ಸಚಿವ ಅಶೋಕ್ ಸಂವಿಧಾನ ಓದಿಕೊಂಡ್ರೆ ಒಳ್ಳೆಯದು : ಕುರುಬರ ಸಂಘದ ಅಧ್ಯಕ್ಷ
ಬಿಜೆಪಿಯ ಕೆಲವು ನಾಯಕರು ಸಂವಿಧಾನ ಓದಿಕೊಂಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಮಾನಸಿಕ ಅಸ್ವಸ್ಥರಂತೆ ಮಾತನಾಡುತ್ತಿದ್ದಾರೆ.
ಮೈಸೂರು : ಬಿಜೆಪಿಯ ಕೆಲವು ನಾಯಕರು ಸಂವಿಧಾನ ಓದಿಕೊಂಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಮಾನಸಿಕ ಅಸ್ವಸ್ಥರಂತೆ ಮಾತನಾಡುತ್ತಿದ್ದಾರೆ. ಸಚಿವ ಆರ್. ಅಶೋಕ್ ಸಂವಿಧಾನ ಓದಿಕೊಂಡ್ರೆ ಒಳ್ಳೆಯದು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಕಿಡಿಕಾರಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕದ 224 ಕ್ಷೇತ್ರಗಳೂ ಸೇಫ್ ಅಲ್ಲ. ಅವರು ಪಾಕಿಸ್ತಾನ, ಅಫ್ಘಾನಿಸ್ತಾನ ಅಥವಾ ಬಾಂಗ್ಲಾದೇಶದಲ್ಲಿ ಸ್ಪರ್ಧಿಸಿದ್ರೆ ಒಳ್ಳೆಯದು ಎಂಬ ಸಚಿವ ಆರ್. ಅಶೋಕ್ ಅವರ ಹೇಳಿಕೆಗೆ ತೀವ್ರ ಖಂಡನಿಯ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಯಾವುದೇ ಒಬ್ಬ ವ್ಯಕ್ತಿ ಯಾವ ಕ್ಷೇತ್ರದಲ್ಲಾದರೂ ನಿಲ್ಲಬಹುದು. ಅವರನ್ನು ಗೆಲ್ಲಿಸಬೇಕೋ ಬೇಡವೋ ಅನ್ನೋದನ್ನಾ ಜನ ತೀರ್ಮಾನಿಸುತ್ತಾರೆ. ಎಲ್ಲಿ ನಿಲ್ಲಬೇಕು ಎಂಬುದನ್ನ ಪಕ್ಷ ತೀರ್ಮಾನಿಸುತ್ತದೆ. ಆದರೆ, ಸಚಿವ ಆರ್. ಅಶೋಕ್ ಅವರು ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಚುನಾವಣೆಗೆ ನಿಲ್ಲಿ ಎಂದಿದ್ದಾರೆ. ಅವರು ಜ್ಞಾನವಿದ್ದು ಮಾತನಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಬಗ್ಗೆ ಓದಿಕೊಂಡರೆ ಒಳ್ಳೆಯದು ಎಂದು ಅವರು ತಿರುಗೇಟು ನೀಡಿದರು.
ಬಿಜೆಪಿ ಸಚಿವರಿಗೇ ಪಾಕಿಸ್ತಾನದ ಮೇಲೆ ಪ್ರೀತಿ ಹೆಚ್ಚಾದಂತಿದೆ. ಒಬ್ಬರು ಸಚಿವರು ಬೀದಿಯಲ್ಲಿ ನಿಂತು ಪಾಕಿಸ್ತಾನಕ್ಕೆ ಹೋಗಿ ಅನ್ನುತ್ತಾರೆ, ಇನ್ನೊಬ್ಬರು ಅಲ್ಲೇ ಚುನಾವಣೆಗೆ ನಿಲ್ಲಿ ಅನ್ನುತ್ತಾರೆ. ಅಷ್ಟೊಂದು ಪ್ರೀತಿ ಇದ್ದರೇ ತಾವೇ ಹೋಗಬಹುದಲ್ಲ? ಸಿದ್ದರಾಮಯ್ಯ ಅವರು ತಮ್ಮ ಕೊಡುಗೆಗಳಿಂದ ಇಂದಿಗೂ ಜನಾನುರಾಗಿಯಾಗಿದ್ದಾರೆ. ನಿಮಗೆ ಸಾಮರ್ಥ್ಯವಿದ್ದರೆ ರಾಜಕೀಯವಾಗಿ ಅವರನ್ನು ಎದುರಿಸಿ. ಮೈಸೂರು ಬೆಂಗಳೂರು ದಶಪಥ ರಸ್ತೆ ಒಂದೇ ಮಳೆಗೆ ಏನಾಗಿದೆ ಅನ್ನೋದು ಗೊತ್ತಾಗುತ್ತಿದೆ. ಮೊದಲು ನಿಮ್ಮ ಪಕ್ಷದಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಿ ಎಂದು ಅವರು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಗೆದ್ದು ಒಳ್ಳೆಯದು ಮಾಡಲಿ
ಕಾರವಾರ (ಮಾ.19): ತಾವು ಗೆದ್ದ ಕ್ಷೇತ್ರದಲ್ಲಿಯೇ ಒಳ್ಳೆಯ ಕೆಲಸ ಮಾಡಿದ್ದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈಗ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಹುಡುಕುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು. ತಾಲೂಕಿನ ಮುಡಗೇರಿಯಲ್ಲಿ ಶನಿವಾರ ಮಾಧ್ಯಮದ ಜತೆಗೆ ಮಾತನಾಡಿ, ಸಿದ್ದರಾಮಯ್ಯನವರು ಬಾದಾಮಿ ಕ್ಷೇತ್ರದಲ್ಲಿ ತಮ್ಮ ಪಾಟ್ನರ್ ಆಗಿದ್ದಾರೆ. ಬಾದಾಮಿ ತಾಲೂಕಿನ ಒಂದು ಭಾಗ ನನ್ನ ಕ್ಷೇತ್ರಕ್ಕೆ ಬರುತ್ತಿತ್ತು. ಅಭಿವೃದ್ಧಿ ಮಾಡದ ಕಾರಣ ಕೋಲಾರದತ್ತ ಮುಖ ಮಾಡಿದ್ದರು. ಅಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಬೇರೆ ಕ್ಷೇತ್ರ ಹುಡುಕುವ ಪರಿಸ್ಥಿತಿ ಬಂದಿದೆ.
ವರುಣಾ ಕ್ಷೇತ್ರದಲ್ಲಿ ಸಹ ಅವರು ನಿಲ್ಲುವ ಸಾಧ್ಯತೆ ಕಡಿಮೆ ಇದೆ. ಬೇರೆಯವರ ಬಗ್ಗೆ ಸಿದ್ದರಾಮಯ್ಯ ಟೀಕೆ ಮಾಡುವುದು ಬಿಡಬೇಕು. ಅವರು ಒಳ್ಳೆಯದನ್ನು ಮಾಡಿದರೆ ಈ ರೀತಿ ಬೇರೆ ಕ್ಷೇತ್ರ ಹುಡುಕುವ ಪರಿಸ್ಥಿತಿ ಬರುತ್ತಿರಲಿಲ್ಲ. ಸಿದ್ದರಾಮಯ್ಯ ನವರ ಬಗ್ಗೆ ಹೆಚ್ಚು ಹೇಳುವಷ್ಟುದೊಡ್ಡ ವ್ಯಕ್ತಿ ತಾವಲ್ಲ ಎಂದು ಟಾಂಗ್ ನೀಡಿದರು. ಈ ಭಾಗದಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್, ಹಡಗುಗಳ ಬಿಡಿಭಾಗ ತಯಾರಿಕೆ, ಗ್ರೀನ್ ಹೈಡ್ರೋಜನ್ ತಯಾರಿಸುವ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶಗಳಿದೆ. ಇದಕ್ಕೆ ಕೇಂದ್ರ ಸರ್ಕಾರ ಕೂಡ ಅನುದಾನ ನೀಡಲಿದೆ. ರೈಲ್ವೆ, ರಾಷ್ಟ್ರೀಯ ಹೆದ್ದಾರಿ, ಬಂದರು, ಏರಪೋರ್ಟ್ ಸಂಪರ್ಕ ಸಾಧ್ಯವಾಗುವುದರಿಂದ ವ್ಯವಹಾರಕ್ಕೆ ಹೆಚ್ಚು ಅನುಕೂಲಕರವಾಗಿದೆ.
ಕಾಂಗ್ರೆಸ್ ಈಗ ಡೇಟ್ ಬಾರ್ ಆದ ಪಕ್ಷ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಬೆಂಗಳೂರಿನಲ್ಲಿ ನಡೆದ ಗ್ಲೋಬಲ್ ಇನ್ವೆಸ್ಟಮೆಂಟರ್ ಕಾರ್ಯಕ್ರಮದಲ್ಲಿ ಹಲವು ಕಂಪನಿಗಳೊಂದಿಗೆ ಸಹಿ ಮಾಡಲಾಗಿದೆ. ಇದರಿಂದ ಸುಮಾರು 7 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಕಾರವಾರದಲ್ಲಿಯೂ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಉತ್ತರಕರ್ನಾಟಕ ಭಾಗಕ್ಕೆ ಜಿಲ್ಲೆಯಿಂದ ನೀರು ಕೊಂಡೊಯ್ಯುವ ಬಗ್ಗೆ ಕೇಳಿದಾಗ, ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡದ ಎಲ್ಲರೂ ಸಹೋದರ ಭಾವನೆಯಲ್ಲಿದ್ದಾರೆ. ಎಲ್ಲಿ ಏನು ಕೊರತೆ ಇದೆ ಅಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಜನರಿಗೆ, ಪರಿಸರಕ್ಕೆ ತೊಂದರೆಯಾಗದ ರಿತಿಯಲ್ಲಿ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.