Asianet Suvarna News Asianet Suvarna News

ಇಂದಿರಾ ಕ್ಯಾಂಟೀನ್‌ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಇಂದಿರಾ ಕ್ಯಾಂಟೀನ್ ಮುಚ್ಚುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 

Indira Canteen to continue Says CM BS Yediyurappa
Author
Bengaluru, First Published Aug 29, 2019, 9:15 AM IST
  • Facebook
  • Twitter
  • Whatsapp

ಬೆಂಗಳೂರು [ಆ.29]: ಇಂದಿರಾ ಕ್ಯಾಂಟೀನ್‌ ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುತ್ತಿಲ್ಲ, ಅಲ್ಲದೆ, ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಕ್ರಮ ನಡೆದಿರುವ ಆರೋಪಗಳಿದ್ದು, ತನಿಖೆಗೆ ಸೂಚಿಸಲಾಗಿದೆ. ಕ್ಯಾಂಟೀನ್‌ಗಳನ್ನು ಮುಚ್ಚುವ ಯೋಚನೆ ಇಲ್ಲ. ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ತಡೆ ಹಿಡಿದಿಲ್ಲ. ಇಂದಿರಾ ಕ್ಯಾಂಟೀನ್‌ಗಳ ಹೆಸರು ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದರು.

Follow Us:
Download App:
  • android
  • ios