ಉಡುಪಿ(ಡಿ.09): ಉಪಚುನಾವಣೆ ಗೆಲುವು ನಮಗೆ ಖುಷಿ ತಂದಿದೆ. ಇದು ಅಭಿವೃದ್ಧಿ ಮತ್ತು ಅಪಪ್ರಚಾರದ ನಡುವಿನ ಚುನಾವಣೆ ಆಗಿತ್ತು. ಅಸ್ಥಿರ ವ್ಯವಸ್ಥೆ ಹೋಗಿ ಸ್ಥಿರ ಸರಕಾರ ಬಂದಿದೆ. ಮೂರೂವರೆ ವರ್ಷ ಪರಿಣಾಮಕಾರಿ ಆಡಳಿತ ಕೊಡುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಗೆಲುವು ಸಾಧಿಸಿದ್ದಾರೆ. ಜನರ ತೀರ್ಮಾನ ಗೌರವದಿಂದ ಸ್ವೀಕರಿಸಿದ್ದೇವೆ. ಮುಂದೆ ಏನು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಬಿಜೆಪಿಗೆ ಬೆಂಬಲಿಸುವುದಾಗಿ ಶರತ್ ಬಚ್ಚೇಗೌಡ ಹೇಳಿದ್ದಾರೆ. ಈ ಬಗ್ಗೆ ಸಿಎಂ, ರಾಜ್ಯಾಧ್ಯಕ್ಷರು ತೀರ್ಮಾನಿಸುತ್ತಾರೆ ಎಂದಿದ್ದಾರೆ.

'ಕಣ್ಣೀರು ಹಾಕಿದ್ರೆ ಗೆಲುವು ಸಿಗಲ್ಲ', ರಿಸಲ್ಟ್‌ ಬಗ್ಗೆ ಕೋಟ ಮಾತು

ಜೆಡಿಎಸ್ ಶೂನ್ಯ ಸಂಪಾದನೆ ಮಾಡಿದೆ. ಕಣ್ಣೀರು ಹಾಕಿದರೆ, ಕೇಕೆ ಹಾಕಿದರೆ ಗೆಲುವು ಸಿಗಲ್ಲ. ಯಡಿಯೂರಪ್ಪ ಈ ವಯಸ್ಸಿನಲ್ಲಿ ಓಡಾಟ ಮಾಡಿದ ಫಲ ಇದು. ಬಿಜೆಪಿ ಮತ್ತು ಬಿಎಸ್ ವೈ ಟೀಕಿಸುವವರು ಇನ್ನಾದರು ನಮ್ಮ ಶಕ್ತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಉಡುಪಿಯಲ್ಲಿ ಸಚಿವ ಕೋಟ ಹೇಳಿದ್ದಾರೆ.

ಬಿಜೆಪಿ ಮಂತ್ರಿಮಂಡಲದ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಾಕಷ್ಟು ಸಚಿವ ಸ್ಥಾನಗಳು ಖಾಲಿಯಿವೆ. ಮುಖ್ಯಮಂತ್ರಿಗಳ ಬಳಿ ಹಲವು ಖಾತೆಗಳಿವೆ. ಗೆದ್ದು ಬಂದವರಿಗೆ ಅವಕಾಶ ಕೊಡಲು ಸಿಎಂ ಖಾತೆ ಉಳಿಸಿಕೊಂಡಿದ್ದಾರೆ. ಸೂಕ್ಷ್ಮವಾಗಿ, ಪಕ್ಷವನ್ನು ಗಮನದಲ್ಲಿಟ್ಟುಕೊಂಡು ಖಾತೆ ಹಂಚಿಕೆ ಮಾಡುತ್ತಾರೆ. ಕೇಂದ್ರದ ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

ಮಂಡ್ಯದಲ್ಲಿ BJP ಖಾತೆ ತೆರೆದದ್ದೇ ನಮ್ಮ ಗೆಲುವು: ಡಿಸಿಎಂ

ಇಡೀ ಪಕ್ಷವನ್ನು ಒಟ್ಟಾಗಿ ಒಂದಾಗಿ ತೆಗೆದುಕೊಂಡು ಹೋಗುವ ಸಚಿವರ ತಂಡ ರಚನೆಯಾಗುತ್ತದೆ. ರಾಜ್ಯಾಧ್ಯಕ್ಷರು, ಸಿಎಂ , ಹೈಕಮಾಂಡ್ ತೀರ್ಮಾನಕ್ಕೆ ಇಡೀ ರಾಜ್ಯ ಬದ್ಧವಾಗಿರಬೇಕು ಎಂದು ಹೇಳಿದ್ದಾರೆ.

'ಲಕ್ಷ್ಮಿ ಹೆಬ್ಬಾಳ್ಕರ್ ವಿಷಕನ್ಯೆ, ಅವಳಿಂದ ಕಾಂಗ್ರೆಸ್ ಪಕ್ಷ ಹಾಳಾಗಿದೆ'