯೋಜನೆ ಕೈಗೆತ್ತಿಕೊಳ್ಳಲು ಯೋಜಿಸಲಾಗಿದೆ. ಈ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕಾಗಿದ್ದು, ಶೀಘ್ರದಲ್ಲೇ ರೂಪುರೇಷೆ ಹಾಕಿಕೊಂಡು ಅಧಿಕಾರಿಗಳ ಪ್ರತ್ಯೇಕ ವಿಭಾಗ ರಚನೆ ಮಾಡಿ ಕಾರ್ಯಪ್ರವೃತ್ತರಾಗುವಂತೆ ಆದೇಶಿಸಿದರು.

ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ; ಸಚಿವ ಜಮೀರ್‌ ಅಹಮದ್‌ ಖಾನ್‌ ಸೂಚನೆ

ಬೆಂಗಳೂರಿನಲ್ಲಿ ಮೆಟ್ರೋ ಸೇರಿದಂತೆ ಸಾರಿಗೆ ಮತ್ತು ಮೂಲಸೌಕರ್ಯ ವ್ಯವಸ್ಥೆ ಲಭ್ಯವಿರುವ ನಾಲ್ಕು ಕಡೆಗಳಲ್ಲಿ ಭೂಮಿ ಗುರುತಿಸಿ 50:50 ಅನುಪಾತದಲ್ಲಿ ಭೂಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ಬಡಾವಣೆ ನಿರ್ಮಾಣ ಕಾರ್ಯಕ್ಕೆ ವೇಗ ನೀಡಬೇಕು. ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಹೊರತುಪಡಿಸಿ ಇತರೆ ಕಡೆ ಬಿಪಿಲ್‌ ಕುಟುಂಬಗಳಿಗೆ ರಿಯಾಯಿತಿ ದರದಲ್ಲಿ ನಿವೇಶನ ಅಥವಾ ಮನೆ ನಿರ್ಮಿಸಿಕೊಡುವ ಯೋಜನೆ ರೂಪಿಸಬೇಕು ಎಂಬ ಚಿಂತನೆ ಇದೆ. ಈ ಬಗ್ಗೆ ಸಾಧಕ ಬಾಧಕ ಅಧ್ಯಯನ ಮಾಡಿ ವರದಿ ಕೊಡಿ ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು.

ಸರ್ಕಾರಿ ಜಮೀನಿನಲ್ಲಿ ಬಡಾವಣೆ ಅಭಿವೃದ್ಧಿ ಪಡಿಸುವುದು ಅಥವಾ ಭೂಮಾಲೀಕರಿಂದ 50:50 ಅನುಪಾತದಲ್ಲಿ ಭೂಮಿ ಪಡೆದು ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ಕುರಿತು ಪ್ರಸ್ತಾವನೆ ಸಿದ್ದಪಡಿಸಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುತ್ತೇನೆ. ಹಾಗೆಯೇ ಅಧಿಕಾರಿಗಳು ಜಮೀನು ಸ್ವಾಧೀನ ಸೇರಿದಂತೆ ನ್ಯಾಯಾಲಯದಲ್ಲಿರುವ 122 ವ್ಯಾಜ್ಯ ಇತ್ಯರ್ಥಕ್ಕಾಗಿ ಅದಾಲತ್‌ ಮಾದರಿಯಲ್ಲಿ ಅರ್ಜಿದಾರರ ಜತೆ ಸಂಧಾನ ಸಭೆ ಏರ್ಪಡಿಸಬೇಕೆಂದು ಸೂಚಿಸಿದರು.

ಅಕ್ರಮ ಮರಳು ಸಾಗಾಟ, ಮಟ್ಕಾ ದಂಧೆಗೆ ಬ್ರೆಕ್‌ ಹಾಕಿ: ಸಚಿವ ಜಮೀರ್‌ ಅಹ್ಮದ್‌

ಇದೇ ವೇಳೆ ರಾಜ್ಯದಲ್ಲಿ ಅನುಷ್ಠಾನದಲ್ಲಿರುವ ಗೃಹ ಮಂಡಳಿ ಯೋಜನೆಗಳು, ಅದರ ಸ್ಥಿತಿಗತಿ, ಲಭ್ಯ ಇರುವ ಜಮೀನು, ನ್ಯಾಯಾಲಯದಲ್ಲಿರುವ ಪ್ರಕರಣ ಕುರಿತು ಸಮಗ್ರ ವರದಿ ನೀಡುವಂತೆ ತಿಳಿಸಿದರು. ರಾಜೀವ್‌ ಗಾಂಧಿ ವಸತಿ ನಿಗಮದ ಯೋಜನೆಗಳ ಸ್ಥಿತಿಗತಿ ಕುರಿತು ಇದೇ ವೇಳೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್‌ ರಾಜ್‌ ಸಿಂಗ್‌, ಗೃಹ ಮಂಡಳಿ ಆಯುಕ್ತರಾದ ಕವಿತಾ ಮನ್ನಿ ಕೇರಿ, ಪ್ರಧಾನ ಅಭಿಯಂತರ ಶರಣಪ್ಪ, ರಾಜೀವ್‌ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸುಶೀಲಮ್ಮ ಉಪಸ್ಥಿತರಿದ್ದರು.

Follow Us:
Download App:
  • android
  • ios