ಅನಂತ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪುವ ಭೀತಿ..?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 14, Jul 2018, 2:25 PM IST
In Loksabha Election Anath Kumara Hegde Get BJP Ticket
Highlights

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಇದೀಗ ರಾಜಕೀಯದಲ್ಲಿ ಹೊಸ ಭೀತಿ ಎದುರಾಗಿದೆ.  2019ರ ಲೋಕಸಭಾ ಚುನಾವಣೆಯಲ್ಲಿ ಸಚಿವ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪುವ ಆತಂಕ ಎದುರಾಗಿದೆ.

ಬೆಳಗಾವಿ: 2019ರ ಲೋಕಸಭಾ ಚುನಾವಣೆಯಲ್ಲಿ ಸಚಿವ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪುವ ಆತಂಕ ಎದುರಾಗಿದೆ. ಈ ಬಗ್ಗೆ ಸ್ವತಃ ಅನಂತ್ ಕುಮಾರ್ ಹೆಗಡೆ ಅವರೇ ಆತಂಕ ಹೊರಹಾಕಿದ್ದಾರೆ.  

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ನಡೆದ ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡಗೌಡರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಈ ಬಗ್ಗೆ ಹೇಳಿದ್ದಾರೆ. 

ಕಳೆದ ಐದು ಭಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಹೆಗಡೆ ಗೆಲವು ಪಡೆದಿದ್ದು, ನನ್ನ ಯೋಗತ್ಯ ನೋಡಿ ಓಟು ಕೊಟ್ಟಿಲ್ಲ ಬದಲಿಗೆ ಪ್ರೀತಿ, ವಿಶ್ವಾಸದ ಮೇಲೆ ಓಟು ಕೊಟ್ಟಿದ್ದಿರಿ. ಪಕ್ಷದ ಮೇಲಿನ ಬದ್ಧತೆ ಇಲ್ಲಿಯ ತನಕ ತಂದು ನಿಲ್ಲಿಸಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಕಾಲುಮುಟ್ಟಿ ನಮಸ್ಕಾರ ಮಾಡುತ್ತೇನೆ ಎಂದು ಹೇಳಿದ್ದಾರೆ. 

ಮುಂದಿನ ಬಾರಿ ಈ ಕ್ಷೇತ್ರದಿಂದ ಯಾರು ಸ್ಪರ್ಧಿಸಲಿದ್ದಾರೆಯೋ ಗೊತ್ತಿಲ್ಲ. ಆದರೇ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರು ಗೆಲ್ಲಬೇಕು. ಈ ದೇಶಕ್ಕೆ ಬಿಜೆಪಿ ಪಕ್ಷ ಅನಿವಾರ್ಯವಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ. 

loader