Asianet Suvarna News Asianet Suvarna News

10 ವರ್ಷದಲ್ಲಿ ಮಾನಸಿಕ ರೋಗಿಗಳು ಹೆಚ್ಚಳ: ಸಚಿವ ಸುಧಾಕರ್‌ ಕಳವಳ

ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ. ಕಳೆದ 10 ವರ್ಷಗಳಲ್ಲಿ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕಳವಳ ವ್ಯಕ್ತಪಡಿಸಿದರು.

Increase in mental patients in 10 years says minister Dr K Sudhakar gvd
Author
First Published Dec 10, 2022, 2:38 PM IST

ಬೆಂಗಳೂರು (ಡಿ.10): ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ. ಕಳೆದ 10 ವರ್ಷಗಳಲ್ಲಿ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಕಳವಳ ವ್ಯಕ್ತಪಡಿಸಿದರು. ನಗರ ನಿಮ್ಹಾನ್ಸ್‌ನಲ್ಲಿ ನಡೆಯುತ್ತಿರುವ ಮೆದುಳಿನ ಆರೋಗ್ಯ ಉಪಕ್ರಮ (ಬ್ರೈನ್‌ ಹೆಲ್ತ್‌ ಇನಿಷೆಯೇಟಿವ್‌) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ 10 ವರ್ಷಗಳಿಂದ ಮಾನಸಿಕ, ನರರೋಗಗಳು, ಪಾಶ್ರ್ವವಾಯು (ಸ್ಟ್ರೋಕ್‌), ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. 

ಅಂಕಿ-ಅಂಶಗಳ ಪ್ರಕಾರ ಮಾನಸಿಕ ಅನಾರೋಗ್ಯದಿಂದಲೇ ಸುಮಾರು ಶೇ.8ರಷ್ಟು ಜನರು ಸಾವಿಗೀಡಾಗುತ್ತಿದ್ದಾರೆ. ಸಾವಿಗೆ ಕಾರಣವಾಗಿರುವ ಅಂಶಗಳ ಪೈಕಿ ಮಾನಸಿಕ ಅನಾರೋಗ್ಯ 2ನೇ ಸ್ಥಾನ ಪಡೆದಿದೆ’ ಎಂದರು. ‘ನಾವು ಎಷ್ಟುವರ್ಷ ಬದುಕುತ್ತೇವೆ ಅನ್ನುವುದರ ಜೊತೆಗೆ ಹೇಗೆ ಬದುಕುತ್ತೇವೆ ಅನ್ನುವುದು ಕೂಡ ಮುಖ್ಯವಾಗಿದೆ. ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ. ಬೆಂಗಳೂರಿನಲ್ಲಿ ನಿಮ್ಹಾನ್ಸ್‌ನಂತಹ ಸಂಸ್ಥೆ ಇರುವುದು ನಮ್ಮ ರಾಜ್ಯದ ಸೌಭಾಗ್ಯ. ಸಾಂಕ್ರಾಮಿಕವಲ್ಲದ ರೋಗಗಳಿಂದಲೂ ಬ್ರೈನ್‌ಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿದೆ ಎಂದು ಹೇಳಿದರು.

ಶಾಲೆಗಳಲ್ಲಿ ಮಕ್ಕಳ ಅಪೌಷ್ಟಿಕತೆ, ರಕ್ತಹೀನತೆ ಪರೀಕ್ಷೆ ಮಾಡಿ: ಸಚಿವ ಸುಧಾಕರ್‌ ಸೂಚನೆ

ಭಾರತ ಸರ್ಕಾರ ಟೆಲಿ ಮನಸ್‌ ಮೂಲಕ ಮಾನಸಿಕ ರೋಗಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಭಿಯಾನವನ್ನು ಮಾಡುತ್ತಿದೆ. ರಾಜ್ಯ ಸರ್ಕಾರ ಪಾಶ್ರ್ವವಾಯು ಚಿಕಿತ್ಸೆ ಒದಗಿಸುವ ಹಬ್‌ ಮತ್ತು ಸ್ಟ್ರೋಕ್‌ ಮಾದರಿ ಕೇಂದ್ರಗಳನ್ನು ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಹಾನ್ಸ್‌ ನೆರವಿನೊಂದಿಗೆ ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸೇವೆ ರಾಜ್ಯದ ಎಲ್ಲಾ ಕಡೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು. ನಿಮ್ಹಾನ್ಸ್‌ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ, ಕೇಂದ್ರ ಸರ್ಕಾರದ ನೀತಿ ಆಯೋಗದ ಸದಸ್ಯ ಪ್ರೋ.ವಿನೋದ್‌ ಕೆ ಪೌಲ್‌ ಇದ್ದರು.

ಆಯುಷ್ಮಾನ್‌ ಭಾರತಕ್ಕೆ ಡಿಜಿಟಲ್‌ ವೇಗದ ಸ್ಪರ್ಶ: ಸಚಿವ ಸುಧಾಕರ್‌

ಪಿಎಚ್‌ಸಿ ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಕೌನ್ಸಿಲಿಂಗ್‌ ಹಾಗೂ ಚಿಕಿತ್ಸೆ ನೀಡುವ ಬಗ್ಗೆ 3 ತಿಂಗಳ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಸಹಾಯಕ ಆರೋಗ್ಯ ಕಾರ್ಯರ್ತರು ಹಾಗೂ ಆಶಾ ಕಾರ್ಯಕರ್ತೆಯರಿಗೂ ಈ ಸಂಬಂಧ ತರಬೇತಿ ನೀಡಲು ಯೋಜನೆ ರೂಪಿಸಲಾಗಿದೆ. ಮಾನಸಿಕ ರೋಗಿಗಳ ನಿಗಾ, ಸಾಮಾನ್ಯ ಥೆರಪಿ ಚಿಕಿತ್ಸೆಗಳ ನೀಡುವ ಬಗ್ಗೆ ತಿಳಿಸಲಾಗುವುದು.
-ಡಾ.ಕೆ.ಸುಧಾಕರ್‌, ಆರೋಗ್ಯ ಸಚಿವ

Follow Us:
Download App:
  • android
  • ios