ದಾವಣಗೆರೆ ಜಿಲ್ಲೆಯಲ್ಲಿ ನರೇಗಾ ಕಾಮಗಾರಿಯನ್ನು ಹೆಚ್ಚಿಸಿ: ಸಂಸದ ಜಿ.ಎಂ.ಸಿದ್ದೇಶ್ವರ
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನರೇಗಾ ಕಾಮಗಾರಿ ಕಡಿಮೆ ಆಗಿದೆ. ಹೆಚ್ಚು ಕಾಮಗಾರಿ ಕೈಗೊಳ್ಳುವಂತೆ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಸೂಚಿಸಿದರು.
ದಾವಣಗೆರೆ (ಮಾ.15): ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನರೇಗಾ ಕಾಮಗಾರಿ ಕಡಿಮೆ ಆಗಿದೆ. ಹೆಚ್ಚು ಕಾಮಗಾರಿ ಕೈಗೊಳ್ಳುವಂತೆ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಸೂಚಿಸಿದರು. ದಾವಣಗೆರೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ( ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಗಳೂರು ತಾಲೂಕಿನಲ್ಲಿ ನರೇಗಾ ಕಾಮಗಾರಿ ಪ್ರಗತಿ ಹೆಚ್ಚಾಗಿ ಇಲ್ಲ ಇದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು. ದಾವಣಗೆರೆ ಮತ್ತು ಜಗಳೂರು ತಾಲೂಕಿನಲ್ಲಿ ಬಹುತೇಕ ಕೆರೆಗಳು ತುಂಬಿವೆ. ಕೆರೆಗಳಲ್ಲಿ ನರೇಗಾ ಕಾಮಗಾರಿ ಕೈಗೊಳ್ಳಬೇಕು. ಕಾರ್ಮಿಕ ವಲಯದಿಂದ ಬೇಡಿಕೆ ಕಡಿಮೆ ಇದೆ.
ಹಾಗಾಗಿ ಹೆಚ್ಚಿನ ಪ್ರಗತಿ ಕಾಣುತ್ತಿಲ್ಲ ಎಂದು ಸಿಇಒ ಡಾ.ಚನ್ನಪ್ಪ ತಿಳಿಸಿದರು. ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಸಾಲಿನಂತೆ ಹತ್ತು ಲಕ್ಷ ಮಾನವ ದಿನ ಸೃಜಿಸುವ ಗುರಿ ಇದೆ. ಮುಂದಿನ ವರ್ಷಗಳಲ್ಲಿ ಇದೇ ಗುರಿ ಮುಂದುವರೆಸಲಾಗುವುದು ಎಂದು ಸಿಇಒ ತಿಳಿಸಿದರು. ಸಮಿತಿಯ ಎಸ್. ಎಸ್. ಮಂಜುನಾಥ್, ನರೇಗಾ ಕಾಮಗಾರಿಯಡಿ ಬಾಕ್ಸ್ ಚರಂಡಿ ಗೆ ಒತ್ತು ನೀಡಲಾಗುತ್ತಿದೆ. ಕೆಲವು ಕಾಮಗಾರಿ ಕಾರ್ಯಾದೇಶ ತಿರಸ್ಕರಿಸಲಾಗುತ್ತಿದೆ ಎಂದು ತಿಳಿಸಿದರು. ಶಾಸಕ ಪ್ರೊ.ಎನ್. ಲಿಂಗಣ್ಣ, ಮೇಯರ್ ವಿನಾಯಕ ಪೈಲ್ವಾನ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ. ಚನ್ನಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಎಚ್‌ಡಿಡಿ, ಎಚ್ಡಿಕೆಗೆ ಮೋಸ ಮಾಡಿದ ಬಾಲಕೃಷ್ಣ: ಶಾಸಕ ಮಂಜುನಾಥ್
ದಾವಣಗೆರೆಯಲ್ಲಿ ಸಿರಿಧಾನ್ಯ ಜಾಗೃತಿ ಜಾಥಾ: 2023ನೇ ಸಾಲಿನ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ ಸಿರಿಧಾನ್ಯ ಬೆಳೆಗಳನ್ನು ಬೆಳೆಸುವ ಹಾಗೂ ಬಳಸುವ ಕುರಿತು ಜಾಗೃತಿ ಮೂಡಿಸಲು ಕೃಷಿ ಇಲಾಖೆ ಸಹಯೋಗದಲ್ಲಿ ಬುಧವಾರ ನಗರದ ವಿದ್ಯಾನಗರದ ಶ್ರೀಆಂಜನೇಯ ದೇವಸ್ಥಾನದಿಂದ ಬೆಳಿಗ್ಗೆ ಸಿರಿಧಾನ್ಯ ನಡಿಗೆ, ಆರೋಗ್ಯದ ಕಡೆಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಾಥಾ ಕಾರ್ಯಕ್ರಮದಲ್ಲಿ ಕೊರಲೆ ತಿಂದವರು ಕೊರಗೋದು ಬಿಡಿ, ಜೋಳ ತಿಂದವರು ತೋಳದ ಹಾಗೆ, ಸಜ್ಜೆ ತಿಂದವರು ಉತ್ಸಾಹದ ಕಳೆ ಹೊಂದುವರು, ಹಾರಕ ತಿಂದವರು ಹಾರಾಡ್ತ ಹೋದ್ರು, ಕೊರಲೆ ತಿಂದವರು ಹಕ್ಕಿಯಂತೆ ಹಾರಾಡುವರು,
ಬರಗು ಇದ್ರೆ ಬರಗಾಲದಲ್ಲೂ ಬದುಕು, ಸಿರಿಧಾನ್ಯ ತಿಂದವರು ಆರೋಗ್ಯದಿಂದ ಸಿರಿವಂತರಾಗುವರು, ಬರಗು ತಿಂದವರು ಕಾಂತಿಯಿಂದ ಬೆಳಗುವರು, ಊದಲು ತಿಂದವರಿಗೆ ಉಬ್ಬಸ ಇಲ್ಲ, ಸಾಮೆ ತಿಂದವರು ಆಮೆಯಂತೆ ದೀರ್ಘಾಯುಷ್ಯಿಗಳಾಗುವರು, ಬರಗಾಲದ ಮಿತ್ರರು ಸಿರಿಧಾನ್ಯಗಳು, ನವಣೆ ತಿಂದವರು ಬುದ್ಧಿವಂತರಾಗುವರು, ರಾಗಿ ತಿಂದವ ನಿರೋಗಿ ಎಂಬ ಘೋಷಣೆಗಳನ್ನು ಕೂಗುತ್ತಾ ನಗರದ ಗುಂಡಿ ಸರ್ಕಲ್ ಮುಖಾಂತರ, ಲಕ್ಷ್ಮೀ ಫೆಲೕರ್‌ಮಿಲ್ ಮಾರ್ಗವಾಗಿ ಸರ್ಕಾರಿ ನೌಕರರ ಭವನ, ಕ್ಲಾಕ್ ಟವರ್ ಮಾರ್ಗವಾಗಿ ಜಾಥಾ ನಡೆಯಿತು.
ಬಿಜೆಪಿ ಸರ್ಕಾರ ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯ ದಿವಾಳಿ: ರಣದೀಪ್ ಸಿಂಗ್ ವಾಗ್ದಾಳಿ
ಈ ಜಾಥಾದಲ್ಲಿ ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ಉಪ ಕೃಷಿ ನಿರ್ದೇಶಕ ಆರ್. ತಿಪ್ಪೇಸ್ವಾಮಿ, ಸಹಾಯಕ ಕೃಷಿ ನಿರ್ದೇಶಕ ಡಿ.ಎಂ.ಶ್ರೀಧರಮೂರ್ತಿ, ದಾವಣಗೆರೆ ತಾಲೂಕು ಹಾಗೂ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ರಾಜ್ಯ ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಲೋಕಿಕೆರೆ ನಾಗರಾಜ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಾಲಾಕ್ಷಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎ.ಆರ್.ಉಜ್ಜಿನಪ್ಪ, ಹಾಗೂ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಮತ್ತು ನೌಕರರ ಸಂಘದ ಪದಾಧಿಕಾರಿಗಳು, ಕೃಷಿ ಇಲಾಖೆ, ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಸದಸ್ಯರು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಕೃಷಿ ಪರಿಕರ ಮಾರಾಟಗಾರರ ಸಂಘದ ಸದಸ್ಯರು, ವಿವಿಧ ಇಲಾಖೆಗಳ ನೌಕರರು ಭಾಗವಹಿಸಿದ್ದರು.