ಭಾರತ ಅಭಿವೃದ್ಧಿ ಹೊಂದಲು ಕೈಗಾರಿಕೋಧ್ಯಮದ ಪಾತ್ರವಿದೆ : ಡಾ.ಡಿ.ಎಸ್.ದೀಪ
ನಮ್ಮ ಭಾರತ ದೇಶವು ಆಧುನಿಕ ತಂತ್ರಜ್ಞಾನ ಬಳಕೆಯೊಂದಿಗೆ ಅಭಿವೃದ್ಧಿ ಹೊಂದಲು ಕೈಗಾರಿಕೋಧ್ಯಮವು ಪ್ರಮುಖ ಪಾತ್ರವಹಿಸಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕಿ ಡಾ.ಡಿ.ಎಸ್.ದೀಪ ತಿಳಿಸಿದರು.
ಕೊರಟಗೆರೆ : ನಮ್ಮ ಭಾರತ ದೇಶವು ಆಧುನಿಕ ತಂತ್ರಜ್ಞಾನ ಬಳಕೆಯೊಂದಿಗೆ ಅಭಿವೃದ್ಧಿ ಹೊಂದಲು ಕೈಗಾರಿಕೋಧ್ಯಮವು ಪ್ರಮುಖ ಪಾತ್ರವಹಿಸಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕಿ ಡಾ.ಡಿ.ಎಸ್.ದೀಪ ತಿಳಿಸಿದರು.
ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದಿಂದ ಎಂಎ ಹಾಗೂ ಬಿಎ ವಿದ್ಯಾರ್ಥಿಗಳಿಗೆ ಕೈಗಾರಿಕೆಯ ಪ್ರಾಯೋಗಿಕ ಅನುಭವದ ಬಗ್ಗೆ ಮಾಹಿತಿ ನೀಡಿ ಇಂದು ವಿದ್ಯಾರ್ಥಿಗಳಿಗೆ ಕೈಗಾರಿಕೋಧ್ಯಮದ ಪ್ರಾಯೋಗಿಕ ಅನುಭವವನ್ನು ತಿಳಿಸುವ ನಿಟ್ಟಿನಲ್ಲಿ ಡಾಬಸ್‌ಪೇಟೆಯ ಎಲ್ಎಮ್ ವಿಂಡ್ ಪವರ್ ಕೈಗಾರಿಕೋದ್ಯಮಕ್ಕೆ ಭೇಟಿ ನೀಡಲಾಯಿತು. ಇಲ್ಲಿನ ಸಿಬ್ಬಂದಿಯು ಈಗಾಗಲೇ ಕೈಗಾರಿಕೋದ್ಯಮದ ಪ್ರಾಯೋಗಿಕದ ಅನುಭವವನ್ನು ವಿದ್ಯಾರ್ಥಿಗಳ ಬಳಿ ಹಂಚಿಕೊಂಡು ಅವರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಕೈಗಾರಿಕೋದ್ಯಮದ ಬಗ್ಗೆ ಹೆಚ್ಚಿನ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಡಾಬಸ್‌ಪೇಟೆಯ ಎಲ್ಎಮ್ ವಿಂಡ್ ಪವರ್ ಕೈಗಾರಿಕೋದ್ಯಮಕ್ಕೆ ಭೇಟಿ ನೀಡಿ ಅಲ್ಲಿನ ಕಂಪನಿಯ ಮ್ಯಾನೇಜರ್ ಸುಬ್ರಹ್ಮಣ್ಯ ಹಾಗೂ ಸಿಬ್ಬಂದಿಗಳಾದ ಮೇಘಾ, ರಂಗನಾಥ್, ಪ್ರಸಾದ್ ಮೊದಲಾದವರು ಕೈಗಾರಿಕೆ ಪ್ರಕ್ರಿಯೆಗಳ ಬಗ್ಗೆ ಪ್ರಾಯೋಗಿಕ ಅನುಭವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಮಾಹಿತಿ ಒದಗಿಸಿದರು. ಈ ವೇಳೆ ಕಾಲೇಜಿನ ಡಾ.ತಿಪ್ಪೇಸ್ವಾಮಿ, ರೂಪ ಎಂ.ಎನ್, ಡಾ.ಶಿವಪ್ಪ, ಗೋವಿಂದರಾಜು ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು (ಜ.25): ಭವಿಷ್ಯದ ಸವಾಲುಗಳು ಮತ್ತು ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ರಾಜ್ಯದ ವಿಶ್ವವಿದ್ಯಾಲಯ, ಕಾಲೇಜು ವಿದ್ಯಾರ್ಥಿಗಳನ್ನು ಹೆಚ್ಚು ಉದ್ಯೋಗಾರ್ಹ ಮತ್ತು ತಾಂತ್ರಿಕವಾಗಿ ತರಬೇತಿಗೊಳಿಸಲು ರಾಜ್ಯ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಉನ್ನತ ಕೌಶಲ್ಯ ಸಲಹಾ ಸಮಿತಿ ಸ್ಥಾಪಿಸಿದೆ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪಾಂಚಜನ್ಯ ವಿದ್ಯಾಪೀಠ ವೆಲ್ ಪೇರ್ ಟ್ರಸ್ಟ್ ಹಾಗೂ ಡಾ.ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ‘ಅಡ್ವಾನ್ಸ್ಡ್ ಇನ್ ಇನ್ಪರ್ಮೇಶನ್ ಟೆಕ್ನಾಲಜಿ, ಕಮ್ಯುನಿಕೇಷನ್ ಆಂಡ್ ಎನರ್ಜಿ ಸಿಸ್ಟಂಮ್ಸ್’ (ಎಐಟಿಸಿಇಎಸ್-2024) ಕುರಿತ ಅಂತಾರಾಷ್ಟ್ರೀಯ ಬಹು ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇವತ್ತಿನ ಜಗತ್ತಿನಲ್ಲಿ ಹೆಜ್ಜೆ ಹೆಜ್ಜೆಗು ಸ್ಪರ್ಧೆ ಎನ್ನುವುದು ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆ ನಮ್ಮ ವಿದ್ಯಾರ್ಥಿಗಳನ್ನು ತಯಾರು ಮಾಡುವ ಹೊಣೆ ನಮ್ಮ ಶಿಕ್ಷಣ ಸಂಸ್ಥೆಗಳದ್ದಾಗಿದೆ. ಇದಕ್ಕೆ ಪೂರಕ ಸಹಕಾರ ನೀಡಲು ನಮ್ಮ ಸರ್ಕಾರ ಸಿದ್ಧವಿದೆ. ಇದನ್ನು ಯಶಸ್ವಿಯಾಗಿ ನಿಭಾಯಿಸಿದಾಗ ಮಾತ್ರ ರಾಜ್ಯ ಉನ್ನತ ಸ್ಥಾನದಲ್ಲಿರಲು ಸಾಧ್ಯ. ಹಾಗಾಗಿ ಮುಖ್ಯಮಂತ್ರಿ ಅವರು ಐಟಿಬಿಟಿ, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಶೌಶಲ್ಯಾಭಿವೃದ್ಧಿ ಹೀಗೆ ವಿವಿಧ ಇಲಾಖಾ ಸಚಿವರನ್ನೊಳಗೊಂಡ ಉನ್ನತ ಶೌಶಲ್ಯ ಸಲಹಾ ಸಮಿತಿ ರಚಿಸಿದ್ದಾರೆ ಎಂದರು.
ಮೈತ್ರಿ ತೀರ್ಮಾನ ಮಾಡದಿದ್ದರೆ ಜೆಡಿಎಸ್ ಪಕ್ಷ ಹೈಜಾಕ್ ಆಗ್ತಾ ಇತ್ತು: ವೈ.ಎಸ್.ವಿ.ದತ್ತ
ದೇಶದ ಐಟಿ ವಲಯಕ್ಕೆ ಬೆಂಗಳೂರಿನ ಕೊಡುಗೆ ದೊಡ್ಡದಿದ್ದು, ಐಟಿ ರಫ್ತಿನಲ್ಲಿ ಶೇ.42ರಷ್ಟು ಕರ್ನಾಟಕ ಪಾಲಿದೆ. ಇದರ ಮೊತ್ತ ವಾರ್ಷಿಕ 3.25 ಲಕ್ಷ ಕೋಟಿ ರು.ನಷ್ಟಿದೆ. ಆತ್ಮನಿರ್ಭರ ಭಾರತಕ್ಕೆ ಕರ್ನಾಟಕವೂ ಸಾಕಷ್ಟು ಬೆಂಬಲ ಸೂಚಿಸಿದೆ. ರಾಜ್ಯವು ಹೊಸ ಐಟಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಪನೆಗೆ ಒತ್ತು ನೀಡುತ್ತಿದೆ. ಇದಕ್ಕಾಗಿ ಅಗತ್ಯಸಹಾಯ ಮತ್ತು ಮೂಲಸೌಕರ್ಯಗಳನ್ನು ಒದಗಿಸುವುದನ್ನು ಮುಂದುವರೆಸಿದೆ. ಐಟಿ ವಲಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಲ್ಲಿ ಕಂಪನಿಗಳು ತೊಡಗಿಸಿಕೊಂಡಿವೆ ಎಂದರು