ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ - ಎ.ಎಸ್‌. ಮಹದೇವು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ ಮಾ. 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎ.ಎಸ್‌.ಮಹದೇವು ಹೇಳಿದರು.

 Indefinite strike from March 1 Mahadev  snr

 ಎಚ್‌.ಡಿ.ಕೋಟೆ :  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ ಮಾ. 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎ.ಎಸ್‌.ಮಹದೇವು ಹೇಳಿದರು.

2023-24ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಯಾವುದೇ ಪ್ರಸ್ತಾಪ ಮಾಡದಿರುವುದು ನಿರಾಶೆ ಮೂಡಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ, ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲು ನಿರ್ಣಯ ಕೈಗೊಂಡಿದೆ.

6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಮುಂಚೆ ಶೇ 40 ಸೌಲಭ್ಯವನ್ನು 2022ರ ಜು. 1ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಬೇಕು ಎಂದರು.

ರಾಜ್ಯ ಎನ್‌ಪಿಎಸ್‌ ನೌಕರರನ್ನು ಓಪಿಎಸ್‌ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ, ಪಂಜಾಬ್‌, ರಾಜಸ್ಥಾನ, ಚತ್ತೀಸ್‌ಘಡ್‌, ಜಾರ್ಬಂಡ್‌, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಯೋಜನೆಯನ್ನು ಜಾರಿಗೊಳಿಸುವುದಕ್ಕಾಗಿ ಹೋರಾಟ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಎಚ್‌.ಡಿ. ಕೋಟೆ ಮತ್ತು ಸರಗೂರು ತಾಲೂಕಿನ ಎಲ್ಲ ಸರ್ಕಾರಿ ಅಧಿಕಾರಿ - ನೌಕರರು ಬೆಂಬಲುಸುವಂತೆ ಮನವಿ ಮಾಡಿದರು. ಗೌರವಾಧ್ಯಕ್ಷ ಬಸವರಾಜು, ರಾಜ್ಯ ಪರಿಷತ್‌ ಸದಸ್ಯ ಮಹದೇವು, ಕಾರ್ಯದರ್ಶಿ ಎಸ್‌.ಬಿ.ಸೋಮಸುಂದರ, ಸೋಮಶೇಖರ್‌, ಸುರೇಶ್‌, ಬಿ.ಎಸ್‌. ಮಂಜುನಾಥ್‌ ಇದ್ದರು.

ಅಧಿಕ ಪಿಂಚಣಿ ಪಡೆಯಲು ಅವಕಾಶ

ವೇತನ ಪಡೆಯುವ ಪ್ರತಿ ವ್ಯಕ್ತಿಯೂ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (ಇಪಿಎಫ್ಒ) ಖಾತೆ ಹೊಂದಿರುತ್ತಾನೆ. ಹೀಗಿರುವಾಗ ಉದ್ಯೋಗಿಗಳ ಪಿಂಚಣಿ ಯೋಜನೆ (ಇಪಿಎಸ್) ಅಡಿಯಲ್ಲಿ ನಿವೃತ್ತಿ ಬಳಿಕ ಅಧಿಕ ಪಿಂಚಣಿ ಪಡೆಯಲು ಯಾರು ಅರ್ಹರಾಗಿದ್ದರೋ ಅಂಥ ಉದ್ಯೋಗಿಗಳಿಗೆ ಇಪಿಎಫ್ಒ ಫೆ.20ರಂದು ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಉದ್ಯೋಗಿ ಹಾಗೂ ಉದ್ಯೋಗದಾತ ಸಂಸ್ಥೆ ಜಂಟಿಯಾಗಿ ಅರ್ಜಿ ಸಲ್ಲಿಸಲು ಇಪಿಎಫ್ಒ ಅವಕಾಶ ಕಲ್ಪಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಅಧಿಕ ಪಿಂಚಣಿ ಕೋರಿ ಅರ್ಜಿ ಸಲ್ಲಿಸಲು ಇಪಿಎಫ್ ಒ ಅವಕಾಶ ನೀಡಿದೆ. ಸುಪ್ರೀಂ ಕೋರ್ಟ್ ಇತ್ತೀಚಿನ ತೀರ್ಪು 2023ರ ಮಾರ್ಚ್ 3ರ ತನಕ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಿತ್ತು.  ಉದ್ಯೋಗಿಗಳ ಪಿಂಚಣಿ ಯೋಜನೆಗೆ 2014ರಲ್ಲಿ ತಿದ್ದುಪಡಿ ತರಲಾಗಿದ್ದು, ಇದನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿದ್ದು 2022ರ ನವೆಂಬರ್ 4ರಂದು ತೀರ್ಪು ಪ್ರಕಟಿಸಿದೆ. ಈ ತೀರ್ಪನ್ನು ಎಲ್ಲ ಕಚೇರಿಗಳು ಜಾರಿ ಮಾಡಬೇಕೆಂದು ಇಪಿಎಫ್ ಒ ಸೂಚನೆ ನೀಡಿದೆ. ಹಾಗೆಯೇ ಅಧಿಕ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸೋದು ಹೇಗೆ ಎಂಬ ಬಗ್ಗೆ ಕೂಡ ಮಾರ್ಗಸೂಚಿಯಲ್ಲಿ ಮಾಹಿತಿ ನೀಡಿದೆ.

2014ರ ಆಗಸ್ಟ್ 22ರಂದು ಇಪಿಎಸ್ ಪರಿಷ್ಕರಣೆ ಮಾಡಲಾಗಿದ್ದು, ಪಿಂಚಣಿ ಪಡೆಯಲು ವೇತನ ಮಿತಿಯನ್ನು ತಿಂಗಳಿಗೆ 6,500ರೂ.ನಿಂದ 15,000 ರೂ.ಗೆ ಏರಿಕೆ ಮಾಡಲಾಗಿತ್ತು. ಜೊತೆಗೆ ಉದ್ಯೋಗಿಗಳು ಹಾಗೂ ಉದ್ಯೋಗದಾತ ಸಂಸ್ಥೆಗಳು ಅವರ ವೇತನದ ಶೇ.8.33ರಷ್ಟನ್ನು ಇಪಿಎಸ್ ಗೆ ಕೊಡುಗೆಯಾಗಿ ನೀಡಲು ಅನುಮತಿ ನೀಡಲಾಗಿತ್ತು. ಸುಪ್ರೀಂ ಕೋರ್ಟ್ ಉದ್ಯೋಗಿಗಳ ಪಿಂಚಣಿ (ತಿದ್ದುಪಡಿ) ಯೋಜನೆ 2014 ಅನ್ನು ಕಳೆದ ವರ್ಷ ನವೆಂಬರ್ ನಲ್ಲಿ ಎತ್ತಿ ಹಿಡಿದಿತ್ತು ಕೂಡ. 

Latest Videos
Follow Us:
Download App:
  • android
  • ios