ಪೌರಕಾರ್ಮಿಕರ ಅಭಿವೃದ್ಧಿಗೆ ಮೀಸಲಿರುವ ಯೋಜನೆ ಸಮರ್ಪಕ ಅನುಷ್ಠಾನ: ಡಿಸಿ ಗುರುದತ್ತ ಹೆಗಡೆ
ಪೌರಕಾರ್ಮಿಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿ; ಅಧಿಕಾರಿಗಳು ಪೌರಕಾಮಿರ್ಕರ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು
ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್ ಧಾರವಾಡ
ಧಾರವಾಡ (ಸೆ.22) : ಪೌರಕಾರ್ಮಿಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿ; ಅಧಿಕಾರಿಗಳು ಪೌರಕಾಮಿರ್ಕರ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜರುಗಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ-2013 ಸೆಕ್ಷಣ್- 24ರನ್ವಯ ತ್ರೈಮಾಸಿಕ ಜಿಲ್ಲಾ ಜಾಗೃತಿ ಸಮತಿ ಸಭೆ ಜರುಗಿಸಿ, ಮಾತನಾಡಿದರು.
ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ನಿಷೇಧ; ಜಿಲ್ಲೆಯಾದ್ಯಂತ ಆಂದೋಲನ ಗುರುದತ್ತ ಹೆಗಡೆ
ಪೌರಕಾರ್ಮಿಕರ ಅಭಿವೃದ್ಧಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇಲಾಖೆಗಳ ಹಾಗೂ ನಿಗಮಗಳ ಅಧಿಕಾರಿಗಳು ಮುತುವರ್ಜಿಯಿಂದ ಯೋಜನೆಗಳನ್ನು ಪೌರಕಾರ್ಮಿಕರಿಗೆ, ಸಫಾಯಿ ಕರ್ಮಚಾರಿಗಳಿಗೆ ತಲುಪಿಸಬೇಕು. ಅವರಿಗೆ ವಸತಿ, ಆರ್ಥಿಕ ಮತ್ತು ಅವರ ಕುಟುಂಬ ಸದಸ್ಯರಿಗೆ ಶೈಕ್ಷಣಿಕ ಸೌಲಭ್ಯಗಳನ್ನು ನೀಡಬೇಕು. ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಪೌರಕಾರ್ಮಿಕರಿಗೆ ಪ್ರತಿ ದಿನ ಉತ್ತಮ ಗುಣಮಟ್ಟದ ಉಪಹಾರ, ಊಟ ಸೀಗುವಂತೆ ಕ್ರಮವಹಿಸಬೇಕು. ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ, ಔಷಧಿ ಪೂರೈಕೆಗೆ ಆಸಕ್ತಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ವಿವಿಧ ಇಲಾಖೆಗಳು ಪಟ್ಟಿ ಮಾಡಿದ ಫಲಾನುಭವಿಗಳಿಗೆ ಸ್ವ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಬ್ಯಾಂಕ್ ನವರು ಸಕಾಲಕ್ಕೆ ಸಾಲ ಸೌಲಭ್ಯ ನೀಡಬೇಕು. ಸಣ್ಣಪುಟ್ಟ ಕೊರತೆಗಳ ಕಾರಣ ನೀಡಿ ಸತಾಯಿಸಬಾರದು ಎಂದರು. ಈ ಕುರಿತು ಲೀಡ್ ಬ್ಯಾಂಕ್ ಅಗತ್ಯ ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ ಅಂತಹ ಬ್ಯಾಂಕ್ ಗಳ ಪಟ್ಟಿ ಮಾಡಿ, ಸೂಕ್ರ ಕ್ರಮಕ್ಕಾಗಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅಬರು ಹೇಳಿದರು. ನಗರ ಸ್ಥಳೀಯ ಸಂಸ್ಥೆಗಳು ಪೌರಕಾರ್ಮಿಕರಿಗೆ ಕೆಲಸದ ನಂತರ ವಿಶ್ರಾಂತಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಐರಾವತ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಸಕಾಲಕ್ಕೆ ಸೌಲಭ್ಯಗಳನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜೂನ್ 28 ರಂದು ಜರುಗಿದ ಜಿಲ್ಲಾ ಜಾಗೃತಿ ಸಭೆಯ ನಡವಳಿಗಳ ಅನುಪಾಲನ ವರದಿ ಮಂಡಿಸಿ, ಚರ್ಚಿಸಿ ಅನುಮೋದನೆ ನೀಡಲಾಯಿತು ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಶ್ರವಣ ನಾಯ್ಕ ವೇದಿಕೆಯಲ್ಲಿದ್ದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಡೊಂಬರ ಸ್ವಾಗತಿಸಿ,ಸಭೆ ನಿರ್ವಹಿಸಿದರು.
Dharwad ಅಳ್ನಾವರ ಪೌರಕಾರ್ಮಿಕರ ಮನೆಗಳ ನಿರ್ಮಾಣ ಸ್ಥಳ ತನಿಖೆಗೆ ಆದೇಶ
ಸಭೆಯಲ್ಲಿ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ಸದಸ್ಯರಾದ ರೇಣುಕಪ್ಪಾ ಕೇಲೂರ, ಹನುಮಂತಪ್ಪ ಮಾಲಪಲ್ಲಿ, ಭೀಮರಾವ್ ಸವಣೂರ, ವಿದ್ಯಾ ನರಸಪ್ಪನವರ ಹಾಗೂ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ರೇಖಾ ಡೋಳ್ಳಿನ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಐ.ಬಿ., ಮಹಾನಗರಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಎಸ್.ಪಿ.ಕಚೇರಿಯ ಡಿವೈಎಸ್ ಪಿ ಚಂದ್ರಕಾಂತ ಪೂಜಾರಿ, ಕೊಳಚೆ ನಿರ್ಮೂಲನ ಮಂಡಳಿಯ ಕಾರ್ಯಪಾಲಕ ಅಭಿಯಂತರ ಎಸ್.ಎಂ.ಹಿರೇಮಠ, ಡಿಮಾನ್ಸ್ ನಿರ್ದೇಶಕ ಡಾ.ಮಹೇಶ ದೇಸಾಯಿ, ಮುಖ್ಯ ಆಡಾಳಿತಾಧಿಕಾರಿ ಷಣ್ಮುಖಪ್ಪ,
ಜಿಲ್ಲಾ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಲೀಡ್ ಬ್ಯಾಂಕ್, ರೈಲ್ವೆ ಇಲಾಖೆ, ಜಿಲ್ಲಾ ನಗರಾಭಿವೃದ್ಧಿಕೋಶ, ಪಶುಸಂಗೋಪನೆ, ತೋಟಗಾರಿಕೆ, ಇಎಸ್ಐ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಸಫಾಯಿಕರ್ಮಚಾರಿಗಳ ಅಭಿವೃದ್ಧಿ ನಿಗಮ, ಡಾ.ಬಾಬು ಜಗಜೀವನ ರಾಮ್, ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.