ಮಂಡ್ಯ(ನ.16): ಕಳೆದ ಬಾರಿ ಬಿಜೆಪಿ ಸಹಕಾರದಿಂದ ಶಾಸಕನಾಗಿ ಆಯ್ಕೆಯಾಗಿದ್ದೆ ಎಂದು ಅನರ್ಹ ಶಾಸಕ ಕೆ. ಸಿ. ನಾರಾಯಣ ಗೌಡ ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಹೊಂದಾಣಿಕೆಯಾಗಿತ್ತು. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ ಬಂದು ಪ್ರಚಾರವನ್ನೇ ಮಾಡಿರಲಿಲ್ಲ ಎಂದಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಕೆ. ಆರ್. ಪೇಟೆ ಬಿಜೆಪಿ ಅಭ್ಯರ್ಥಿ ಕೆ. ಸಿ. ನಾರಾಯಣ ಗೌಡ, ಕಳೆದ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಹೊಂದಾಣಿಕೆಯಾಗಿತ್ತು. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ ಬಂದು ಪ್ರಚಾರವನ್ನೇ ಮಾಡಿರಲಿಲ್ಲ. ಕಳೆದ ಬಾರಿ ನಾನು ಗೆಲ್ಲೋದಕ್ಕೆ ಬಿಜೆಪಿ ಸಹಕಾರ ಇತ್ತು ಎಂದು ಹೇಳಿದ್ದಾರೆ.

ಬಿ.ಫಾರಂಗೆ ಪೂಜೆ ಸಲ್ಲಿಸಿದ ನಾರಾಯಣಗೌಡ

ನೇರವಾಗಿ ಹೊಂದಾಣಿಕೆ ಆಗಿರಲಿಲ್ಲ. ಆದರೆ ಪರೋಕ್ಷವಾಗಿ ಆಗಿತ್ತು. ಹಲವು ಕ್ಷೇತ್ರದಲ್ಲಿ ಬಿಜೆಪಿ ಸರಿಯಾಗಿ ಪ್ರಚಾರವೇ ಮಾಡಿಲ್ಲ. ನನಗಂತೂ ತುಂಬಾ ಜನ ಬಿಜೆಪಿ ಮುಖಂಡರು ಆಶೀರ್ವಾದ ಮಾಡಿದ್ರು. ನಾನು ಬಿಜೆಪಿ ಅಭ್ಯರ್ಥಿ ಮನೆಗೇ ಹೋಗಿ ಅವರ ತಂದೆ ಆಶೀರ್ವಾದ ಪಡೆದಿದ್ದೆ. ಕಳೆದ ಬಾರಿ ಗೆಲ್ಲೋದಕ್ಕೆ ಬಿಜೆಪಿಯೂ ಸಹಕಾರ ನೀಡಿತ್ತು ಎಂದಿದ್ದಾರೆ.

ಮಾಜಿ ಸ್ಪೀಕರ್ ಕಾಲಿಗೆ ಬಿದ್ದು ಆಶಿರ್ವಾದ ಪಡೆದ ನಾರಾಯಣಗೌಡ