ಹೊರ ರಾಜ್ಯದಿಂದ ಬಂದು ಮಾಹಿತಿ ನೀಡದಿದ್ದಲ್ಲಿ ಕ್ರಿಮಿನಲ್ ಕೇಸ್
ಅನಾವಶ್ಯಕವಾಗಿ ಓಡಾಡಿದವರ ವಿರುದ್ಧ, ಹೊರ ರಾಜ್ಯದಿಂದ ಬಂದು ಮಾಹಿತಿ ನೀಡದೇ ಇರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ ಸ್ಪಷ್ಟಪಡಿಸಿದ್ದಾರೆ.
ಕಾರವಾರ(ಮೇ 20): ಅನಾವಶ್ಯಕವಾಗಿ ಓಡಾಡಿದವರ ವಿರುದ್ಧ, ಹೊರ ರಾಜ್ಯದಿಂದ ಬಂದು ಮಾಹಿತಿ ನೀಡದೇ ಇರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ ಸ್ಪಷ್ಟಪಡಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ವರೆಗೆ ಕಫä್ರ್ಯ ವಿಧಿಸಿದೆ. ಜಿಲ್ಲೆಯಲ್ಲಿ ಒಂದು ಗಂಟೆ ಕಡಿತಗೊಳಿಸಲಾಗಿದ್ದು, ಸಂಜೆ 6 ಗಂಟೆಗೆ ಎಲ್ಲ ರೀತಿಯ ಅಂಗಡಿಗಳನ್ನು ಬಂದ್ ಮಾಡಬೇಕು. ಕಫä್ರ್ಯ ಅವಧಿಯಲ್ಲಿ ಅನಾವಶ್ಯಕವಾಗಿ ಯಾರೂ ಓಡಾಡಬಾರದು. ಜತೆಗೆ ಹೊರ ರಾಜ್ಯದಿಂದ ಬಂದವರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಮಾಹಿತಿ ನೀಡದೇ ಇದ್ದಲ್ಲಿ, ಸುಳ್ಳು ಮಾಹಿತಿ ನೀಡಿದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲೆಗಳ ನಡುವೆ ಪಾಸ್ ಅನಗತ್ಯ:
ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ಅವಧಿಯಲ್ಲಿ ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಕೋವಿಡ್ -19 ನಿಯಂತ್ರಣಕ್ಕೆ ಜನರ ಸಹಕಾರ ಅತ್ಯಂತ ಮುಖ್ಯವಾಗಿದೆ. ಈ ವೇಳೆಯಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಹೊರ ರಾಜ್ಯದಿಂದ ಬರುವವರು ಸೇವಾ ಸಿಂಧು ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡು ಪಾಸ್ ಪಡೆದೇ ಬರಬೇಕು. ಅನುಮತಿ ಇಲ್ಲದಿದ್ದಲ್ಲಿ ಜಿಲ್ಲೆಯ ಒಳಕ್ಕೆ ಪ್ರವೇಶ ನೀಡುವುದಿಲ್ಲ. ಹೊರ ರಾಜ್ಯದಿಂದ ಬಂದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಹೊರ ಜಿಲ್ಲೆಗಳಿಂದ ಬರಲು ಪಾಸ್ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಡಾಕ್ಟರ್‌ಗೆ ಪಾಸಿಟಿವ್: ಮೂಡಿಗೆರೆಯ ಜನರಲ್ಲಿ ಭಯದ ವಾತಾವರಣ
ಕೋವಿಡ್ -19 ಸಂಬಂಧ ಮುಂದಿನ ದಿನದಲ್ಲಿ ತೀರಾ ಅವಶ್ಯಕತೆ ಇದ್ದವರಿಗೆ ಮಾತ್ರ ಜಿಲ್ಲಾ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲಾಗುತ್ತದೆ. ಉಳಿದಂತೆ ಆಯಾ ತಾಲೂಕು ಕೇಂದ್ರದಲ್ಲಿ ನಿಗದಿಪಡಿಸಿದ ಕಡೆಗಳಲ್ಲಿ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜು, ಇಂತಹ ಸಂದರ್ಭದಲ್ಲಿ ಜನರು ತಮಗೆ ತಾವೇ ಚೌಕಟ್ಟು ಹಾಕಿಕೊಳ್ಳಬೇಕು. ಸಂದರ್ಭ ಬಂದರೆ ಡ್ರೋಣ್ ಕ್ಯಾಮೆರಾ ಮೂಲಕ ಜನರ ಚಟುವಟಿಕೆ ನಿಯಂತ್ರಣದಲ್ಲಿ ಇಡುತ್ತೇವೆ. ಕಡಲ ತೀರ ಒಳಗೊಂಡು ವಿವಿಧ ಕಡೆ ಅನಾವಶ್ಯಕವಾಗಿ ತಿರುಗಾಡಿದವರ, ಗುಂಪು ಸೇರಿದವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ರೋಷನ್ ಇದ್ದರು.