ಸಚಿವ ಈಶ್ವರ ಖಂಡ್ರೆ ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್ ಹಾಗೂ ಮಹಾತ್ಮಗಾಂಧಿ ಸೌಹಾರ್ದ ಸಹಕಾರಿ ಸಂಘದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಶುಕ್ರವಾರ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ಬೀದರ್(ಏ.13):  ಲೋಕಸಭಾ ಚುನಾವಣೆ ಕಾವು ಏರುತ್ತಿರುವ ಸಂದರ್ಭದಲ್ಲೇ ಬೀದರ್‌ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್ ಹಾಗೂ ಮಹಾತ್ಮಗಾಂಧಿ ಸೌಹಾರ್ದ ಸಹಕಾರಿ ಸಂಘದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಶುಕ್ರವಾರ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ಬೆಳಗ್ಗೆಯಷ್ಟೇ ಡಿಸಿಸಿ ಬ್ಯಾಂಕ್‌ ಮೇಲೆ ದಾಳಿ ನಡೆಸಿದ ಐಟಿ ತಂಡ ರಾತ್ರಿ ಎಂಟು ಗಂಟೆ ಸುಮಾರಿಗೆ ಬೀದ‌ರ್ ನಗರದಲ್ಲೇ ಇರುವ ಸೌಹಾರ್ದ ಸಹಕಾರಿ ಸಂಘದ ಕಚೇರಿ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು.

ಮಂಡ್ಯ ಸ್ಪರ್ಧೆ ಬಿಟ್ಟು ಬಿಜೆಪಿ ಬೆಂಬಲಿಸುತ್ತಿರುವ ಸುಮಲತಾಗೆ ಇಡಿ, ಐಡಿ ಭಯವೇ?: ಈಶ್ವರ್ ಖಂಡ್ರೆ

ಮೊದಲಿಗೆ ಬೀದ‌ರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಮೇಲೆ ಬೆಳಗ್ಗೆ 10.30ರ ಸುಮಾರಿಗೆ ದಾಳಿ ನಡೆಸಿದ ವಿಜಯ ಪುರ, ಕಲಬುರಗಿ ಹಾಗೂ ರಾಯಚೂರಿನ ಐಟಿ ಅಧಿಕಾರಿಗಳ ತಂಡ ಪೊಲೀಸ್ ಬಂದೋಬಸ್ م ನಲ್ಲಿ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೊಬೈಲ್ ಸ್ವಿಚ್ ಆಫ್ ಮಾಡಿಸಿ ಬ್ಯಾಂಕ್ ವ್ಯವಹಾರಗಳ ತನಿಖೆಗೆ ಇಳಿದಿದ್ದಾರೆ. ಆ ಬಳಿಕ ರಾತ್ರಿ ವೇಳೆಗೆ ಮಹಾತ್ಮಾ ಗಾಂಧಿ ಕಚೇರಿ ಮೇಲೆ ರಾತ್ರಿ ವೇಳೆ ದಾಳಿ ನಡೆದಿದೆ.