Asianet Suvarna News Asianet Suvarna News

ಅಕ್ರಮ ಸಾಗಾಟದ 57 ಟನ್‌ ಮರಳು ವಶ

ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಲಕ್ಷಾಂತರ ಮೌಲ್ಯದ 57 ಟನ್‌ ಮರಳನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Illegal Mining 57 Ton sand seized in Mangalore
Author
Bangalore, First Published Aug 1, 2019, 10:42 AM IST
  • Facebook
  • Twitter
  • Whatsapp

ಮಂಗಳೂರು(ಆ.01): ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಲಕ್ಷಾಂತರ ಮೌಲ್ಯದ 57 ಟನ್‌ ಮರಳನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಡ್ಯ ಜಿಲ್ಲೆಯ ವರದಕುಮಾರ್‌ (37), ಬೆಂಗಳೂರು ನಾಗರಬಾವಿ ನಿವಾಸಿ ವಿಠಲ್‌ (38), ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮರಡಿ ನಿವಾಸಿ ಕೇಶವ (25), ಮಂಗಳೂರಿನ ಕಾವೂರು ನಿವಾಸಿ ದಯಾನಂದ (38) ಬಂಧಿತ ಆರೋಪಿಗಳು.

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಲ್ಲಿ ಸಜೀವ ಗುಂಡು ಪತ್ತೆ

ಆರೋಪಿಗಳು ಮಂಗಳೂರು ನಗರದ ಅಡ್ಯಾರ್‌ ಮತ್ತು ಅರ್ಕುಳಬೈಲ್‌ನಿಂದ ಉಡುಪಿ ಮಾರ್ಗವಾಗಿ ಅಕ್ರಮ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಸೊತ್ತನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಮೂರು ಲಾರಿಗಳಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದರು. ಲಾರಿಗಳ ಸಹಿತ 57 ಟನ್‌ ಮರಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಸ್ವಾಧೀನಪಡಿಸಿಕೊಳ್ಳಲಾದ ಸೊತ್ತುಗಳ ಒಟ್ಟು ಮೌಲ್ಯ 25.68 ಲಕ್ಷ ರು. ಎಂದು ಅಂದಾಜಿಸಲಾಗಿದೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios