ಸೇನಾ ನೇಮಕಾತಿಗಾಗಿ ಉಚಿತ ತರಬೇತಿ| ಮಡಿಕೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅ.13 ರಿಂದ 18 ರವರೆಗೆ ಭಾರತೀಯ ಸೇನಾ ಭರ್ತಿ ರ‍್ಯಾಲಿ|  ಉಚಿತವಾಗಿ ಪೂರ್ವಭಾವಿ ತರಬೇತಿ|  ಆಸಕ್ತಿಯುಳ್ಳ ಅಭ್ಯರ್ಥಿಗಳು ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಬಹುದು| 

ಮೈಸೂರು: ಮೈಸೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದೊಂದಿಗೆ ಮಡಿಕೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅ.13 ರಿಂದ 18 ರವರೆಗೆ ಭಾರತೀಯ ಸೇನಾ ಭರ್ತಿ ರ‍್ಯಾಲಿ ನಡೆಯಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred


ಈ ರ‍್ಯಾಲಿಯಲ್ಲಿ ಭಾಗವಹಿಸುವ ಇಚ್ಛಿಸುವ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳಿಗಾಗಿ ಅ.1 ರಿಂದ 11 ರವರೆಗೆ ಉಚಿತವಾಗಿ ಪೂರ್ವಭಾವಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 


ಸೈನ್ಯ ಸೇರಲು ಆಸಕ್ತಿಯುಳ್ಳ ಅಭ್ಯರ್ಥಿಗಳು ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಲು ಸೆ.25ರ ಒಳಗಾಗಿ ಎರಡು ಬಣ್ಣದ ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ, ಅಂಕಪಟ್ಟಿಯ ನೆರಳಚ್ಚು ಪ್ರತಿಯೊಂದಿಗೆ ತಮ್ಮ ಹೆಸರುಗಳನ್ನು ಉಪ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮೈಸೂರು ಇಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ. 0821- 2425240, 2489972 ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.