ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ಜೊತೆಗೆ, ಸ್ಥಗಿತಗೊಂಡಿರುವ ಹಲವು ರೈತಪರ ಯೋಜನೆಗಳನ್ನು ಮತ್ತೆ ಜಾರಿಗೊಳ್ಳಲಿವೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್‌.ಚಲುವರಾಯಸ್ವಾಮಿ ಹೇಳಿದರು.

If Congress comes to power  10 kg of rice will be distributed for free snr

 ನಾಗಮಂಗಲ (ಜ. 06): ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಿಪಿಎಲ್… ಕಾರ್ಡ್‌ದಾರರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ಜೊತೆಗೆ, ಸ್ಥಗಿತಗೊಂಡಿರುವ ಹಲವು ರೈತಪರ ಯೋಜನೆಗಳನ್ನು ಮತ್ತೆ ಜಾರಿಗೊಳ್ಳಲಿವೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್‌.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಗಂಗನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಹೊಣಕೆರೆ ಗ್ರಾಪಂ ವ್ಯಾಪ್ತಿಯ ಬೂತ್‌ ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು 2023ರ ಚುನಾವಣಾ ಪ್ರಚಾರಸಭೆಯಲ್ಲಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಜನರು ವಿಮರ್ಶೆ ಮಾಡಿ ಮುಂದಿನ ಚುನಾವಣೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ್ದ ಬಿಪಿಎಲ್… ಕಾಡರ್‌ದಾರರಿಗೆ ಉಚಿತವಾಗಿ ತಲಾ 7 ಕೆ.ಜಿ.ಅಕ್ಕಿಯನ್ನು 5 ಕೆ.ಜಿ.ಗೆ ಇಳಿಕೆ ಮಾಡುವ ಜೊತೆಗೆ ರೈತರ ಕೃಷಿ ಹೊಂಡ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ… ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕಿಡಿಕಾರಿದರು.

ಗ್ರಾಮೀಣ ಪ್ರದೇಶದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಬದಲಿಗೆ ತಡರಾತ್ರಿ ಸಮಯದಲ್ಲಿ ಕೇವಲ 3 ಗಂಟೆ ಕಾಲ ಮೂರು ಪೇಸ್‌ ವಿದ್ಯುತ್‌ ನೀಡುತ್ತಿದ್ದು ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಇದರ ಬಗ್ಗೆ ಜಿಲ್ಲೆಯ ಸಚಿವ, ಶಾಸಕರು ಮಾತನಾಡುತ್ತಿಲ್ಲ ಎಂದು ದೂರಿದರು.

ಸರ್ಕಾರ ಯಾವುದೇ ಇರಲಿ ಶಾಸಕರಾದವರು ತಮ್ಮ ಜವಾಬ್ದಾರಿ ಅರಿತು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು. ಆದರೆ, ಇಚ್ಛಾಶಕ್ತಿಯಿಲ್ಲದವರು ಇಲ್ಲಸಲ್ಲದ ನೆಪ ಹೇಳಿ ಜನರಿಗೆ ಮಂಕುಬೂದಿ ಎರಚುವ ಕೆಲಸ ಮಾಡುತ್ತಾರೆ ಎಂದು ಪರೋಕ್ಷವಾಗಿ ಶಾಸಕ ಸುರೇಶ್‌ಗೌಡರ ಆಡಳಿತ ವೈಫಲ್ಯವನ್ನು ಟೀಕಿಸಿದರು.

ಗ್ರಾಮಕ್ಕೆ ಆಗಮಿಸಿದ ಚಲುವರಾಯಸ್ವಾಮಿ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಜೆಸಿಬಿ ಯಂತ್ರಗಳ ಮೂಲಕ ಹೂಮಳೆ ಸುರಿಸಿ ಬೃಹತ್‌ ಪಟಾಕಿ ಸಿಡಿಸಿ ಜಯಘೋಷದೊಂದಿಗೆ ಅದ್ದೂರಿ ಸ್ವಾಗತ ಕೋರಿದರು. ನಂತರ ಗ್ರಾಮದ ಮತ್ತು ಬೆಂಗಳೂರಿನ ನಿವಾಸಿಗಳು ಮೈಸೂರು ಪೇಟತೊಡಿಸಿ ಬೃಹತ್‌ ಹಾರ ಹಾಕಿ ಸನ್ಮಾನಿಸಿದರು.

ಈ ವೇಳೆ ಜಿಪಂ ಮಾಜಿ ಸದಸ್ಯ ಎಂ.ಪ್ರಸನ್ನ, ಎಪಿಎಂಸಿ ಮಾಜಿ ಅಧ್ಯಕ್ಷ ಗಂಗನಹಳ್ಳಿ ಕೃಷ್ಣೇಗೌಡ, ಹೊಣಕೆರೆ ಗ್ರಾಪಂ ಮಾಜಿ ಅಧ್ಯಕ್ಷ ರಾಜಕುಮಾರ್‌, ಟಿಎಪಿಸಿಎಂಎಸ್‌ ಅಧ್ಯಕ್ಷ ಅಲ್ಪಹಳ್ಳಿ ಡಿ.ಕೃಷ್ಣೇಗೌಡ, ತಾಪಂ ಮಾಜಿ ಅಧ್ಯಕ್ಷ ಆರ್‌.ಕೃಷ್ಣೇಗೌಡ, ಮುಖಂಡರಾದ ಸುನೀಲ್‌ ಲಕ್ಷ್ಮೀಕಾಂತ್‌, ಚಿಣ್ಯ ವೆಂಕಟೇಶ…, ವೆಂಕಟರಾಮು, ತಟ್ಟಹಳ್ಳಿ ನರಸಿಂಹಮೂರ್ತಿ, ಕೊಣನೂರು ಹನುಮಂತು, ಗೊಟಕಹಳ್ಳಿ ಕೃಷ್ಣೇಗೌಡ, ಶ್ರೀನಿವಾಸ್‌, ದಾಸೇಗೌಡ, ರಾಮಚಂದ್ರು, ಜಯರಾಮು, ಮರಿಸ್ವಾಮಿ, ಗುಡ್ಡೇನಹಳ್ಳಿ ಕುಮಾರ್‌, ಜವರಪ್ಪ ಸೇರಿದಂತೆ ಹಲವರಿದ್ದರು.

ಚುನಾವಣಾ ಆಯೋಗದಿಂದಲೇ ಉಸ್ತುವಾರಿ

ಬೆಂಗಳೂರು (ಜ.03): ರಾಜ್ಯ ವಿಧಾನಸಭಾ ಚುನಾವಣೆಗೆ ಪೂರ್ವ ತಯಾರಿ ಜೋರಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪವಾಗಿದೆ ಅನ್ನೋ ಕಾರಣಕ್ಕೆ ಕುತೂಹಲದ ಕೇಂದ್ರವಾಗಿರುವ ರಾಜ್ಯ ಚುನಾವಣಾ ಅಯೋಗ ಬಿರುಸಿನಿಂದ ಚುನಾವಣಾ ತಯಾರಿ ನಡೆಸುತ್ತಿದೆ. ಯಾವುದೇ ಅನುಮಾನಕ್ಕೆ ಅವಕಾಶವಾಗದಂತೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯದಲ್ಲಿ ಠಿಕಾಣಿ ಹಾಕಿದ್ದು, ಪೂರ್ವತಯಾರಿ ಮುಂದುವರಿಸಿದ್ದಾರೆ. 

ಕೇಂದ್ರ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ  ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಚುನಾವಣಾ ಪೂರ್ವ ತಯಾರಿ ನಡೆಸಿದರು. ಸೋಮವಾರ  ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ  ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರದ ಅಧಿಕಾರಿಗಳು, ಮಂಗಳವಾರದಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳ ಜೊತೆಗೆ ವರ್ಚ್ಯುಯಲ್ ಮೂಲಕ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡರು. 

ಮತದಾರರ ಪಟ್ಟಿಯಲ್ಲಿ ಡಬಲ್ ಎಂಟ್ರಿ ಮಾಡಿದಲ್ಲಿ ಜೈಲು ಶಿಕ್ಷೆ- ಕಲಬುರಗಿ ಡಿಸಿ ಎಚ್ಚರಿಕೆ

ಸಭೆಯಲ್ಲಿ ಮುಖ್ಯವಾಗಿ ಇದೇ ತಿಂಗಳು ಪ್ರಕಟವಾಗಲಿರುವ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಚರ್ಚಿಲಾಯಿತು. ಅದರಲ್ಲೂ ಮುಖ್ಯವಾಗಿ ಅಂತಿಮ ಮತದಾರರ ಪಟ್ಟಿ ತಯಾರಿಕೆಯಲ್ಲಿ ಮೃತ ಪಟ್ಟವರ ಹೆಸರುಗಳನ್ನು ತೆಗೆದು ಹಾಕುವುದು, ವಿಳಾಸ ಬದಲಾದವರ ಹೆಸರುಗಳ ವರ್ಗಾವಣೆ ಮತ್ತು ಹೊಸ ಯುವ ಮತದಾರರ ಹೆಸರುಗಳ ಸೇರ್ಪಡೆ ಕುರಿತಂತೆ ಅನುಸರಿಸಬೇಕಾದ ವಿಧಾನಗಳ ಕುರಿತು ಹೆಚ್ಚು ಒತ್ತು ನೀಡುವಂತೆ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಮತದಾರರ ಪರಿಷ್ಕರಣೆ ಸಂಬಂಧ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಎಚ್ಚರಿಕೆಯ ಕ್ರಮದತ್ತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

Latest Videos
Follow Us:
Download App:
  • android
  • ios