ದಾವಣಗೆರೆ [ಡಿ.16] : ರಾಜ್ಯದಲ್ಲಿ ಮುಖ್ಯಮಂತ್ರಿ ಒಬ್ಬರೇ ಸಾಕು. ಇಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಅವಶ್ಯಕತೆ ಇಲ್ಲವೆಂದು ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. 

ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ನಮ್ಮದು ಜಾತಿಗೆ ಸೀಮಿತವಾದ ಪಕ್ಷವಲ್ಲ. ರಾಜ್ಯಕ್ಕೆ ಡಿಸಿಎಂ ಸ್ಥಾನ ಬೇಡವೇ ಬೇಡ ಎಂದರು. 

ರಾಜ್ಯದಲ್ಲಿ ಸಚಿವ ಸ್ಥಾನಕ್ಕೆ ಬೇರೆ ಬೇರೆ ಜಿಲ್ಲೆಗಳಲ್ಲಿ ಅವಕಾಶ ಕೊಟ್ಟಿದ್ದಾರೆ. ಆದರೆ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗೆ ಮಾತ್ರ ಅವಕಾಶ ಸಿಕ್ಕಿಲ್ಲ. ದಾವಣಗೆರೆ ಜಿಲ್ಲೆಯಲ್ಲಿ 6 ಬಿಜೆಪಿ ಶಾಸಕರಿದ್ದರೆ, ಚಿತ್ರದುರ್ಗದಲ್ಲಿ ಐವರು ಬಿಜೆಪಿ ಶಾಸಕರಿದ್ದಾರೆ. ನಾನೂ ಕೂಡ ಸಚಿವ ಸ್ಥಾನ ಪ್ರಭಲ ಆಕಾಂಕ್ಷಿ ಎಂದು ಬಿಜಪಿ ಶಾಸಕ ರೇಣುಕಾಚಾರ್ಯ ಹೇಳಿದರು. 

ಎದ್ದು ನಿಂತ ಹೊನ್ನಾಳ್ಳಿ ಹುಲಿ: ರೇಣುಕಾಚಾರ್ಯ ಮಾತಿಗೆ ಚಿಂತೆಗೀಡಾದ

 ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಇನ್ನು ಮೂರುವರೆ ವರ್ಷ ಬಿಜೆಪಿ ಅಧಿಕಾರದಲ್ಲಿರುತ್ತದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ರೇಣುಕಾಚಾರ್ಯ ಹೇಳಿದರು.  ರಾಜ್ಯದಲ್ಲಿ ಚುನಾವಣೆ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಕೂಡ ಸಂಪುಟ ವಿಸ್ತರಣೆಯಾಗಿಲ್ಲ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಗೊಂದಲ ಹಿನ್ನೆಲೆಯಲ್ಲಿ ಸಂಕ್ರಾಂತಿ ಬಳಿಕ ವಿಸ್ತರಣೆ ಎನ್ನಲಾಗುತ್ತಿದೆ. 

ಇನ್ನು ನಾನು ರಾಹುಲ್ ಸಾವರ್ಕರ್ ಅಲ್ಲ ಎನ್ನುವ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ ರಾಹುಲ್ ಗಾಂಧಿ ಇನ್ನೂ ರಾಜಕೀಯದಲ್ಲಿ ಬಚ್ಚಾ, ಸಾವರ್ಕರ್ ಗೆ ಹೋಲಿಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ಸತ್ತು ಹೋಗಿದೆ ಎಂದರು.