ಮಂಗಳೂರು(ಏ.30): ಲಾಕ್‌ಡೌನ್‌ನಿಂದಾಗಿ ತಮ್ಮ ಕುಟುಂಬ ಸೇರಲಾಗದೆ ಬಾಕಿಯಾಗಿರುವವರಿಗೆ ಅಂತರ್‌ ಜಿಲ್ಲಾ ಪ್ರಯಾಣಕ್ಕೆ ಅನುಮತಿ ನೀಡುವ ಸಂಬಂಧ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬುಧವಾರ ಜಿಲ್ಲಾ​ಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೊದಲ ಹಂತದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕೃಷಿ ಕಾರ್ಯ ಕೈಗೊಳ್ಳಲು ಅಥವಾ ತಮ್ಮ ಕೆಲಸದ ಸ್ಥಳಗಳಿಗೆ ತಲುಪುವ ಸಲುವಾಗಿ ಅವರನ್ನು ಸ್ವಗ್ರಾಮಗಳಿಗೆ ತಲುಪಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕ್ಷುಲ್ಲಕ ಕಾರಣಕ್ಕೆ ಮಾಜಿ ಯೋಧ, ಪತ್ನಿಯ ಬರ್ಬರ ಹತ್ಯೆ..!

ಇದರಂತೆ ದ.ಕ. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಂದಲೂ ವಲಸೆ ಕಾರ್ಮಿಕರು ತಮ್ಮ ಜಿಲ್ಲೆಗೆ ತೆರಳಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಈಗಾಗಲೇ ಮಂಗಳೂರು ಹೊರತುಪಡಿಸಿ ಉಳಿದ ತಾಲೂಕುಗಳಿಂದ ವಲಸೆ ಕಾರ್ಮಿಕರನ್ನು ಕಳುಹಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 4,000 ಮಂದಿ ಈಗಾಗಲೇ ತೆರಳಿದ್ದಾರೆ. ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಇನ್ನು 3-4 ದಿನಗಳೊಳಗೆ ಇದು ಪೂರ್ಣಗೊಳ್ಳಲಿದೆ ಎಂದು ಸಚಿವರು ತಿಳಿಸಿದರು.

ಎರಡನೇ ಹಂತದಲ್ಲಿ ಜಿಲ್ಲೆಯಲ್ಲಿ ಲಾಕ್‌ಡೌನ್‌ನಿಂದ ಉಳಿದುಕೊಂಡು, ಬೇರೆ ಜಿಲ್ಲೆಯಲ್ಲಿರುವ ಕುಟುಂಬವನ್ನು ಸೇರಲಾಗದವರಿಗೆ ಆದ್ಯತೆ ನೀಡಲಾಗುವುದು. ಈ ಬಗ್ಗೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಸಚಿವರು ತಿಳಿಸಿದರು.

ಉಡುಪಿ: ತಿಂಗಳಾದರೂ ಘೋಷಣೆಯಾಗಿಲ್ಲ ಹಸಿರು ವಲಯ

ವಿದೇಶದಲ್ಲಿರುವ ಜಿಲ್ಲೆಯ ನಾಗರಿಕರನ್ನು ಇಲ್ಲಿಗೆ ಕರೆತರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಎಲ್ಲ ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾ​ಧಿಕಾರಿ ಮಾಹಿತಿ ನೀಡಿದರು. ಕೋವಿಡ್‌ನಿಂದ ಮೃತಪಟ್ಟವರನ್ನು ಮಂಗಳೂರಿನ ಬೋಳೂರು ವಿದ್ಯುತ್‌ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ.

ಮನೆಕೆಲಸದವನಿಗೆ ಕಿರುಕುಳ: ಗುಡ್ಡೆಯಲ್ಲಿ ಉಳಿದು, ಗೇರುಹಣ್ಣು ತಿಂದು ಬದುಕಿದ

ಈ ಬಗ್ಗೆ ಯಾವುದೇ ಗೊಂದಲಗಳು ಬೇಡ. ಸಾಮಾನ್ಯ ರೋಗಿಗಳಿಗೆ ಕ್ಲಿನಿಕ್‌, ಆಸ್ಪತ್ರೆ, ನರ್ಸಿಂಗ್‌ ಹೋಂಗಳಲ್ಲಿ ಯಾವ ರೀತಿ ಚಿಕಿತ್ಸೆ ನೀಡಬೇಕು ಎಂಬುದರ ಬಗ್ಗೆ ಸರ್ಕಾರ ಮಾರ್ಗದರ್ಶಿ ಸುತ್ತೋಲೆ ಕಳುಹಿಸಲಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸಂಸದ ನಳಿನ್‌ ಕುಮಾರ್‌ ಕಟೀಲು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕ ಹರೀಶ್‌ ಪೂಂಜ, ಯು.ಟಿ. ಖಾದರ್‌, ಅಂಗಾರ, ವೇದವ್ಯಾಸ ಕಾಮತ್‌, ಡಾ. ಭರತ್‌ ಶೆಟ್ಟಿ, ಹರೀಶ್‌ ಕುಮಾರ್‌, ಐವನ್‌ ಡಿ’ಸೋಜಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್‌, ಜಿಲ್ಲಾ​ಧಿಕಾರಿ ಸಿಂಧೂ ರೂಪೇಶ್‌, ಪೊಲೀಸ್‌ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಇದ್ದರು.