ಭಾರತ ಸನಾತನ ಹಿಂದು ಧರ್ಮದ ಸಂಪ್ರದಾಯ ಹೊಂದಿದೆ: ಕೆ.ಎಸ್.ಈಶ್ವರಪ್ಪ
ಭಾರತವು ಸನಾತನ ಹಿಂದು ಧರ್ಮದ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಸೇರಿದಂತೆ ತನ್ನದೇ ಆದ ಹಲವಾರು ವೈಶಿಷ್ಟ್ಯತೆಗಳನ್ನು ಹೊಂದಿದ್ದು, ಇಂತಹ ದೇಶದಲ್ಲಿ ಜನ್ಮತಾಳಿದ ನಾವೇ ಭಾಗ್ಯವಂತರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ರಾಣಿಬೆನ್ನೂರು (ನ.26): ಭಾರತವು ಸನಾತನ ಹಿಂದು ಧರ್ಮದ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಸೇರಿದಂತೆ ತನ್ನದೇ ಆದ ಹಲವಾರು ವೈಶಿಷ್ಟ್ಯತೆಗಳನ್ನು ಹೊಂದಿದ್ದು, ಇಂತಹ ದೇಶದಲ್ಲಿ ಜನ್ಮತಾಳಿದ ನಾವೇ ಭಾಗ್ಯವಂತರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ರಾತ್ರಿ ಶ್ರೀ ಮರಿಯಮ್ಮದೇವಿ ದೇವಸ್ಥಾನದ ಉದ್ಘಾಟನಾ ಸಮಾರಂಭದ ಅಂಗವಾಗಿ ಏರ್ಪಡಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವಸ್ಥಾನಗಳು ಹೆಚ್ಚಾಗಿ ಇರುವ ಸ್ಥಳಗಳು ಪಾವಿತ್ರತೆಯನ್ನು ಹೊಂದಿರುತ್ತವೆ. ಅಲ್ಲಿ ಸಂಸ್ಕಾರ, ಸಂಸ್ಕೃತಿ ಇರುತ್ತದೆ ಎಂದರು.
ಮಕ್ಕಳಲ್ಲಿ ಧಾರ್ಮಿಕ ಮನೋಭಾವನೆ, ಗುರು-ಹಿರಿಯರನ್ನು ಗೌರವಿಸುವ, ತಂದೆ-ತಾಯಿಯರನ್ನು ಪೂಜ್ಯ ಭಾವನೆಯಿಂದ ಕಾಣುವ ಪ್ರವೃತ್ತಿಯನ್ನು ಬೆಳೆಸಬೇಕು. ಹೀಗಾದಲ್ಲಿ ಅಂತಹ ಮಕ್ಕಳು ಸಮಾಜದಲ್ಲಿ ಆದರ್ಶರಾಗಿರಲು ಸಾಧ್ಯ. ಗ್ರಾಮೀಣ ಭಾಗಗಳಲ್ಲಿ ವಿವಿಧ ಆಚರಣೆ, ಹಬ್ಬ, ಜಾತ್ರೆ ಹೀಗೆ ಹಲವಾರು ಸಂಪ್ರದಾಯಗಳನ್ನು ಹೆಚ್ಚಾಗಿ ಪಾಲಿಸಿಕೊಂಡು ಬರಲಾಗಿದೆ. ಗ್ರಾಮೀಣರಿಂದಲೇ ನಮ್ಮ ದೇಶದ ಸಂಸ್ಕ್ರತಿ ಉಳಿದುಕೊಂಡು ಬಂದಿದೆ ಎಂದರು. ಕಾಂತೇಶ ಕೆ.ಇ., ಸಿದ್ದಣ್ಣ ಚಿಕ್ಕಬಿದರಿ, ನಿಂಗಪ್ಪ ಹೊಳಲು, ವಿ.ಎಸ್. ಹಿರೇಮಠ, ಮಾಲತೇಶ ಹೆಗ್ಗಣ್ಣನವರ, ಪುಟ್ಟಪ್ಪ ಪೂಜಾರ, ಯಲ್ಲಪ್ಪ ಹರಿಜನ, ಶೇಖಪ್ಪ ಹರಿಜನ, ಫಕ್ಕಿರೇಶ ಹರಿಜನ ಮತ್ತಿತರರು ಉಪಸ್ಥಿತರಿದ್ದರು.
ಎಂಪಿ ಚುನಾವಣೆವರೆಗೂ ಸರ್ಕಾರದ ಜಾತಿಗಣತಿ ನಾಟಕ: ಎಚ್‌ಡಿಕೆ
ಸಚಿವ ಸಂಪುಟವು ಕಳ್ಳರ ಗ್ಯಾಂಗ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಕಾನೂನು ಬಾಹಿರ, ಸಿದ್ದರಾಮಯ್ಯ ಅವರ ಸರ್ಕಾರದ ಇಡೀ ಸಂಪುಟ ಸಭೆಯು ಕಳ್ಳರ ಗ್ಯಾಂಗ್ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗಂಭೀರವಾದ ಆರೋಪ ಮಾಡಿದರು. ಅವರು ಸಮೀಪದ ಹುಲ್ಲೂರ ಗ್ರಾಮದಲ್ಲಿ ಅಮೋಘ ಸಿದ್ದೇಶ್ವರ ನೂತನ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ಪಟ್ಟಣದ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಡಿಕೆಶಿ ಮೇಲಿನ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧ ಪಟ್ಟಂತೆ ಸಿಬಿಐಗೆ ವಹಿಸಿರುವ ಪ್ರಕರಣವನ್ನು ಸಿದ್ದರಾಮಯ್ಯ ಅವರ ಸಚಿವ ಸಂಪುಟವು ವಾಪಸ್ ತೆಗೆದುಕೊಳ್ಳಲು ನಿರ್ಣಯ ತೆಗೆದುಕೊಂಡಿರುವುದು ಕಾಂಗ್ರೆಸ್ ಅವನತಿಯ ಸೂಚಕವಾಗಿದೆ. ಅದಕ್ಕಾಗಿ ಸಿದ್ದರಾಮಯ್ಯ ಸರ್ಕಾರದ ಇಡೀ ಸಚಿವ ಸಂಪುಟ ಕಳ್ಳರ ಗ್ಯಾಂಗ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಹಾಗೂ ಎಚ್. ಕೆ. ಪಾಟೀಲ ಅವರು ಕಾನೂನಿನ ಜ್ಞಾನವುಳ್ಳವರು, ಅವರು ಹೇಳಲಿ ನೋಡೋಣ, ಸಿಬಿಐಗೆ ವಹಿಸಿರುವ ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುತ್ತಿರುವ ದೇಶದಲ್ಲಿ ಮೊದಲ ಪ್ರಕರಣ ಇದು. ಪ್ರಕರಣದ ತನಿಖೆ ಶೇ. 80ರಷ್ಟು ಮುಗಿದಿರುವ ಸಂದರ್ಭದಲ್ಲಿ ಪ್ರಕರಣ ತಡೆಹಿಡಿಯಲು ಡಿಕೆಶಿ ಅವರು ಕೋರ್ಟಿಗೆ ಹೋಗಿ ಬಂದಿದ್ದಾರೆ. ಎಲ್ಲ ಕೋರ್ಟುಗಳಲ್ಲಿ ಅದು ತಿರಸ್ಕೃತವಾಗಿದೆ ಎಂದರು.
ಡಿಕೆಶಿ ಸಿಬಿಐ ಕೇಸ್ ವಾಪಸಿನ ನಿರ್ಧಾರಕ್ಕೆ ಛೀಮಾರಿ ಬೀಳಲಿದೆ: ಎಚ್.ಡಿ.ಕುಮಾರಸ್ವಾಮಿ
ಡಿ.ಕೆ.ಶಿವಕುಮಾರ ಅವರು ₹ 163 ಕೋಟಿ ಅಕ್ರಮ ಆಸ್ತಿಗಳಿಕೆ ಮಾಡಿಕೊಂಡಿದ್ದಾರೆ. ಐದು ವರ್ಷದಲ್ಲಿ 140 ಕೋಟಿ ರು. ಹೆಚ್ಚುವರಿ ಆಸ್ತಿ ಮಾಡಿಕೊಂಡಿರುವ ಪ್ರಕರಣವನ್ನು ಸಿಬಿಐ ಎತ್ತಿ ತೋರಿಸಿದೆ. ಅಕ್ರಮವಾಗಿ ಲೂಟಿ ಮಾಡಿ ಆಸ್ತಿ ಮಾಡಿಕೊಂಡಿರುವ ಪ್ರಕರಣವನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಟೀಕಿಸಿದರು. ಸಿಬಿಐಗೆ ವಹಿಸಿದ್ದ ಪ್ರಕರಣವನ್ನು ವಾಪಸ್ ಪಡೆಯುವುದರ ವಿರುದ್ಧ ಬಿಜೆಪಿ ಕೋರ್ಟಿಗೆ ಹೋಗುವ ಕಾರ್ಯ ಮಾಡುತ್ತೇವೆ ಎಂದು ಹೇಳಿದ ಅವರು, ಬಿಜೆಪಿದಲ್ಲಿ ಅಧ್ಯಕ್ಷ ಹುದ್ದೆಯ ಕೆಲ ಆಕಾಂಕ್ಷಿಗಳು ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವುದು ಸಹಜ, ಪಕ್ಷದ ಹಿರಿಯರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೆ ಹೋಗುತ್ತಾರೆ ಎನ್ನುವ ವಿಶ್ವಾಸ ನಮ್ಮದಾಗಿದೆ ಎಂದರು.