ಮಂಗಳೂರಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಆರು ಮಂದಿ ಆರೋಪಿಗಳ ಸೆರೆ

  • ಅನೈತಿಕ ಪೊಲೀಸ್‌ಗಿರಿ: ಆರು ಮಂದಿ ಆರೋಪಿಗಳ ಸೆರೆ
  • ಕಡಬ ತಾಲೂಕಿನ ದೋಳ್ಪಾಡಿಯಲ್ಲಿ ಇಬ್ಬರು ವ್ಯಾಪಾರಿಗಳ ಮೇಲೆ ಹಲ್ಲೆ ನಡೆದ ಪ್ರಕರಣ
immoral policing: Six accused arrested rav

ಮಂಗಳೂರು (ಅ.24) :  ಹಿಳೆ ಮಾನಭಂಗ ಆರೋಪಿಸಿ ಇಬ್ಬರು ವ್ಯಾಪಾರಿಗಳ ವಿರುದ್ಧ ಕಡಬ ತಾಲೂಕಿನ ದೋಳ್ಪಾಡಿಯಲ್ಲಿ ಇತ್ತೀಚೆಗೆ ನಡೆದ ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಸ್ಥಳೀಯ ಪುನೀತ್‌, ರಾಜು, ಕಿಶೋರ್‌, ಭವಿತ್‌, ರಂಜಿತ್‌ ಮತ್ತು ಪ್ರಸಾದ್‌ ಬಂಧಿತರು. ಇವರಿಂದ ಹಲ್ಲೆಗೆ ಒಳಗಾದ ರಮೀಜುದ್ದಿನ್‌ ಮತ್ತು ಮಹಮ್ಮದ್‌ ರಫೀಕ್‌ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು.

Mangaluru: ಸುಳ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ: 9 ವಿದ್ಯಾರ್ಥಿಗಳ ಬಂಧನ

ಅ.20ರಂದು, ಕಂಬಳಿ ಮಾರಾಟ ಮಾಡುತ್ತಾ ತೆರಳುತ್ತಿದ್ದಾಗ ದೋಳ್ಪಾಡಿಯಲ್ಲಿ ಕಾರು ತಡೆದು ನಿಲ್ಲಿಸಿದ ಆರೋಪಿಗಳು ಹೊರಗೆಳೆದು ಈ ಇಬ್ಬರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದರು. ಅಲ್ಲದೆ ದೊಣ್ಣೆ, ಕಬ್ಬಿಣದ ರಾಡ್‌ನಿಂದ ಥಳಿಸಿ, ಕಾಲಿನಿಂದ ತುಳಿದು ರಸ್ತೆಯಲ್ಲಿ ಹಲ್ಲೆ ನಡೆಸಲಾಗಿತ್ತು. ಬಳಿಕ ಕಾರನ್ನು ಹುಡಿ ಮಾಡಿ ಜಖಂ ಗೊಳಿಸಿ ಲಕ್ಷಾಂತರ ರು. ನಷ್ಟಎಸಗಿದ ಬಗ್ಗೆ ದೂರು ಸ್ಥಳೀಯ ಕೆಲವು ಯುವಕರ ಮೇಲೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಅನೈತಿಕ ಪೊಲೀಸ್‌ಗಿರಿ ಬಗ್ಗೆ ಪ್ರಕರಣ ದಾಖಲಾಗಿತ್ತು. ಅನೈತಿಕ ಪೊಲೀಸ್‌ಗಿರಿ ನಡೆಸುತ್ತಿರುವ ವಿಡಿಯೋ ಕೂಡ ವೈರಲ್‌ ಆಗಿತ್ತು. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಪೊಲೀಸ್‌ ಇಲಾಖೆಯನ್ನು ಆಗ್ರಹಿಸಿದ್ದವು.

ಪ್ರಕರಣ ಹಿನ್ನೆಲೆ:

ಕಂಬಳಿ ಮಾರುವ ನೆಪದಲ್ಲಿ ಕಾಣಿಯೂರಿನಲ್ಲಿ ಕಾರಿನಲ್ಲಿ ಮನೆಯಂಗಳಕ್ಕೆ ಇಬ್ಬರು ಯುವಕರು ಬಂದಿದ್ದರು. ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದುದನ್ನು ಗಮನಿಸಿ ಮನೆಗೆ ಹೋಗಿದ್ದರು. ಈ ವೇಳೆ ಬೆಡ್‌ಶೀಟ್‌ಗಳನ್ನು ಮಹಿಳೆ ನೋಡುತ್ತಿದ್ದಂತೆ ಚಿನ್ನದ ಸರ ಎಗರಿಸಲು ಯುವಕರು ಯತ್ನಿಸಿದ್ದಾರೆ, ಅಲ್ಲದೆ ಮಹಿಳೆಯ ಕೈ ಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ವೇಳೆ ಮಹಿಳೆ ಬೊಬ್ಬೆ ಹೊಡೆದಾಗ ಯುವಕರು ಕಾರಿನಲ್ಲಿ ಪರಾರಿಯಾಗಿದ್ದಾರೆ.

ವೇಗವಾಗಿ ಪರಾರಿಯಾಗುವ ವೇಳೆ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿತ್ತು. ಪಲ್ಟಿಯಾದ ಕಾರಿನಿಂದ ಹೊರಗೆಳೆದು ಆರೋಪಿಗಳಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದು, ಇದರ ವಿಡಿಯೋ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಬಳಿಕ ಮಹಿಳೆ ನೀಡಿದ ದೂರಿನಂತೆ ಯುವಕರ ವಿರುದ್ಧ ಅತ್ಯಾಚಾರ ಯತ್ನ ಕೇಸ್‌ ದಾಖಲಾಗಿತ್ತು. ಅಲ್ಲದೆ ಅನೈತಿಕ ಪೊಲೀಸ್‌ಗಿರಿ ನಡೆಸಿದ ಸ್ಥಳೀಯರ ವಿರುದ್ಧವೂ ಹಲ್ಲೆಗೆ ಒಳಗಾದ ಯುವಕರು ನೀಡಿದ ದೂರು ದಾಖಲಾಗಿತ್ತು.

ಕಾಣಿಯೂರು ಹಲ್ಲೆ ಪ್ರಕರಣ: ಖಾದರ್‌ ಖಂಡನೆ

ಮಂಗಳೂರು: ಕಾಣಿಯೂರು ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣವನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ, ವಿಪಕ್ಷ ಉಪ ನಾಯಕ ಯು.ಟಿ. ಖಾದರ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ, ಮುಸ್ಲಿಂ ವಿದ್ಯಾರ್ಥಿಗೆ ಥಳಿತ, ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್

ಘಟನೆಯ ಬಗ್ಗೆ ಖಂಡನೆ ವ್ಯಕ್ತಪಡಿಸಿದ ಯು.ಟಿ. ಖಾದರ್‌, ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಹಾಗೂ ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮೀನ ಮೇಷ ಎಣಿಸಿದರೆ ಜಿಲ್ಲೆಯಲ್ಲಿ ಮತ್ತೆ ಇಂಥಹ ಘಟನೆಗಳು ಮರುಕಳಿಸಬಹುದು. ಆದುದರಿಂದ ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ತೆಗೆದುಕೊಳ್ಳುವ ಕಾನೂನು ಕ್ರಮವು ಮುಂದೆ ಇಂಥಹ ಘಟನೆಗಳು ನಡೆಸುವವರಿಗೆ ಪಾಠವಾಗಬೇಕೆಂದು ಒತ್ತಾಯಿಸಿದ್ದಾರೆ.

Latest Videos
Follow Us:
Download App:
  • android
  • ios