Asianet Suvarna News Asianet Suvarna News

ಮತ್ತೆ ಹೆಚ್ಚಿದ ಅಕ್ರಮ ಮದ್ಯದ ಹೊಳೆ!

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಟ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಳೆಗಾಲದಲ್ಲಿ ಅಂತೂ ಜಿಲ್ಲೆಯಲ್ಲಿ ಅಕ್ರಮ ಮದ್ಯದ ಹೊಳೆ ಹರಿದಿದ್ದು ಕೇವಲ 2 ತಿಂಗಳಲ್ಲಿ ನೂರಾರು ಅಕ್ರಮ ಮದ್ಯ ಮಾರಾಟ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿರುವುದು ಎದ್ದು ಕಾಣುತ್ತಿದೆ.

  illegal liquor Sale Cases has increased again across Chikkaballapur snr
Author
First Published Oct 7, 2022, 5:08 AM IST

 ಕಾಗತಿ ನಾಗರಾಜಪ್ಪ

  ಚಿಕ್ಕಬಳ್ಳಾಪುರ (ಅ.07):  ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಟ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಳೆಗಾಲದಲ್ಲಿ ಅಂತೂ ಜಿಲ್ಲೆಯಲ್ಲಿ ಅಕ್ರಮ ಮದ್ಯದ ಹೊಳೆ ಹರಿದಿದ್ದು ಕೇವಲ 2 ತಿಂಗಳಲ್ಲಿ ನೂರಾರು ಅಕ್ರಮ ಮದ್ಯ ಮಾರಾಟ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿರುವುದು ಎದ್ದು ಕಾಣುತ್ತಿದೆ.

ಕಳೆದ ಜುಲೈ- ಆಗಸ್ಟ್‌ ತಿಂಗಳಲ್ಲಿ 10 ಕ್ಕೂ ಹೆಚ್ಚು ಅಕ್ರಮ ಮದ್ಯ ಸಾಗಾಟ ಪ್ರಕರಣಗಳು (Case) ದಾಖಲಾದರೆ ಚಿಲ್ಲರೆ, ಡಾಬಾ, ಪೆಟ್ಟಿಗೆ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 120ಕ್ಕೂ ಹೆಚ್ಚು ಪ್ರಕರಣಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ದಾಖಲು ಮಾಡಿ ಅಪಾರ ಪ್ರಮಾಣದ ಮದ್ಯ ವಶಕ್ಕೆ ಪಡೆದಿದ್ದಾರೆ.

ಮಳೆಗಾಲದಲ್ಲಿ ಜಿಲ್ಲಾದ್ಯಂತ (Chikkaballapura ) ಮದ್ಯಕ್ಕೆ ಭಾರೀ ಬೇಡಿಕೆ ಕಂಡು ಬಂದಿದ್ದು ಗ್ರಾಮಾಂತರ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಟ ಹೆಚ್ಚಾಗಿರುವುದು ಕಂಡು ಬಂದಿದೆ. ಜಿಲ್ಲೆಯಲ್ಲಿ ಕೇವಲ 2 ತಿಂಗಳಲ್ಲಿ 132 ಅಕ್ರಮ ಮದ್ಯ ಮಾರಾಟ (Sale)  ಹಾಗೂ ಸಾಗಾರ ಪ್ರಕರಣಗಳನ್ನು ದಾಖಲಿಸಿ ಒಟ್ಟು 108.810 ಲೀಟರ್‌ಮದ್ಯ, 34.33 ಲೀಟರ್‌ ಬಿಯರ್‌, ಹಾಗೂ 2.014 ಕೆಜಿ ಗಾಂಜಾವನ್ನು ಅಬಕಾರಿ ಪೊಲೀಸರು ( Police) ಕಾರ್ಯಾಚರಣೆ ವೇಳೆ ವಶಕ್ಕೆ ಪಡೆದಿದ್ದಾರೆ. ಅಕ್ರಮ ಮದ್ಯ ಹಾಗೂ ಸಾಗಾಟಕ್ಕೆ ಬಳಕೆಯಾದ 9 ವಾಹನಗಳನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದು ಬರೋಬ್ಬರಿ ಒಟ್ಟು 123 ಆರೋಪಿಗಳನ್ನು ದಸ್ತಗಿರಿ ಮಾಡಿರುವುದು ಕಂಡು ಬಂದಿದೆ.

ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲೆಂದು ಅಬಕಾರಿ ಇಲಾಖೆ, ಗ್ರಾಪಂ ಸದಸ್ಯರಿಗೆ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ, ಕಾರ್ಯದರ್ಶಿಗಳಿಗೆ ಕಲಂ, 50 ರಂತೆ ತಿಳುವಳಿಕೆ ಪತ್ರಗಳನ್ನು ನೀಡಿ ಅಬಕಾರಿ ಅಕ್ರಮಗಳ ಬಗ್ಗೆ ನೀಡುವಂತೆ ಸೂಚಿಸಿದೆ. ಜಿಲ್ಲಾದ್ಯಂತ ಆಗಾಗ ದಾಳಿಗಳನ್ನು ನಡೆಸಿ ಅಕ್ರಮ ಮದ್ಯ ಮಾರಾಟ ತಡೆಯಲು ಕ್ರಮ ವಹಿಸುವ ನಿಟ್ಟಿನಲ್ಲಿ 45 ಮಾರ್ಗಗಳನ್ನಾಗಿ ವಿಗಂಡಿಸಿಕೊಂಡಿದ್ದು ಒಟ್ಟು 347 ಪಾಯಿಂಟ್‌ ಬುಕ್‌ಗಳನ್ನು ಇಡಲಾಗಿದೆ. ಅಧಿಕಾರಿಗಳು ಗಸ್ತು ವೇಳೆ ಹಳೇ ಆರೋಪಿಗಳ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರೂ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಟ ಗಣನಿಯ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ದಾಳಿ ನಡೆಸಲು ಸಿಬ್ಬಂದಿ ಕೊರತೆ!

ಕಂದಾಯ ಇಲಾಖೆ ನಂತರ ಸರ್ಕಾರಕ್ಕೆ ಹೆಚ್ಚು ಆದಾಯ ತಂದು ಕೊಡುವ ಅಬಕಾರಿ ಇಲಾಖೆಯಲ್ಲಿ ಅಧಿಕಾರಿ, ಸಿಬ್ಬಂದಿ ಕೊರತೆ ಹೆಚ್ಚಾಗಿದ್ದು, ಜಿಲ್ಲೆಯಲ್ಲಿ ನಡೆಯುವ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಟದ ತಡೆಗೆ ಜಿಲ್ಲೆಯಲ್ಲೂ ಕೂಡ ಅಬಕಾರಿ ಇಲಾಖೆ ಅಗತ್ಯ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಬಗ್ಗೆ ಇತ್ತೀಚೆಗೆ ಸಂಸದರ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆಯಲ್ಲೂ ಕೂಡ ವ್ಯಾಪಕ ಚರ್ಚೆ ನಡೆಸಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಸಂಸದರು ಅಬಕಾರಿ ಇಲಾಖೆಗೆ ಸೂಚಿಸಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು.

ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಲಾಖೆ ಸಾಕಷ್ಟುಕಾರ್ಯಕ್ರಮಗಳನ್ನು ರೂಪಿಸಿದೆ. ಸಿಬ್ಬಂದಿ ಕೊರತೆ ನಡುವೆಯು ಒಂದೊಂದು ತಾಲೂಕಿಗೆ ಜಿಲ್ಲೆಯ ಎಲ್ಲಾ ಸಿಬ್ಬಂದಿಯನ್ನು ಕರೆಸಿಕೊಂಡು ಅಬಕಾರಿ ಅಕ್ರಮಗಳ ತಡೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಆಶಾಲತಾ, ಅಬಕಾರಿ ಉಪ ಆಯುಕ್ತರು, ಚಿಕ್ಕಬಳ್ಳಾಪುರ

  • ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಟ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಳೆಗಾಲದಲ್ಲಿ ಅಂತೂ ಜಿಲ್ಲೆಯಲ್ಲಿ ಅಕ್ರಮ ಮದ್ಯದ ಹೊಳೆ
Follow Us:
Download App:
  • android
  • ios