'ಬಿಎಸ್‌ವೈ ಕೆಳಗಿಳಿದರೆ ಮಧ್ಯಂತರ ಚುನಾವಣೆ'

  • ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ನಾಯಕತ್ವ ಬದಲಾವಣೆಯಾದರೆ ರಾಜ್ಯ ಸರ್ಕಾರ ಪತನ
  • ವಿಧಾನಸಭೆಗೆ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದ ಮುಖಂಡ
  • ಮಾಜಿ ಕೇಂದ್ರ ಸಚಿವ ಹಾಗೂ ಎಐಸಿಸಿ ವಿಶೇಷ ಆಹ್ವಾನಿತ ಸದಸ್ಯ ಕೆ.ಎಚ್‌. ಮುನಿಯಪ್ಪ ಭವಿಷ್ಯ 
If the leadership change  Karnataka BJP  government will collapse Says muniyappa snr

ಶಿಡ್ಲಘಟ್ಟ (ಜು.23) :  ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ನಾಯಕತ್ವ ಬದಲಾವಣೆಯಾದರೆ ರಾಜ್ಯ ಸರ್ಕಾರ ಪತನವಾಗಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಎಐಸಿಸಿ ವಿಶೇಷ ಆಹ್ವಾನಿತ ಸದಸ್ಯ ಕೆ.ಎಚ್‌. ಮುನಿಯಪ್ಪ ಭವಿಷ್ಯ ನುಡಿದರು.

ತಾಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಅವರ ಪಕ್ಷದವರೇ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಆಡಳಿತ ಸಂಪೂರ್ಣ ಕುಸಿತ

ರಾಜ್ಯದಲ್ಲಿ ಬಿಎಸ್‌ವೈ ನೇತೃತ್ವದ ಸರ್ಕಾರ ಜನರ ಕಲ್ಯಾಣಕ್ಕಾಗಿ ಯಾವುದೇ ವಿಶೇಷ ಯೋಜನೆಗಳನ್ನು ರೂಪಿಸಿಲ್ಲ. ಜೊತೆಗೆ ಆಡಳಿತ ಸಂಪೂರ್ಣವಾಗಿ ಕುಸಿದಿದ್ದು, ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಿ ಕೈಲಾದಷ್ಟುಸೇವೆಯನ್ನು ಕಾಂಗ್ರೆಸ್‌ ಮುಖಂಡರು ಮತ್ತು ಶಾಸಕರು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ಒಪ್ಪಂದದಂತೆ ಬಿಎಸ್ವೈ ರಾಜೀನಾಮೆ : ಶ್ರೀನಿವಾಸಪ್ರಸಾದ್ ಸ್ಫೋಟಕ ಹೇಳಿಕೆ

ಪಕ್ಷ ಸೂಚಿಸಿದರೆ ಸ್ಪರ್ಧೆ

ಕಾಂಗ್ರೆಸ್‌ನಲ್ಲಿ ಯಾರನ್ನೇ ಆಗಲಿ ಮುಖ್ಯಮಂತ್ರಿಳ ಸ್ಥಾನಕ್ಕೆ ಆಯ್ಕೆ ಮಾಡುವುದಿಲ್ಲ. ಪಕ್ಷಕ್ಕೆ ಸ್ಪಷ್ಟಬಹುಮತ ಬಂದರೆ ಪಕ್ಷದ ಶಾಸಕಾಂಗ ಸಭೆಯಲ್ಲಿ ನಾಯರನ್ನು ಆಯ್ಕೆ ಮಾಡಿ ಹೈಕಮಾಂಡ್‌ಗೆ ತಿಳಿಸಲಾಗುವುದು. ವರಿಷ್ಟರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ತಾವು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯುಲ್ಲ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುಳಬಾಗಿಲ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನಿಸಿಲ್ಲ. ಪಕ್ಷದ ವರಿಷ್ಠರು ಸೂಚನೆ ನೀಡಿದರೆ ಸ್ಪರ್ಧಿಸುತ್ತೇನೆ ಎಂದರು.

ಚಿಂತಾಮಣಿಯ ಮಾಜಿ ಶಾಸಕ ಡಾ.ಎಂ.ಸಿ ಸುಧಾಕರ್‌ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮುನಿಯಪ್ಪ, ರಾಜ್ಯದಲ್ಲಿ ಪಕ್ಷ ಬಲವರ್ಧನೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ನಾಯಕರು ಕೈಗೊಳ್ಳುವ ನಿರ್ಧಾರಕ್ಕೆ ತಾವು ಬದ್ದ ಎಂದರು.

Latest Videos
Follow Us:
Download App:
  • android
  • ios