ಜೆಡಿಎಸ್ ಅಧಿಕಾರಕ್ಕೆ ಬಂದರೆ ನೀರಾವರಿ ಸೌಲಭ್ಯ: ನಿಖಿಲ್ ಕುಮಾರಸ್ವಾಮಿ
ರಾಜ್ಯದಲ್ಲಿ 2023ಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೇರುವ ಕನಸು ಹೊತ್ತು ರಾಜ್ಯವ್ಯಾಪಿ ಜಾತ್ಯಾತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ ರಥಯಾತ್ರೆಗೆ ಜಿಲ್ಲೆಯಲ್ಲಿ ಶುಕ್ರವಾರ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು.
ಚಿಕ್ಕಬಳ್ಳಾಪುರ (ಏ.17): ರಾಜ್ಯದಲ್ಲಿ (Karnataka) 2023ಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೇರುವ ಕನಸು ಹೊತ್ತು ರಾಜ್ಯವ್ಯಾಪಿ ಜಾತ್ಯಾತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ (Janata Jaladhare) ರಥಯಾತ್ರೆಗೆ ಜಿಲ್ಲೆಯಲ್ಲಿ ಶುಕ್ರವಾರ ರಾಜ್ಯ ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಿದ್ಯುಕ್ತ ಚಾಲನೆ ನೀಡಿದರು. ಜಿಲ್ಲೆಯ ಗೌರಿಬಿದನೂರು ಪಟ್ಟಣದ ಹೊರ ವಲಯದ ಪಿನಾಕಿನಿ ನದಿಯ ಸಮೀಪ ಇರುವ ಆಂಜನೇಯಸ್ವಾಮಿ ನದಿ ದಡದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮದಲ್ಲಿ ಪಿನಾಕಿನಿ ನದಿಯ ಜಲ ಸಂಗ್ರಹಿಸುವ ಮೂಲಕ ಜಿಲ್ಲಾದ್ಯಂತ ಏ.20ರ ವರೆಗೂ ಹಮ್ಮಿಕೊಂಡಿರುವ ನಾಲ್ಕು ದಿನಗಳ ಜನತಾ ಜಲಧಾರೆ ರಥಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ, ರೈತರ ಸಾಲ ಮನ್ನಾ ಮಾಡಿದ್ದಾರೆ. ಅದೇ ರೀತಿ ಜೆಡಿಎಸ್ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಸಂಕಲ್ಪ ತೊಟ್ಟು ಈ ಜನತಾ ಜಲಧಾರೆ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮೇಕೆದಾಟು, ಎತ್ತಿನಹೊಳೆ ಸೇರಿದಂತೆ ಬಯಲು ಸೀಮೆಗೆ ಶಾಶ್ವತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಜೆಡಿಎಸ್ ಬದ್ಧವಾಗಿದೆ. ಈ ನಿಟ್ಟಿನಲ್ಲಿ 2023ಕ್ಕೆ ರಾಜ್ಯದಲ್ಲಿ ಜೆಡಿಎಸ್‌ಗೆ ಸಂಪೂರ್ಣ ಬಹುಮತ ನೀಡುವ ವಿಶ್ವಾಸ ನಮಗೆ ಇದೆ. ಜನತಾ ಜಲಧಾರೆ ರಥಯಾತ್ರೆ ಮೂಲಕ ರಾಜ್ಯಾದ್ಯಂತ ಸಂಚರಿಸಿ ರೈತರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತೇವೆಂದರು.
ಸಿಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ, ಗಳಗಳನೆ ಅತ್ತ ಕುಮಾರಸ್ವಾಮಿ
ವಿಧಾನ ಪರಿಷತ್ತಿನ ಜೆಡಿಎಸ್ ಮುಖ್ಯ ಸಚೇತಕರಾದ ಇಂಚರ ಗೋವಿಂದರಾಜು, ಚಿಂತಾಮಣಿ ಶಾಸಕ ಜೆಕೆ ಕೃಷ್ಣಾರೆಡ್ಡಿ, ಚಿಕ್ಕಬಳ್ಳಾಪುರದ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಮಾಜಿ ಎಂಎಲ್ಸಿ ತೊಪಲ್ಲಿ ಚೌಡರೆಡ್ಡಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರೋಷನ್ ಅಬ್ಬಾಸ್, ಜಿಲ್ಲಾಧ್ಯಕ್ಷ ಕೆ.ಎಂ.ಮುನೇಗೌಡ, ಜಿಪಂ ಮಾಜಿ ಅಧ್ಯಕ್ಷ ಸಿ.ಆರ್.ನರಸಿಂಹಮೂರ್ತಿ ಇದ್ದರು.
ಶ್ರೀರಾಮರೆಡ್ಡಿಗೆ ಶ್ರದ್ಧಾಂಜಲಿ: ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದ ವೇದಿಕೆಯಲ್ಲಿ ಇತ್ತೀಚೆಗೆ ಆಗಲಿದ ಮಾಜಿ ಶಾಸಕ, ಸಿಪಿಎಂ ನೇತಾರ ಬಾಗೇಪಲ್ಲಿ ಜಿ.ವಿ.ಶ್ರೀರಾಮರೆಡ್ಡಿ ರವರಿಗೆ ಎರಡು ನಿಮಿಷಗಳ ಕಾಲ ಮೌನ ಆಚರಿಸಿ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿಯನ್ನು ಸಮಾರಂಭದಲ್ಲಿ ನೆರದಿದ್ದ ಜೆಡಿಎಸ್ ಮುಖಂಡರು, ನಾಯಕರು ಅರ್ಪಿಸಿದರು.
ನೀರಾವರಿ ಯೋಜನೆಗಳ ಜಾರಿಗೆ ಜೆಡಿಎಸ್ ಬೆಂಬಲಿಸಿ: ರಾಜ್ಯದ ರೈತರಿಗೆ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲು ಜೆಡಿಎಸ್‌ನಿಂದ ಜನತಾ ಜಲದಾರೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲ ನಾಗರಿಕರು ಈ ಕಾರ್ಯಕ್ರದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಜೆಡಿಎಸ್ ಮುಖಂಡ ಮೇಲೂರು ರವಿಕುಮಾರ್ ಮನವಿ ಮಾಡಿದರು.
ತಾಲೂಕಿನ ಮೇಲೂರಿನ ಅವರ ಸ್ವಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ನ ಮಹತ್ವದ ಕಾರ್ಯಕ್ರಮ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೆಗೌಡರು ಇಂದು ಚಾಲನೆ ನೀಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆಯಿಂದ 5 ದಿನಗಳ ಕಾಲ ಗಂಗಾರಥ ಯಾತ್ರೆ ಹಮ್ಮಿಕೊಳ್ಳಲಾಗಿದೆ. ತಾಲೂಕಿನಲ್ಲಿ ಏ. 19ರಂದು ಮಂಗಳವಾರ ಯಾತ್ರೆ ಪ್ರವೇಶ ಮಾಡಲಿದ್ದು, ಹಂದಿಗನಾಳದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮವಿದೆ. ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಬೈಕ್ ರಾರಯಲಿ ನಡೆಸಲಿದ್ದಾರೆ ಎಂದು ತಿಳಿಸಿದರು.
Karnataka Politics: ಪ್ರೀತಿಯಲ್ಲಿ ಬಾಂಧವ್ಯ ಮುಖ್ಯ, ತೊಂದರೆ ಕೊಡಬಾರದು: ಎಚ್.ಡಿ. ಕುಮಾರಸ್ವಾಮಿ
ರಾಜ್ಯಕ್ಕೆ ಸಲ್ಲಬೇಕಾದ ನೀರಿನ ಪಾಲನ್ನು ನೀಡದೆ ನೆರೆಯ ರಾಜ್ಯಗಳು ತೊಂದರೆ ಕೊಡುತ್ತಿದ್ದು, ಇದಕ್ಕೆಲ್ಲ ಈ ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷಪಾತ ದೋರಣೆಯೇ ಕಾರಣ. ಈಗಿನ ಬಿಜೆಪಿ ಸರ್ಕಾರದ ನೀತಿ ಇದಕ್ಕಿಂತಲೂ ಹೊರತಾಗಿಲ್ಲ. ಕೃಷಿಗೆ ಮತ್ತು ಕುಡಿಯುವ ನೀರಿನ ಸಮಪಾಲು ಪಡೆಯಲು ಜೆಡಿಎಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು. ತಾವೆಂದೂ ಅಧಿಕಾರಕ್ಕೆ ಆಸೆ ಪಟ್ಟವರಲ್ಲ ತಮ್ಮ ಮೇಲಿನ ಅಭಿಮಾನದಿಂದ ದೇವೇಗೌಡರು ಎರಡೆರಡು ಬಿ ಫಾರಂ ನೀಡಿದ್ದರು. ತಮ್ಮಲ್ಲೇ ಇದ್ದ ಕೆಲವರಿಂದ ಸೋಲುಂಟಾಯಿತೆಂದರು. ಮುಬರುವ ಜಿಲ್ಲಾ ಪಂಚಾಯತಿಯ ಎಲ್ಲಾ 6 ಕ್ಷೇತ್ರದದಲ್ಲಿ ಜೆಡಿಎಸ್ ಜಯಬೇರಿ ಬಾರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.