ಬಡವರು ಪಾಲಿಗೆ ಆಸರೆಯಾಗಿದ್ದ ಇಂದಿರಾ ಕ್ಯಾಂಟೀನ್‌ ದಿಢೀರ್‌ ಬಂದ್‌..!

ಮೈಸೂರು-ಊಟಿ ಹೆದ್ದಾರಿಯ ಲೋಕೋಪಯೋಗಿ ಇಲಾಖೆಯ ಕಚೇರಿಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ ಗೇಟಿಗೆ ಬೀಗ ಜಡಿಯಲಾಗಿದೆ. ಇಂದಿರಾ ಕ್ಯಾಂಟೀನ್‌ ವಹಿಸಿಕೊಂಡಿರುವ ಗುತ್ತಿಗೆದಾರ ಕ್ಯಾಂಟೀನ್‌ ನಡೆಸುವ ಸಿಬ್ಬಂದಿಗೆ ಸಂಬಳ ನೀಡಿಲ್ಲ ಹಾಗೂ ಆಹಾರ ಪದಾರ್ಥಗಳನ್ನು ನೀಡುತ್ತಿಲ್ಲ ಎಂದು ಸಿಬ್ಬಂದಿ ಇಂದಿರಾ ಕ್ಯಾಂಟೀನ್‌ ಮುಚ್ಚಿ,ಗೇಟಿಗೆ ಬೀಗ ಹಾಕಿದ್ದಾರೆ.

Indira Canteen Suddenly Closed at Gundlupete in Chamarajanagara grg

ರಂಗೂಪುರ ಶಿವಕುಮಾರ್‌

ಗುಂಡ್ಲುಪೇಟೆ(ಅ.04):  ಬಡವರು, ಕಾರ್ಮಿಕರು, ವಿದ್ಯಾರ್ಥಿಗಳ ಪಾಲಿಗೆ ಆಸರೆಯಾಗಿದ್ದ ಪಟ್ಟಣದ ಇಂದಿರಾ ಕ್ಯಾಂಟೀನ್‌ ದಿಢೀರ್‌ ಬಂದ್‌ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಥಮ ಭಾರಿಗೆ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್‌ ಗುಂಡ್ಲುಪೇಟೆ ಪಟ್ಟಣದಲ್ಲೂ ಆರಂಭಗೊಂಡಿತ್ತು. ಈಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಬಂದಿದೆ ಮತ್ತೆ 2ನೇ ಭಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಅಲ್ಲದೆ ಗುಂಡ್ಲುಪೇಟೆ ಕ್ಷೇತ್ರದಲ್ಲಿಯೂ ಕಾಂಗ್ರೆಸ್‌ ಪಕ್ಷದ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್‌ ಇದ್ದರೂ ಇಂದಿರಾ ಕ್ಯಾಂಟೀನ್‌ ಬಾಗಿಲು ಮುಚ್ಚಿದೆ.

ಮೈಸೂರು-ಊಟಿ ಹೆದ್ದಾರಿಯ ಲೋಕೋಪಯೋಗಿ ಇಲಾಖೆಯ ಕಚೇರಿಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ ಗೇಟಿಗೆ ಬೀಗ ಜಡಿಯಲಾಗಿದೆ. ಇಂದಿರಾ ಕ್ಯಾಂಟೀನ್‌ ವಹಿಸಿಕೊಂಡಿರುವ ಗುತ್ತಿಗೆದಾರ ಕ್ಯಾಂಟೀನ್‌ ನಡೆಸುವ ಸಿಬ್ಬಂದಿಗೆ ಸಂಬಳ ನೀಡಿಲ್ಲ ಹಾಗೂ ಆಹಾರ ಪದಾರ್ಥಗಳನ್ನು ನೀಡುತ್ತಿಲ್ಲ ಎಂದು ಸಿಬ್ಬಂದಿ ಇಂದಿರಾ ಕ್ಯಾಂಟೀನ್‌ ಮುಚ್ಚಿ,ಗೇಟಿಗೆ ಬೀಗ ಹಾಕಿದ್ದಾರೆ.

ಚಾಮರಾಜನಗರ: ವೀಕ್ಷಣೆಗಿಲ್ಲ ಮಹದೇಶ್ವರನ 108 ಅಡಿ ಎತ್ತರದ ಪ್ರತಿಮೆ, ಮಾದಪ್ಪನ ಭಕ್ತರಿಗೆ ಭಾರೀ ನಿರಾಸೆ..!

ಪ್ರತಿ ದಿನ ಪಟ್ಟಣ ಕೂಲಿ ಕಾರ್ಮಿಕರು, ಬಡವರು ಹಾಗೂ ವಿದ್ಯಾರ್ಥಿಗಳು ಇಂದಿರಾ ಕ್ಯಾಂಟೀನ್‌ನಲ್ಲಿ ಉಪಾಹಾರ ಹಾಗೂ ಊಟ ಕಡಿಮೆ ಹಣದಲ್ಲಿ ಸೇವಿಸುತ್ತಿದ್ದರು. ಗುತ್ತಿಗೆದಾರ ಮತ್ತು ಸಿಬ್ಬಂದಿ ಕಿತ್ತಾಟದಲ್ಲಿ ಇಂದಿರಾ ಕ್ಯಾಂಟೀನ್‌ ಬಂದ್‌ ಆಗಿದೆ.

ವಾಪಸ್‌ ತೆರಳುತ್ತಿದ್ದಾರೆ

ಇಂದಿರಾ ಕ್ಯಾಂಟೀನ್‌ ಮಂಗಳವಾರ ಬೆಳಿಗ್ಗೆ ಬಂದಾಗಿ ಬೀಗ ಜಡಿದಿದ್ದ ಕಾರಣ ಬೆಳಿಗ್ಗೆ ಹಾಗು ಮಧ್ಯಾಹ್ನ ತಿಂಡಿ, ಊಟಕ್ಕಾಗಿ ಇಂದಿರಾ ಕ್ಯಾಂಟೀನ್‌ಗೆ ಜನರು ಬಂದು ವಾಪಸ್‌ ತೆರಳುತ್ತಿದ್ದರು. ‘ಇದೇನಪ್ಪ!

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇದೆ, ಜತೆಗೆ ಶಾಸಕರೂ ಕೂಡ ಕಾಂಗ್ರೆಸ್ ಪಕ್ಷದವರು ಆದರೂ ಬಡವರ ಪಾಲಿನ ಇಂದಿರಾ ಕ್ಯಾಂಟೀನ್‌ ಮುಚ್ಚಿರುವುದು ನನ್ನಂತ ಬಡವನಿಗೆ ದುಬಾರಿ ಹಣ ಕೊಟ್ಟು ಹೋಟಲ್‌ಗೆ ಹೋಗಕ್ಕಾಗಲ್ಲ’ ಎಂದು ಕೂಲಿ ಕಾರ್ಮಿಕ ಮಹದೇವಸ್ವಾಮಿ ಹೇಳಿದ.

ಇಂದಿರಾ ಕ್ಯಾಂಟೀನ್‌ ಮುಚ್ಚಿರುವ ಸಂಬಂಧ ಪುರಸಭೆ ಮುಖ್ಯಾಧಿಕಾರಿ ವಸಂತಕುಮಾರಿ ಕನ್ನಡಪ್ರಭದೊಂದಿಗೆ ಮಾತನಾಡಿ, ಕ್ಯಾಂಟೀನ್‌ ಸಿಬ್ಬಂದಿಗೆ ಗುತ್ತಿಗೆದಾರ ಸಂಬಳ ಕೊಟ್ಟಿಲ್ಲ ಎಂದು ಸಿಬ್ಬಂದಿ ಬಾಗಿಲು ಮುಚ್ಚಿದ್ದಾರೆ ಎಂದರು.

ಕುಟುಂಬ ಸಮೇತ ಮಲೆ ಮಹದೇಶ್ವರ ಸ್ವಾಮಿ ದರ್ಶನಕ್ಕೆ ಬಂದ  ನಟ ರಾಘವೇಂದ್ರ ರಾಜ್ ಕುಮಾರ್ 

ಯಾರು ಹೊಣೆ

ಬಡವರ ಪಾಲಿನ ಇಂದಿರಾ ಕ್ಯಾಂಟೀನ್‌ ಮುಚ್ಚಿದೆ. ಗುತ್ತಿಗೆದಾರ ಸಂಬಳ ಕೊಟ್ಟಿಲ್ಲ ಎಂಬ ಕಾರಣಕ್ಕೆ ಕ್ಯಾಂಟೀನ್‌ ಮುಚ್ಚಿದೆ ಎಂದರೆ ಬಡವರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳ ತಿಂಡಿ, ಊಟ ಸಿಗದಕ್ಕೆ ಯಾರು ಹೊಣೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ ಗುತ್ತಿಗೆದಾರ ಮೊಬೈಲ್‌ ಸಂಪರ್ಕಕ್ಕೆ ಸಿಕ್ಕಿಲ್ಲ. ಸಿಬ್ಬಂದಿಗೆ ಸಂಬಳ ಕೊಟ್ಟಿಲ್ಲ ಹಾಗೂ ಆಹಾರ ಪದಾರ್ಥ ನೀಡುತ್ತಿಲ್ಲ ಎಂಬ ಮಾತಿದೆ. ಈ ಸಂಬಂಧ ನೋಟೀಸ್‌ ಕೂಡ ಜಾರಿ ಮಾಡಿದ್ದೇನೆ ಎಂದು ಮುಖ್ಯಾಧಿಕಾರಿ ವಸಂತಕುಮಾರಿ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios