ಧರ್ಮವನ್ನು ನಾವು ರಕ್ಷಿಸದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ: ಶಾಸಕ ರೇಣುಕಾಚಾರ್ಯ

ಧರ್ಮವನ್ನು ನಾವು ರಕ್ಷಿಸದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ತಾಲೂಕಿನ ಮಾರಿಕೊಪ್ಪ ಗ್ರಾಮದಲ್ಲಿ ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಇಷ್ಟಲಿಂಗ ಪೂಜಾ, ಮೌನಾನುಷ್ಠಾನ ಕಾರ್ಯಕ್ರಮದಲ್ಲಿ ನಡೆದ ಧರ್ಮಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. 

If we do not protect religion religion will protect us says mla mp renukacharya gvd

ಹೊನ್ನಾಳಿ (ಡಿ.26): ಧರ್ಮವನ್ನು ನಾವು ರಕ್ಷಿಸದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ತಾಲೂಕಿನ ಮಾರಿಕೊಪ್ಪ ಗ್ರಾಮದಲ್ಲಿ ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಇಷ್ಟಲಿಂಗ ಪೂಜಾ, ಮೌನಾನುಷ್ಠಾನ ಕಾರ್ಯಕ್ರಮದಲ್ಲಿ ನಡೆದ ಧರ್ಮಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಧರ್ಮದಿಂದ ನಡೆಯುವ ವ್ಯಕ್ತಿಗಳಿಗೆ ಯಾವ ಕಾರಣಕ್ಕೂ ಕಷ್ಟಗಳು ಬರುವುದಿಲ್ಲ, ಬಂದರು ಬಹು ಬೇಗನೆ ಕಷ್ಟಗಳು ದೂರವಾಗಿ ಸುಖ ಕಾಣುತ್ತಾರೆ. ಇದು ಧರ್ಮದ ಸಾರ ಮತ್ತು ಶಕ್ತಿ ಎಂದು ಹೇಳಿದರು.

ಮಾತು ಬೆಳ್ಳಿ ಮೌನ ಬಂಗಾರ ಎನ್ನುವ ನಾಣ್ಣುಡಿಯಂತೆ ಹಿರೇಕಲ್ಮಠ ಶ್ರೀಗಳು ಲೋಕ ಕಲ್ಯಾಣಕ್ಕಾಗಿ ಇಷ್ಟಲಿಂಗ ಪೂಜಾ, ಮೌನಾನುಷ್ಠಾನ ಕಾರ್ಯಕ್ರಮವನ್ನು ಪ್ರತಿ ವರ್ಷ ಚಳಿಗಾಲದಲ್ಲಿ ತಾಲೂಕಿನ ಹಾಗೂ ಇತರ ಜಿಲ್ಲೆಗಳ ಒಂದು ಗ್ರಾಮದಲ್ಲಿ ಹಮ್ಮಿಕೊಂಡು ಧಾರ್ಮಿಕತೆಯನ್ನು ಎತ್ತಿ ಹಿಡಿಯುತ್ತಿದ್ದಾರೆ. ಇದರ ಸದುಪಯೋಗ ಎಲ್ಲರಿಗೂ ತಲುಪಲಿ ಎಂದು ಹೇಳಿದರು. ಎಲ್ಲಾ ಮಠಗಳ ಪೀಠಾಧಿಪತಿಗಳಿಗೆ ಭಕ್ತರೇ ಸಂಪತ್ತು, ಶಕ್ತಿ, ಭಕ್ತರ ಶ್ರಮದಿಂದ ಮಠಗಳು ಅಸ್ತಿತ್ವಕ್ಕೆ ಬಂದು ಅನ್ನ, ಅಕ್ಷರ ದಾಸೋಹ ಸೇರಿದಂತೆ ಇತರ ಕೈಂಕರ್ಯಗಳನ್ನು ನಡೆಸಲಾಗುತ್ತಿದೆ. 

ಗ್ರಾಮ ವಾಸ್ತವ್ಯ ಮೋಜು ಮಸ್ತಿಗಾಗಿ ಮಾಡುತ್ತಿಲ್ಲ: ಶಾಸಕ ರೇಣುಕಾಚಾರ್ಯ

ಮನುಷ್ಯನ ಆರೋಗ್ಯದ ಗುಟ್ಟು ಸಮಯಕ್ಕೆ ಸರಿಯಾದ ವ್ಯಾಯಾಮ, ಕೆಲಸದಿಂದ ದೇಹಕ್ಕೆ ವ್ಯಾಯಾಮ ದೊರೆಯುತ್ತದೆ. ಇತ್ತೀಚಿನ ದಿನಗಳಲ್ಲಿ ಯಾರೂ ಹೊಲ, ಗದ್ದೆಗಳಲ್ಲಿ ಕೆಲಸ ಮಾಡುತ್ತಿಲ್ಲವಾದ್ದರಿಂದ ಸೋಮಾರಿಗಳಾಗುತ್ತಿದ್ದಾರೆ ಇದು ಸಲ್ಲದು. ರಾಜಕಾರಣಿಗಳಿಗೆ, ಅಧಿಕಾರಿಗಳು ಸೇರದಂತೆ ಇತರರಿಗೆ ಅಧಿಕಾರ ಶಾಸ್ವತವಲ್ಲ ಗುರುಗಳ ಶ್ರೀರಕ್ಷೆ ಶಾಶ್ವತ ಎನ್ನುವುದನ್ನು ಗಮದಲ್ಲಿಟ್ಟುಕೊಂಡು ಗುರುಗಳಿಗೆ ಗೌರವ ಕೊಡಬೇಕು ಎಂದರು. ಡಾ. ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯವಹಿಸಿದ್ದರು. ಗೊಲ್ಲರಹಳ್ಳಿ ಮಂಜುನಾಥ ಉಪನ್ಯಾಸ ನೀಡಿದರು.

ವಾಜಪೇಯಿ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಿ: ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕೆಂದು ಸಿ.ಎಂ. ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು. ಹೊನ್ನಾಳಿ ಮಂಡಲದ ವತಿಯಿಂದ ಅಟಲ್‌ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿ ಅವರು ಮಾತನಾಡಿ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಆಜಾತ ಶತ್ರು. ಅವರೊಬ್ಬ ಶ್ರೇಷ್ಟಸಂಸದೀಯ ಪಟು, ವಾಗ್ಮಿ, ಕವಿ, ಉತ್ತಮ ರಾಜಕಾರಣಿ. ಇಂತಹ ಮಹನೀಯರ ಜನ್ಮದಿನ ಆಚರಣೆ ಮಾಡುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ಎಂದರು.

Davanagere: ಗ್ರಾಮ ವಾಸ್ತವ್ಯದಿಂದ ಜನರಿಗೆ ಸೌಲಭ್ಯ: ಶಾಸಕ ರೇಣುಕಾಚಾರ್ಯ

ಅಟಲ್‌ಜೀ ದೇಶಕ್ಕೆ ನೀಡಿದ ಕೊಡುಗೆ ಅಸ್ಮರಣೀಯ, ಅವರ ನಾಯಕತ್ವ ಮತ್ತು ದೂರದೃಷ್ಟಿಲಕ್ಷಾಂತರ ಜನರಿಗೆ ಮಾದರಿಯಾಗಿದೆ. ಅವರು ಜನಸಂಘದ ಕಾಲದಿಂದ ಕೆಲಸ ಮಾಡಿಕೊಂಡು ಬಂದಿದ್ದು, ದೇಶದ ಉದ್ದಗಲಕ್ಕೆ ಪ್ರವಾಸ ಮಾಡಿ ದೇಶವನ್ನು ಅಭಿವೃದ್ಧಿ ಮಾಡಬೇಕೆಂದು ಕನಸು ಕಂಡ ಒಬ್ಬ ಮಹಾನ್‌ ಕನಸುಗಾರ ಎಂದರು. ಅವರು ಸರ್ವಶಿಕ್ಷಣ ಅಭಿಯಾನ ಯೋಜನೆ ಜಾರಿಗೆ ತಂದರು. ರೈತರು, ಸಾಮಾನ್ಯ ಜನರು ನಗರಕ್ಕೆ ಹೋಗಲು ರಸ್ತೆಗಳ ಸುಧಾರಣೆ ಮಾಡಿದರು. ಅಂತಹ ಪುಣ್ಯಾತ್ಮ ನಮ್ಮ ನಡುವೆ ಇಲ್ಲದೇ ಇರಬಹುದು, ಆದರೆ ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ನಾವೆಲ್ಲಾ ಅವುಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

Latest Videos
Follow Us:
Download App:
  • android
  • ios