ಬೆಂಗಳೂರು: ಕರ್ತವ್ಯ ಲೋಪ ಹಿನ್ನಲೆ, ಅಶೋಕನಗರ ಇನ್ಸ್‌ಪೆಕ್ಟರ್ ಸಸ್ಪೆಂಡ್
ಸಾಕಷ್ಟು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್‌ಪೆಕ್ಟರ್ ಕ್ರಮಕೈಗೊಳ್ಳದ ಬಗ್ಗೆ ಸಿಸಿಬಿ ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ನಡೆಸಿ ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ ರಿಪೋರ್ಟ್ ನೀಡಿದ್ದ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ.
ಬೆಂಗಳೂರು(ಜೂ.27): ಕರ್ತವ್ಯ ಲೋಪ ಹಿನ್ನಲೆಯಲ್ಲಿ ಇನ್ಸ್‌ಪೆಕ್ಟರ್‌ರನ್ನ ಅಮಾನತುಗೊಳಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.
ಅಶೋಕನಗರ ಇನ್ಸ್‌ಪೆಕ್ಟರ್ ಶ್ರೀಕಾಂತ್ ತೋಟಗಿರನ್ನ ಸಸ್ಪೆಂಡ್ ಮಾಡಿ ಪೊಲೀಸ್ ಕಮಿಷನರ್ ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. ಠಾಣಾ ವ್ಯಾಪ್ತಿಯ ದಿ ಪ್ರೈಡ್ ಹೋಟೆಲ್ ಮೇಲೆ ಸಿಸಿಬಿ ತಂಡ ಇತ್ತೀಚೆಗೆ ದಾಳಿ ಮಾಡಿತ್ತು. ದಾಳಿ ವೇಳೆ ಹೋಟೆಲ್‌ನಲ್ಲಿ ಯುವತಿಯರನ್ನ ಕರೆತಂದು ಅಕ್ರಮ ಚಟುವಟಿಕೆ ನಡೆಸ್ತಿದ್ದ ಬಗ್ಗೆ ಆರೋಪಗಳು ಕೇಳಿಬಂದಿದ್ದವು.
ಹೊನ್ನಾವರ ಪೊಲೀಸ್ ಠಾಣೆಯಲ್ಲೇ ಆರೋಪಿ ಆತ್ಮಹತ್ಯೆ: ಪಿಐ, ಪಿಎಸ್‌ಐ ಸೇರಿ ಐವರು ಅಮಾನತು!
ಸಾಕಷ್ಟು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್‌ಪೆಕ್ಟರ್ ಕ್ರಮಕೈಗೊಳ್ಳದ ಬಗ್ಗೆ ಸಿಸಿಬಿ ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ನಡೆಸಿ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಅವರು ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ ರಿಪೋರ್ಟ್ ನೀಡಿದ್ದರು.
ರಿಪೋರ್ಟ್ ಪರಿಶೀಲಿಸಿ ಕರ್ತವ್ಯ ಲೋಪ ಕಂಡುಬಂದಿದ್ದರಿಂದ ಇನ್ಸ್‌ಪೆಕ್ಟರ್ ಶ್ರೀಕಾಂತ್ ತೋಟಗಿರನ್ನ ಅಮಾನತು ಮಾಡಿ ಪೊಲೀಸ್ ಕಮಿಷನರ್ ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.