ಬೆಳಗಾವಿ: ಚಿಕಿತ್ಸೆ ಸಿಗದೇ ಗರ್ಭದಲ್ಲೇ ಶಿಶು ಸಾವು, ಬಾಣಂತಿ ಸ್ಥಿತಿ ಗಂಭೀರ

ಹಣ ಪಾವತಿಸಲು ಆಗದ ಹಿನ್ನೆಲೆಯಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಕುಟುಂಬಸ್ಥರು ಗರ್ಭಿಣಿಯನ್ನು ಡಿಸ್ಟಾರ್ಜ್‌ ಮಾಡಿಕೊಂಡು, ಬಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆಸ್ಪತ್ರೆಗಳಿಗೆ ಅಲೆಯುವ ವೇಳೆ ಗರ್ಭದಲ್ಲೇ ಮಗು ಮೃತಪಟ್ಟಿದೆ. ಬಾಣಂತಿಯ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 

Infant Dies in the Womb Due to Not Get Treatment at BIMS Hospital in Belagavi grg

ಬೆಳಗಾವಿ(ಡಿ.31):  ಸಕಾಲಕ್ಕೆ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆಯದ್ದರಿಂದ ಗರ್ಭದಲ್ಲೇ ಶಿಶು ಸಾವಿಗೀಡಾಗಿ ಬಾಣಂತಿ ಆರೋಗ್ಯದಲ್ಲಿ ಏರುಪೇರಾದ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಗೋಕಾಕ ತಾಲೂಕಿನ ಮೇಲ್ಮಟ್ಟಗ್ರಾಮದ ರಾಧಿಕಾ ಮಲ್ಲೇಶ ಗಡ್ಡಿಹೋಳಿ (19) ಬಾಣಂತಿಯ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿ ಕಿಮ್ಸ್‌ಗೆ ಸ್ಥಳಾಂತರ ಮಾಡಲಾಗಿದೆ. 

ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಎಂಟೂವರೆ ತಿಂಗಳ ಗರ್ಭಿಣಿಗೆ ಮನೆಯಲ್ಲಿ ಫಿಟ್ಸ್ ಬಂದಿತ್ತು. ತಕ್ಷಣ ಕುಟುಂಬಸ್ಥರು ಯಮಕನಮರಡಿಯ ಸರ್ಕಾರಿ ಆಸತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. 

ತುಮಕೂರು: ತಿಪಟೂರು ಸರ್ಕಾರಿ ಆಸ್ಪತ್ರೇಲಿ ಬಾಣಂತಿ ಸಾವು

ಖಾಸಗಿ ಆಸ್ಪತ್ರೆಗೆ ಸೇರುವ ಹೊತ್ತಿಗೆ ಗರ್ಭಿಣಿಯ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಿದ್ದರೆ ಮೊದಲು ಹಣ ಪಾವತಿಸಬೇಕೆಂದು ಕೇಳಿದ್ದರು. ಹಣ ಪಾವತಿಸಲು ಆಗದ ಹಿನ್ನೆಲೆಯಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಕುಟುಂಬಸ್ಥರು ಗರ್ಭಿಣಿಯನ್ನು ಡಿಸ್ಟಾರ್ಜ್‌ ಮಾಡಿಕೊಂಡು, ಬಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆಸ್ಪತ್ರೆಗಳಿಗೆ ಅಲೆಯುವ ವೇಳೆ ಗರ್ಭದಲ್ಲೇ ಮಗು ಮೃತಪಟ್ಟಿದೆ. ಬಾಣಂತಿಯ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 

ಬೆಳಗಾವಿಯ ಬಿಮ್ಸ್‌ ಆಸತ್ರೆಯ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬಾಣಂತಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಫಿಟ್ಸ್ ಸಮಸ್ಯೆಯಿಂದ ಪ್ರಜ್ಞೆ ಕಳೆದುಕೊಂಡಿದ್ದರು. ಬಾಣಂತಿಗೆ ವೆಂಟಲೇಟರ್‌ನಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ. ನುರಿತ ಹೃದಯ ತಜ್ಞ ವೈದ್ಯರ ಕೊರತೆಯಿಂದಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಬಿಮ್ಸ್ ಆಸ್ಪತ್ರೆ ಜಿಲ್ಲಾ ಸರ್ಜನ್ ವಿಠಲ ಶಿಂಧೆ ತಿಳಿಸಿದ್ದಾರೆ.

ಬಳ್ಳಾರಿ ಘಟನೆ ಮಾಸುವ ಮುನ್ನವೇ ಕೊಪ್ಪಳದಲ್ಲಿ ಮತ್ತೋರ್ವ ಬಾಣಂತಿ ಸಾವು!

ವಿಜಯನಗರ: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮತ್ತೊರ್ವ ಬಾಣಂತಿ ಸಾವನ್ನಪ್ಪಿದ್ದಾಳೆ. ಡಿ. 28ರಂದು ಘಟನೆ ನಡೆದಿತ್ತು. ಹೌದು. ಸಂಡೂರು ಮೂಲದ ಮಹಿಳೆ ಹೊಸಪೇಟೆಯಲ್ಲಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಐಶ್ವರ್ಯ ಎಂಬಾಕೆಯೇ ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಫುಡ್ ಪಾಯ್ಸನ್‌ನಿಂದ ಐಶ್ವರ್ಯ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.  

ಡಿಸೆಂಬರ್ 20ರಂದು ಐಶ್ವರ್ಯ ಅವರಿಗೆ ಹೊಸಪೇಟೆಯ ತಾಯಿ ಮತ್ತು ಮಗು ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆಯಾಗಿತ್ತು. ಹೆರಿಗೆಯಾದ ಎರಡು ದಿನಗಳ ಬಳಿಕ ಇಡ್ಲಿ ತಿಂದಿದ್ದಾರಂತೆ ಅದು ಪುಡ್ ಪಾಯ್ಸನ್ ಆಗಿದೆ. ನಿರಂತರವಾಗಿ ವಾಂತಿ ಬೇದಿಯಿಂದ ಬಳಲಿದ ಐಶ್ವರ್ಯ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಾಗಿತ್ತು.  ಆದ್ರೆ, ಚಿಕಿತ್ಸೆ ಫಲಿಸದೆ ಡಿಸೆಂಬರ್ 26ರಂದು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಐಶ್ವರ್ಯ ಮೃತಪಟ್ಟಿದ್ದರು. 

ಐಶ್ವರ್ಯಾ ಸಾವಿಗೆ ಹೊರಗಿನಿಂದ ತಂದು ತಿಂದ ಇಡ್ಲಿಯೇ ಕಾರಣವಾಗಿರಬಹುದು ವೈದ್ಯಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಯಾರಿಗೂ ಈ ಸಮಸ್ಯೆ ಕಾಣಿಸಿಲ್ಲ. ಹೀಗಾಗಿ ಎಲ್ಲಿಂದ ಇಡ್ಲಿ ತರಿಸಿದರು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಣಂತಿ ಸಾವಿಗೆ ಫುಡ್ ಪಾಯ್ಸನ್ ಕಾರಣ ಎನ್ನುವುದು ವಿಜಯನಗರ ವೈದ್ಯಾಧಿಕಾರಿ ಶಂಕರ್ ನಾಯಕ್ ತಿಳಿಸಿದ್ದಾರೆ. 

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು

ಬೆಳಗಾವಿ: ಕಳೆದ ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯೊಬ್ಬಳು ಮೃತಪಟ್ಟ ಪ್ರಕರಣದ ಬೆನ್ನಲ್ಲೇ ಮತ್ತೊಂದು ಬಾಣಂತಿ ಮೃತಪಟ್ಟಿದ್ದಾರೆ. ಒಂದು ವಾರದ ಅವಧಿಯಲ್ಲಿ ಬಾಣಂತಿಯರ ಸಾವಿನ 2ನೇ ಪ್ರಕರಣ ಇದಾಗಿದೆ. 

ಬಾಣಂತಿಯರ ಸಾವು ಪ್ರಕರಣ: ಲ್ಯಾಬ್‌ಗಳಿಂದ ರಿಂಗರ್‌ ಲ್ಯಾಕ್ಟೇಟ್‌ಗೆ ಕ್ಲೀನ್‌ಚಿಟ್‌

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಕಡಕಬಾವಿ (25) ಮೃತ ಬಾಣಂತಿ. ಪೂಜಾ ಅವರನ್ನು 2 ದಿನಗಳಿಂದೆ ಹೆರಿಗೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಪೂಜಾ ಗಂಡು ಮಗುವಿನ ಜನ್ಮ ನೀಡಿದ್ದರು. ಬಳಿಕ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿತ್ತು. ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದಾರೆ. 

ಒಂದು ವಾರದಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ಇದು ಎರಡನೆಯ ಬಾಣಂತಿ ಸಾವಿನ ಪ್ರಕರಣವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇದ್ದಕ್ಕೂ ಮುನ್ನ ಡಿ.22ರಂದು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಿಕ್ಕೋಡ ಗ್ರಾಮದ ವೈಶಾಲಿ ಕೊಟಬಾವಿ ಎಂಬ ಬಾಣಂತಿ ಮೃತಪಟ್ಟಿದ್ದರು. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದರು. 

Latest Videos
Follow Us:
Download App:
  • android
  • ios