ಉಳ್ಳಾಲ: ಅಕ್ಷರ ಸಂತಗೆ ಗೌರವ, ಗ್ರಾ.ಪಂ. ಕಟ್ಟಡದಲ್ಲಿ ಹಾಜಬ್ಬರ ಚಿತ್ರ ರಚನೆ
ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರ ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಹುಟ್ಟೂರಿನಲ್ಲಿ ಗೌರವ
ಉಳ್ಳಾಲ(ನ.15): ಹರೇಕಳ ಗ್ರಾಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರ ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಹುಟ್ಟೂರಿನಲ್ಲಿ ಗೌರವ ನೀಡಲಾಗಿದೆ.
ಶಾಸಕರ ವಿಶೇಷ ಹಾಗೂ ವಿವಿಧ ಅನುದಾನದಡಿ ಹರೇಕಳ ಗ್ರಾಾಮಕ್ಕೆ ಬಾವಲಿಗುರಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ. ಒಂದೂವರೆ ವರ್ಷದಿಂದ ನಡೆಯುತ್ತಿದ್ದ ಕಾಮಗಾರಿ ಇದೀಗ ಸಮಾರೋಪಾದಿಯಲ್ಲಿದ್ದು, ಶೀಘ್ರದಲ್ಲೇ ಉದ್ಘಾಾಟನೆ ಹಂತಕ್ಕೆ ತಲುಪಿದೆ. ಕಟ್ಟಡದ ಒಂದು ಅಂತಸ್ತಿನ ಗೋಡೆ ಪೂರ್ತಿ ಹರೇಕಳ ಹಾಜಬ್ಬ ಅವರ ಚಿತ್ರ ರಚಿಸಲಾಗಿದೆ.
ಕುಕ್ಕೆಯಲ್ಲಿ ಈ ಬಾರಿ ಮಡೆಸ್ನಾನಕ್ಕೆ ನಿರ್ಬಂಧ, ಎಡೆಸ್ನಾನಕ್ಕೆ ಅವಕಾಶ
ಹರೇಕಳ ಗ್ರಾಮದ ಹೆಸರನ್ನು ಇಡೀ ಜಗತ್ತಿಗೆ ಪಸರಿಸಿದವರು. ಕಿತ್ತಳೆ ಹಣ್ಣು ಮಾರಿ ತನ್ನೂರಿನಲ್ಲಿ ಶಾಲೆ ಕಟ್ಟಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ ಶ್ರೇಷ್ಟರು. ಗ್ರಾಮಕ್ಕೆ ವಿಶೇಷ ಗೌರವ ಅವರಿಂದಲೇ ಬಂದಿದೆ. ದೇಶದ ಅತ್ಯುನ್ನತ ಪದ್ಮಶ್ರೀ ಪುರಸ್ಕಾಾರಕ್ಕೆ ಭಾಜನರಾದವರು. ಗ್ರಾಮದಿಂದ ಎಂತಹ ಗೌರವ ಕೊಟ್ಟರೂ ಸಾಲದು. ಆದ್ದರಿಂದ ಗ್ರಾಾಮದ ಸರ್ವ ಸದಸ್ಯರ ನಿರ್ಣಯದಂತೆ ಕಟ್ಟಡದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬ ಅವರ ಚಿತ್ರ ರಚಿಸಲಾಗಿದೆ ಎಂದು ಗ್ರಾಾಮ ಪಂಚಾಯತ್ ಅಧ್ಯಕ್ಷ ಬದ್ರುದ್ದೀನ್ ತಿಳಿಸಿದರು.