ಕಾಂಗ್ರೆಸ್‌ಗೆ ನೈತಿಕತೆ ಇದ್ದರೆ ಸಿದ್ದರಾಮಯ್ಯರ ರಾಜೀನಾಮೆ ಪಡೆಯಲಿ: ಯಶ್ಪಾಲ್ ಸುವರ್ಣ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಸಿದ್ದರಾಮಯ್ಯ ಇಂತಹ ಪರಿಸ್ಥಿತಿಯಲ್ಲಿಯೂ ಅಧಿಕಾರದ ಆಸೆಯಿಂದ ರಾಜೀನಾಮೆ ನೀಡದೆ ಭಂಡತನ ಪ್ರದರ್ಶನ ಮಾಡಲು ಮುಂದಾದರೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ
ಉಡುಪಿ(ಸೆ.25): ಕಾಂಗ್ರೆಸ್ ಪಕ್ಷಕ್ಕೆ ದೇಶದ ಸಂವಿಧಾನ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಿಂಚಿತ್ ಗೌರವ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇದ್ದರೆ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲಿ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸವಾಲು ಹಾಕಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಸಿದ್ದರಾಮಯ್ಯ ಇಂತಹ ಪರಿಸ್ಥಿತಿಯಲ್ಲಿಯೂ ಅಧಿಕಾರದ ಆಸೆಯಿಂದ ರಾಜೀನಾಮೆ ನೀಡದೆ ಭಂಡತನ ಪ್ರದರ್ಶನ ಮಾಡಲು ಮುಂದಾದರೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ.
ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ: ರಾಜೀವ್ ಚಂದ್ರಶೇಖರ್ ಒತ್ತಾಯ
ಹಿಂದೆ ರಾಜ್ಯಪಾಲರ ಆದೇಶವನ್ನೇ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ್ದರು. ಇದೀಗ ಹೈಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ. ಆದ್ದರಿಂದ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಆಗ್ರಹಿಸಿರುವ ಯಶ್ಪಾಲ್ ಸುವರ್ಣ, ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯದಿದ್ದಲ್ಲಿ ಸದಾ ಸಂವಿಧಾನ, ನ್ಯಾಯಾಂಗ, ಭ್ರಷ್ಟಾಚಾರ ನಿಯಂತ್ರಣದ ಬಗ್ಗೆ ಭಾಷಣ ಮಾಡುವ ಪಕ್ಷದ ನಕಲಿ ಮುಖವಾಡ ಜನತೆಯ ಮುಂದೆ ಕಳಚಿ ಬೀಳಲಿದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.