ಮಂಗಳೂರು [ಡಿ.20] ಕೆಲ ಪಟ್ಟಭದ್ರ ಹಿತಾಸಕ್ತಿಗಳು ಗಾಳಿ ಸುದ್ದಿ ಹರಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಎರಡು ದಿನ ಇಂಟರ್ನೆಟ್‌ ಬಂದ್‌ ಮಾಡಲು ಗೃಹ ಸಚಿವಾಲಯ ನಿರ್ಧರಿಸಿದೆ. ಅದರಂತೆ ಗುರುವಾರ ರಾತ್ರಿ 10 ಗಂಟೆಯಿಂದ 48 ಗಂಟೆ ಕಾಲ ಮೊಬೈಲ್‌ ಇಂಟರ್ನೆಟ್‌ ಬ್ಲಾಕ್‌ ಮಾಡಲಾಗಿದೆ. ಈ ಸಂಬಂಧ ರಾಜ್ಯ ಗೃಹ ಖಾತೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ರಜನೀಶ್‌ ಗೊಯಲ್‌ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಹೊತ್ತಿ ಉರಿಯಲಿದೆ ಹೇಳಿಕೆಗೆ ಸ್ಪಷ್ಟನೆ

ಪೌರತ್ವ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಕರ್ನಾಟಕ ಹೊತ್ತಿ ಉರಿಯಲಿದೆ ಎಂಬ ಹೇಳಿಕೆಗೆ ಸಂಬಂಧಿಸಿ ಮಾಜಿ ಸಚಿವ ಖಾದರ್‌ ಸ್ಪಷ್ಟನೆ ನೀಡಿದ್ದಾರೆ.

ಸೆಕ್ಷನ್ 144 ಮತ್ತು ಕರ್ಫ್ಯೂ ನಡುವಿನ ವ್ಯತ್ಯಾಸಗಳೇನು? ಇಂದಿಗೆ ಬಹಳ ಮುಖ್ಯ...

ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಶಾನ್ಯ ರಾಜ್ಯಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ. ರಾಜ್ಯದಲ್ಲಿ ಈ ಕಾಯ್ದೆ ಜಾರಿಗೆ ತಂದರೆ ಇಲ್ಲೂ ಬೆಂಕಿ ಹೊತ್ತಿಕೊಳ್ಳಬಹುದು ಎಂದು ಹೇಳಿಕೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.