Asianet Suvarna News Asianet Suvarna News

ಆಯುಷ್ಮಾನ್, ಯಶಸ್ವಿನಿ ಮತ್ತು ಇಎಸ್‌ಐ ಆರೋಗ್ಯ ಸೇವಾ ದರ ಹೆಚ್ಚಿಸಿ: ಸಿಎಂಗೆ ಯೋಗಣ್ಣ ಮನವಿ

ರಾಜ್ಯ ಸರ್ಕಾರದ ಆಯುಷ್ಮಾನ್, ಇಎಸ್‌ಐ ಆರೋಗ್ಯ ಸೇವೆಗಳನ್ನು ಸರ್ಕಾರ ನೋಂದಾಯಿತ ಖಾಸಗಿ ಆಸ್ಪತ್ರೆಗಳ ಮೂಲಕ ಜನಸಾಮಾನ್ಯರಿಗೆ ಉಚಿತವಾಗಿ ನೀಡುತ್ತಿದ್ದು, ಸರ್ಕಾರ ಈ ಯೋಜನೆಗಳಿಗೆ ತಗಲುವ ದರ ಹೆಚ್ಚಿಸಬೇಕು ಎಂದು ಸರ್ಕಾರಿ ಯೋಜನೆಗಳ ಅನುಷ್ಠಾನಿತ ಖಾಸಗಿ ಆಸ್ಪತ್ರೆಗಳ ಸಂಘದ ಅಧ್ಯಕ್ಷ ಡಾ.ಎಸ್‌.ಪಿ.ಯೋಗಣ್ಣ ಒತ್ತಾಯಿಸಿದ್ದಾರೆ. 
 

Increase Ayushman Yashaswini and ESI Health Care Rates Says Dr SP Yoganna gvd
Author
First Published Jan 26, 2024, 9:23 PM IST

ಮೈಸೂರು (ಜ.26): ರಾಜ್ಯ ಸರ್ಕಾರದ ಆಯುಷ್ಮಾನ್, ಇಎಸ್‌ಐ ಆರೋಗ್ಯ ಸೇವೆಗಳನ್ನು ಸರ್ಕಾರ ನೋಂದಾಯಿತ ಖಾಸಗಿ ಆಸ್ಪತ್ರೆಗಳ ಮೂಲಕ ಜನಸಾಮಾನ್ಯರಿಗೆ ಉಚಿತವಾಗಿ ನೀಡುತ್ತಿದ್ದು, ಸರ್ಕಾರ ಈ ಯೋಜನೆಗಳಿಗೆ ತಗಲುವ ದರ ಹೆಚ್ಚಿಸಬೇಕು ಎಂದು ಸರ್ಕಾರಿ ಯೋಜನೆಗಳ ಅನುಷ್ಠಾನಿತ ಖಾಸಗಿ ಆಸ್ಪತ್ರೆಗಳ ಸಂಘದ ಅಧ್ಯಕ್ಷ ಡಾ.ಎಸ್‌.ಪಿ.ಯೋಗಣ್ಣ ಒತ್ತಾಯಿಸಿದ್ದಾರೆ. ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಯೋಗಣ್ಣ ಅವರು, ಸುಮಾರು 10 ವರ್ಷಗಳ ಹಿಂದೆ ನಿಗದಿಯಾಗಿರುವ ಸರ್ಕಾರದ ಈ ದರಗಳಿಂದ ಖಾಸಗಿ ಆಸ್ಪತ್ರೆಗಳು ಅತೀವ ನಷ್ಟ ಅನುಭವಿಸುತ್ತಿದ್ದರೂ ಮಾನವೀಯತೆ ದೃಷ್ಟಿಯಿಂದ ಜನಸಾಮಾನ್ಯರಿಗೆ ಆರೋಗ್ಯ ಸವಲತ್ತು ಮುಂದುವರೆಸಿಕೊಂಡು ಬರುತ್ತಿವೆ. 

ಅತೀವ ನಷ್ಟದಿಂದಾಗಿ ಶೇ. 67ರಷ್ಟು ಖಾಸಗಿ ಆಸ್ಪತ್ರೆಗಳು ಈಗಾಗಲೆ ಸರ್ಕಾರದ ಈ ಯೋಜನೆ ತಿರಸ್ಕರಿಸಿರುವುದರಿಂದ ಜನಸಾಮಾನ್ಯರು ಅತೀವ ತೊಂದರೆ ಅನುಭವಿಸುತ್ತಿದ್ದಾರೆ ಎಂದರು. ಈ ಎಲ್ಲ ನಷ್ಟಗಳಿಗೆ ಪರಿಹಾರ ಕಂಡು ಹಿಡಿಯಲು ಇತ್ತೀಚೆಗೆ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸರ್ಕಾರಿ ಯೋಜನೆಗಳ ಅನುಷ್ಠಾನಿತ ಆಸ್ಪತ್ರೆಗಳ ಸಭೆ ಕರೆಯಲಾಗಿದ್ದು, ಆ ಸಭೆಯಲ್ಲಿ ಮೈಸೂರಿನ ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ. ಯೋಗಣ್ಣ ್ವರ ಅಧ್ಯಕ್ಷತೆಯಲ್ಲಿ ಸರ್ಕಾರಿ ಯೋಜನೆಗಳ ಅನುಷ್ಠಾನಿತ ಆಸ್ಪತ್ರೆಗಳ ಸಂಘವೊಂದನ್ನು ಸ್ಥಾಪಿಸಿ, ಆ ಮೂಲಕ ಸರ್ಕಾರದೊಡನೆ ಈ ಬಗ್ಗೆ ಚರ್ಚಿಸಲು ತೀರ್ಮಾನಿಸಲಾಯಿತು.

ಈ ಸಮಿತಿಯಲ್ಲಿ ನಾರಾಯಣ ಸಮೂಹ ಆಸ್ಪತ್ರೆಗಳ ಅಧ್ಯಕ್ಷ ಡಾ. ದೇವಿಶೆಟ್ಟಿ, ಐ.ಎಂ.ಎ. ರಾಜ್ಯ ಶಾಖೆಯ ಅಧ್ಯಕ್ಷ ಡಾ. ಶ್ರೀನಿವಾಸ್, ಫಾನಾ ಅಧ್ಯಕ್ಷ ಡಾ. ಗೋವಿಂದಯ್ಯ ಯತೀಶ್, ಐ.ಎಂ.ಎ ಉಪಾಧ್ಯಕ್ಷ ಡಾ. ಮದನ್ ಕುಮಾರ್ ಪಾಟೀಲ್, ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ಈ ಸಮಿತಿಯು ಈಗಾಗಲೇ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್‌ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿ, ಹಾಲಿ ಇರುವ ಯಶಸ್ವಿನಿ, ಇಎಸ್‌ಐ ಆರೋಗ್ಯ ಯೋಜನೆಗಳ ದರವನ್ನು ಈ ಸಾಲಿನ ಆಯವ್ಯಯದಲ್ಲಿ ಹೆಚ್ಚಿಸಬೇಕೆಂದು ಕೋರಿರುವುದಾಗಿ ಅವರು ತಿಳಿಸಿದ್ದಾರೆ.

ಲೋಕಸಭೆ ಸಂದರ್ಭದಲ್ಲಿ ಶೆಟ್ಟರ್‌ ಮತ್ತೆ ಬಿಜೆಪಿ ಸೇರಿದ ಬೆಳವಣಿಗೆ ಸರಿಯಲ್ಲ: ಜನಾರ್ದನ ಪೂಜಾರಿ

ದರಪಟ್ಟಿ ಪರಿಷ್ಕರಿಸದಿದ್ದರೆ ಈ ಯೋಜನೆಗಳನ್ನು ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಾರ್ಯಗತ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿ, ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಸಕಾರಾತ್ಮಕವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಈ ಸಂಬಂಧ ಆರೋಗ್ಯ ಸಚಿವರೊಡನೆ ಚರ್ಚಿಸಿ 2024-25ರ ಆಯವ್ಯಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Latest Videos
Follow Us:
Download App:
  • android
  • ios