ಸಂವಿಧಾನ ತಿದ್ದುಪಡಿ ಬಗ್ಗೆ ಅಂಬೇಡ್ಕರ್‌ ಅಂದೇ ಪ್ರಸ್ತಾಪಿಸಿದ್ರು: ಕೇಂದ್ರ ಸಚಿವ ನಾರಾಯಣಸ್ವಾಮಿ

ಸಂವಿಧಾನ ತಿದ್ದುಪಡಿ ಬಗ್ಗೆ ಪ್ರಸ್ತಾಪವಾಗುತ್ತಿರುವುದು ಇದೇ ಮೊದಲಲ್ಲ. ದೇಶದಲ್ಲಿ ಸಾಮಾಜಿಕ ಅಸಮತೋಲನ ಉಂಟಾದಾಗ ಸಂವಿಧಾನಕ್ಕೆ ತಿದ್ದುಪಡಿ ಅವಶ್ಯಕತೆ ಇದೆ ಎಂದು ಅಂಬೇಡ್ಕರ್‌ ಅಂದೇ ಹೇಳಿದ್ದರೆಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

It was Ambedkar who proposed constitutional amendment says union minister a narayanaswamy gvd

ಚಿತ್ರದುರ್ಗ (ಆ.12): ಸಂವಿಧಾನ ತಿದ್ದುಪಡಿ ಬಗ್ಗೆ ಪ್ರಸ್ತಾಪವಾಗುತ್ತಿರುವುದು ಇದೇ ಮೊದಲಲ್ಲ. ದೇಶದಲ್ಲಿ ಸಾಮಾಜಿಕ ಅಸಮತೋಲನ ಉಂಟಾದಾಗ ಸಂವಿಧಾನಕ್ಕೆ ತಿದ್ದುಪಡಿ ಅವಶ್ಯಕತೆ ಇದೆ ಎಂದು ಅಂಬೇಡ್ಕರ್‌ ಅಂದೇ ಹೇಳಿದ್ದರೆಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

ನಗರದ ಸರಸ್ವತಿ ಕಾನೂನು ಕಾಲೇಜಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗುರುವಾರ ಆಯೋಜಿಸಿದ್ದ ಪ್ರಧಾನ ಮಂತ್ರಿಗಳ ಹರ್‌ ಘರ್‌ ತಿರಂಗಾ ಅಭಿಯಾನದಲ್ಲಿ ಧ್ವಜ ವಿತರಣೆ ಮಾಡಿ ಮಾತನಾಡಿದ ಅವರು, ಎರಡು ವರ್ಷ ಕಾನೂನು ಮಂತ್ರಿಯಾಗಿದ್ದ ಅಂಬೇಡ್ಕರ್‌ ಅವರೇ ಒಂದು ತಿದ್ದುಪಡಿ ತಂದಿದ್ದರು. ಮಹಿಳಾ ಮಸೂದೆಗೆ ಅವತ್ತಿನ ಸಂಸತ್‌ ಒಪ್ಪಿಗೆ ಕೊಡದಿದ್ದಾಗ, ಕಾನೂನು ಸಚಿವರಾಗಿ ಅಂಬೇಡ್ಕರ್‌ ಸಂವಿಧಾನವನ್ನು ಸಮರ್ಥನೆ ಮಾಡಿಕೊಂಡಿದ್ದರು. ಬಿಲ್‌ ಪಾಸು ಮಾಡಲು ಅವಕಾಶ ಮಾಡಿಕೊಡದಿದ್ದಾಗ ಅಂಬೇಡ್ಕರ್‌ಗೆ ಅಪಮಾನವಾಯಿತು, ಆಗ ರಾಜೀನಾಮೆ ಕೊಟ್ಟರು. ಯಾಕೆ ರಾಜೀನಾಮೆ ಕೊಟ್ಟರು ಎಂಬ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಹೇಳಿದರು.

88 ವರ್ಷಗಳ ಬಳಿಕ ಪ್ರಥಮ ಬಾರಿಗೆ ಭರ್ತಿಯಾದ ಕೋಟೆನಾಡಿನ ಅಕ್ಷಯಪಾತ್ರೆ ವಾಣಿ ವಿಲಾಸ ಜಲಾಶಯ

ಸ್ವಾತಂತ್ರ್ಯ ಹೋರಾಟದ ಇತಿಹಾಸ ಗಮನಿಸಿದರೆ ಅಂದಿನ ದೇಶಪ್ರೇಮಿಗಳ ಜೀವನ ಚರಿತ್ರೆ ಇವತ್ತಿನ ರಾಜಕಾರಣಿಗಳಿಗೆ ಆದರ್ಶ ಆಗಬೇಕಿತ್ತು. ಆದರೆ ಅನೇಕ ರಾಜಕಾರಣಿಗಳಿಗೆ ಆದರ್ಶವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದು ಕೇವಲ ಸ್ವಾತಂತ್ರ್ಯದ ಹಬ್ಬವಲ್ಲ, ಅನೇಕ ಮಹನೀಯರ ತ್ಯಾಗ, ಬಲಿದಾನದ ಪ್ರತಿಫಲ. ಡಾ.ಬಿ.ಆರ್‌.ಅಂಬೇಡ್ಕರ್‌ ರವರು ವಿಶ್ವ ಮೆಚ್ಚುವಂತಹ ಸಂವಿಧಾನ ಕೊಟ್ಟರು. ಆದ್ದರಿಂದ ರಾಷ್ಟ್ರೀಯ ವಿಚಾರಧಾರೆಗಳನ್ನು ಮುಕ್ತವಾಗಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಮುಖಾಂತರ ಯಾವುದೇ ಅಡೆತಡೆ ಇಲ್ಲದೆ ವ್ಯಕ್ತಪಡಿಸಬಹುದಾಗಿದೆ ಎಂದು ನಾರಾಯಣಸ್ವಾಮಿ ಹೇಳಿದರು.

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನು ಹುಡುಕಿ ಕೊಡಿ: ಅನ್ನದಾತರ ಮನವಿ

ಈ ಸಂದರ್ಭದಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಎಚ್‌. ಹನುಮಂತಪ್ಪ ಮಾತನಾಡಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ನಾನಾ ಸ್ಪರ್ಧೆಗಳಲ್ಲಿ ವಿಜೇತರಾದ ಕಾನೂನು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹರ್‌ ಘರ್‌ ತಿರಂಗ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಬಾವುಟಗಳನ್ನು ವಿತರಿಸಲಾಯಿತು. ಸರಸ್ವತಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಫಾತ್ಯರಾಜನ್‌, ಕಾರ್ಯದರ್ಶಿ ಡಿ.ಕೆ.ಶೀಲಾ, ಸದಸ್ಯರಾದ ಅಬ್ದುಲ್‌ ರೆಹಮಾನ್‌, ಚಲ್ಮೇಶ್‌, ಪ್ರಾಚಾರ್ಯೆ ಪ್ರೊ.ಎಂ.ಎಸ್‌ ಸುಧಾದೇವಿ, ಆಡಳಿತಾಧಿಕಾರಿ ಡಿ.ಎಚ್‌.ನಟರಾಜ್‌ ಇತರರಿದ್ದರು.

Latest Videos
Follow Us:
Download App:
  • android
  • ios