Asianet Suvarna News Asianet Suvarna News

ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ದೇಶವಾಗಲಿದೆ ಭಾರತ : ಡಾ.ಜಿ.ಪರಮೇಶ್ವರ

ಮುಂದಿನ ಹತ್ತು ವರ್ಷಗಳಲ್ಲಿ ಭಾರತ ವಿಶ್ವದ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ದೇಶವಾಗಿ ರೂಪುಗೊಳ್ಳಲಿದೆ ಎಂದು ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಏಜುಕೇಷನ್ (ಸಾಹೇ) ವಿವಿ ಕುಲಾಧಿಪತಿ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟರು.

India will become a giant country in the field of technology: Dr. G. Parameshwar  snr
Author
First Published Sep 24, 2023, 10:16 AM IST

ತುಮಕೂರು: ಮುಂದಿನ ಹತ್ತು ವರ್ಷಗಳಲ್ಲಿ ಭಾರತ ವಿಶ್ವದ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ದೇಶವಾಗಿ ರೂಪುಗೊಳ್ಳಲಿದೆ ಎಂದು ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಏಜುಕೇಷನ್ (ಸಾಹೇ) ವಿವಿ ಕುಲಾಧಿಪತಿ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟರು.

ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ 2023-24 ನೇ ಶೈಕ್ಷಣಿಕ ಸಾಲಿನ 45 ನೇ ಹೊಸ ಬ್ಯಾಚಿನ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್‌ನ ಲುಂಬಿಣಿ ರಿಕ್ರಿಯೇಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಸ್ವಾಗತದದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವರ್ಷಕ್ಕೆ 18 ಲಕ್ಷ ಇಂಜಿನಿಯರ್ ಪದವೀಧರರನ್ನು ವಿಶ್ವಕ್ಕೆ ಕೊಡೆಗೆಯಾಗಿ ನೀಡುತ್ತಿರುವ ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ, ರಷ್ಯಾ, ಚೀನಾ ಜಪಾನ್ ದೇಶಗಳಿಂತ ಮುಂಚೂಣಿಯಲ್ಲಿದೆ ಎಂದರು.

2023-24 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ದಾಖಲಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅವರು ತುಮಕೂರು ಜಿಲ್ಲೆ ಕೈಗಾರಿಕಾ ಹಬ್ ಆಗಿ ಬೆಳವಣಿಗೆಯಾಗುತ್ತಿದ್ದು, ಮುಂದಿನ 5-10 ವರ್ಷಗಳಲ್ಲಿ ಜಿಲ್ಲೆಯ ವಸಂತನರಸಾಪುರ ಕೈಗಾರಿಕಾ ಪ್ರದೇಶ ಒಂದರಲ್ಲೇ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಇಂಜಿನಿಯರ್‌ಗಳಿಗೆ ಉದ್ಯೋಗ ದೊರೆಯಲಿದೆ. ಈಗಾಗಲೇ ಜಪಾನೀಸ್ ಟೌನ್ ಶಿಪ್, ತುಮಕೂರು ಮಿಷನ್ ಟೂಲ್ ಪಾರ್ಕ್, ಟಿಮೇಕ್ ಸೇರಿದಂತೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಳೆದ 44 ವರ್ಷಗಳಲ್ಲಿ ಸಿದ್ದಾರ್ಥ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡಿದ 36 ಸಾವಿರ ಇಂಜಿನಿಯರಿಂಗ್ ಪದವೀಧರರು ಪ್ರಪಂಚದ ನಾನಾ ಭಾಗಗಳಲ್ಲಿ, ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಎಂದು ಪರಿಚಯಿಸಿಕೊಂಡು ಮಾತನಾಡಿಸಿದಾಗ ಹೆಮ್ಮೆ ಅನಿಸುತ್ತದೆ ಎಂದರು.

ದೇಶದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3ರಲ್ಲಿ ನಮ್ಮ ಸಿದ್ದಾರ್ಥ ತಾಂತ್ರಿಕ ಮಹಾ ವಿದ್ಯಾಲಯದ ಹಳೆಯ ವಿದ್ಯಾರ್ಥಿ ಕಾರ್ಯನಿರ್ವಸಿರುವುದು ನಮ್ಮ ಹೆಮ್ಮೆ. ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳನ್ನು ಜಾರಿಗೊಳಿಸಿ ಪರಿಣಾಮ ಇಸ್ರೋ ತಂಡಲಲ್ಲೂ ಶೇ.50 ರಷ್ಟು ಮಹಿಳಾ ವಿಜ್ಞಾನಿಗಳು ಕಾರ್ಯನಿರ್ವಹಿಸಿರುವುದೇ ಸಾಕ್ಷಿ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ತುಮಕೂರು ವಿವಿ ಸ್ನಾತಕೋತ್ತರ ಕಾನೂನು ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಎಮೋಹನ್ ರಾಮ್, ವಿದ್ಯಾರ್ಥಿಗಳು ಪಠ್ಯದ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬಗೇಕು, ತಮ್ಮ ಮಾತೃ ಭಾಷೆಯ ಜೊತಗೆ ಆಂಗ್ಲ ಭಾಷಾ ಕಲಿಕೆಗೂ ಒತ್ತು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಸಾಹೇ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಮಾತನಾಡಿ ನಮ್ಮ ಸಾಹೇ ವಿಶ್ವವಿದ್ಯಾಲಯವು ಇತ್ತೀಚಿಗೆ ನ್ಯಾಕ್ ಎ+ ಶ್ರೇಣಿ ಪಡೆದಿದ್ದು, ಸಂಸ್ಥೆಯು ಉನ್ನತ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತವನ್ನು ತಲುಪಿಸುವಲ್ಲಿ ಯಶಸ್ವಿಯಾಗಿರುವುದು ನಮ್ಮ ಸಂಸ್ಥೆಯ ಹೆಮ್ಮೆ ಎಂದು ಹರ್ಷ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್.ರವಿಪ್ರಕಾಶ್, ಸಂಸ್ಥೆಯ ಕಾರ್ಯ ಚಟುವಟಿಕೆ, ಸೌಲಭ್ಯ, ಅವಕಾಶಗಳು ಮತ್ತು ತಾಂತ್ರಿಕ ಮೂಲ ಸೌಕರ್ಯ ಸೇರಿದಂತೆ ಕ್ಯಾಂಪಸ್ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳು ಅನಿಸಿಕೆಗಳನ್ನು ಹಂಚಿಕೊಂಡರು. ಸಾಹೇ ವಿವಿ ಕುಲಾಧಿಪತಿಗಳ ಸಲಹೆಗಾರರಾದ ವಿವೇಕ್ ವೀರಯ್ಯ, ಸಿದ್ಧಾರ್ಥ ಡೆಂಡಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರವೀಣ್ ಕುಳುವ, ಡೀನ್‌ಗಳಾದ ಪ್ರೊ.ರೇಣುಕಾಲತಾ, ರಾಜಾನಾಯಕ್, ಪರೀಕ್ಷಾ ವಿಭಾಗದ ಕುಲಸಚಿವರಾದ ಸುಮು ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು..

Follow Us:
Download App:
  • android
  • ios