ಹೆಚ್ಚಿದ ತಾಪಮಾನ : ಆರೋಗ್ಯದ ದೃಷ್ಟಿಯಿಂದ ಬಿಸಿಲಿಗೆ ಮೈ ಒಡ್ಡುವ ಮುನ್ನ ಎಚ್ಚರ
ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ
ಮೈಸೂರು : ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡಿದ ಮುಂಜಾಗ್ರತಾ ಕ್ರಮಗಳನ್ನು ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮನವಿ ಮಾಡಿದ್ದಾರೆ.
ರಾಜ್ಯದ 25 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದ ಉಷ್ಣಾಂಶ; ರಾಯಚೂರಲ್ಲಿ 46.7 ಡಿಗ್ರಿ ದಾಖಲು
ಸಾರ್ವಜನಿಕರು ರೇಡಿಯೋ, ಟಿವಿ, ದಿನಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು ಎಂದು ಸಲಹೆ ನೀಡಿದ್ದಾರೆ.
ದಕ್ಷಿಣ ಭಾರತದಲ್ಲಿ ಏಪ್ರಿಲ್ ಬಿಸಿಲು 123 ವರ್ಷಗಳಲ್ಲೇ 2ನೇ ಗರಿಷ್ಠ!
ಬಸ್ ನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ, ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗುವುದು ಉತ್ತಮ. ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈ, ಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು ಎಂದು ಅವರು ತಿಳಿಸಿದ್ದಾರೆ.