Asianet Suvarna News Asianet Suvarna News

ಉಪ ಚುನಾವಣೆ ಬೆನ್ನಲ್ಲೇ ನನಗೂ ಸಚಿವ ಸ್ಥಾನ ಬೇಕು ಎಂದ ಬಿಜೆಪಿ ಶಾಸಕ

ನಾನೂ ಕೂಡ ಸಚಿವ ಸ್ಥಾನ ಪ್ರಬಲ ಆಕಾಂಕ್ಷಿ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

Im Also Aspirant Of Portfolio Says BJP MLA Renukacharya
Author
Bengaluru, First Published Dec 8, 2019, 12:26 PM IST

ಹೊನ್ನಾಳಿ [ಡಿ.08]: ಉಪ ಚುನಾವಣೆಯ ನಂತರ ಸಚಿವ ಸಂಪುಟ ರಚನೆ ವೇಳೆ, ಸಚಿವ ಸ್ಥಾನಕ್ಕೆ ತಾವೂ ಕೂಡಾ ಪ್ರಬಲ ಆಕಾಂಕ್ಷಿಯಾಗಿದ್ದು ಬಿಜೆಪಿಗೆ ನಾನು ಮಲತಾಯಿ ಮಗನಲ್ಲ, ಮನೆ ಮಗನಿದ್ದಂತೆ ಎಂದು ಶಾಸಕ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು. ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಶನಿವಾರ 8.50 ಲಕ್ಷ ರು. ವೆಚ್ಚದ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಸರ್ಕಾರ ರಚನೆ ಆಗಲಿಕ್ಕೆ ಕಾರಣರಾದ ಅನರ್ಹ ಶಾಸಕರಿಗೆ ಮೊದಲು ಸಚಿವ ಸ್ಥಾನ ನೀಡಬೇಕಾಗುತ್ತದೆ ನಂತರ ನನಗೂ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡುತ್ತೇನೆ. ಪಕ್ಷ ಸಂಘಟನೆಯಲ್ಲಿ ಸಂಪೂರ್ಣ ತೊಡಗಿಸಿ ಕೊಂಡಿದ್ದೇನೆ ಹಾಗೂ ಮುಖ್ಯಮಂತ್ರಿ ಕೊಟ್ಟಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿದ್ದೇನೆ ಎಂದ ಅವರು ಮುಂದಿನ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬ ಭರವಸೆ ನನಗಿದೆ ಎಂದು ತಿಳಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉಪ ಚುನಾವಣೆಯಲ್ಲಿ ಎಲ್ಲಾ 15 ಸ್ಥಾನಗಳಲ್ಲಿಯೂ ಬಿಜೆಪಿ ಗೆದ್ದೆ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಕಿ ಮುಂದಿನ ಮೂರುವರೆ ವರ್ಷ ಸಂಪೂರ್ಣ ಅಧಿಕಾರ ನಡೆಸುತ್ತಾರೆ. ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ತಂದು ಮಾದರಿ ತಾಲೂಕುಗಳನ್ನಾಗಿ ಮಾಡಿಯೇ ಮಾಡುತ್ತೇನೆ ಎಂದು ಹೇಳಿದರು.

ಡಿಸೆಂಬರ್ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios