Asianet Suvarna News Asianet Suvarna News

ಅಮಿತ್‌ ಶಾಗೆ ಐವನ್‌ ಡಿಸೋಜಾ ನಾಲ್ಕು ಪ್ರಶ್ನೆ..!

ಎನ್‌ಆರ್‌ಸಿ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ನೀಡಿರುವುದರ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಪಷ್ಟೀಕರಣ ನೀಡಬೇಕು ಇಲ್ಲವೇ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಆಗ್ರಹಿಸಿದ್ದಾರೆ. ಹಾಗೆಯೇ ಅಮಿತ್ ಶಾಗೆ ಐವನ್ ಅವರು ನಾಲ್ಕು ಪ್ರಶ್ನೆಗಳನ್ನೂ ಕೇಳಿದ್ದಾರೆ.

Ivan DSouza asks 4 question to amith shah regarding to caa nrc
Author
Bangalore, First Published Jan 17, 2020, 10:15 AM IST

ಮಂಗಳೂರು(ಜ.17): ಎನ್‌ಆರ್‌ಸಿ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ನೀಡಿರುವುದರ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಪಷ್ಟೀಕರಣ ನೀಡಬೇಕು ಇಲ್ಲವೇ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಆಗ್ರಹಿಸಿದ್ದಾರೆ. ಅಲ್ಲದೆ ಅಮಿತ್‌ ಶಾ ತನ್ನ ನಾಲ್ಕು ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಐವನ್‌ ಡಿಸೋಜಾ ಆಗ್ರಹಿಸಿದ್ದಾರೆ.

ಗುರುವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವನ್‌ ಡಿಸೋಜಾ, ಪ್ರಧಾನಿ ನರೇಂದ್ರ ಮೋದಿಯವರು ದೇಶ ಎಲ್ಲ ರಾಜ್ಯಗಳಲ್ಲಿ ಎನ್‌ಆರ್‌ಸಿ ಅನುಷ್ಠಾನಗೊಳಿಸಲು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.

ಪೌರತ್ವ ಕಾಯ್ದೆ: ಬಿಜೆಪಿ ರಾಜ್ಯಗಳಲ್ಲೇ ಹಿಂಸಾಚಾರ ಯಾಕೆ..?

ಆದರೆ ಅಮಿತ್‌ ಶಾ ಅನುಷ್ಠಾನಗೊಳಿಸುವುದರಲ್ಲಿ ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಈ ಮೂಲಕ ದೇಶದಲ್ಲಿ ನಡೆಯುತ್ತಿರುವ ಪ್ರಸಕ್ತ ಪರಿಸ್ಥಿತಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಅವರು ದೇಶದ ಜನತೆಗೆ ಸ್ಪಷ್ಟಪಡಿಸಬೇಕು, ಇಲ್ಲವೇ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಐವನ್‌ ಡಿಸೋಜಾ ಆಗ್ರಹಿಸಿದ್ದಾರೆ.

ಎನ್‌ಆರ್‌ಸಿ, ಸಿಸಿಎ ವಿರುದ್ಧ ಮಂಗಳೂರಿನಲ್ಲಿ ಬುಧವಾರ ನಡೆದ ಪ್ರತಿಭಟನೆಯಿಂದ ಸರ್ಕಾರ ಕಣ್ತೆರೆಯಲು ಸೂಕ್ತ ಸಮಯ ಎಂದು ಹೇಳಿದ ಐವನ್‌ ಡಿಸೋಜಾ, ಶಾಂತಯುತವಾಗಿ ನಡೆಯುವಲ್ಲಿ ಸಂಘಟಕರು ಮಾತ್ರವಲ್ಲದೆ, ಪೊಲೀಸರ ಮುನ್ನೆಚ್ಚರಿಕಾ ಕ್ರಮವೂ ಅಭಿನಂದನಾರ್ಹ ಎಂದಿದ್ದಾರೆ.

CAA ವಿರುದ್ಧ ಶಾಂತಿಯುತ ಕಿಚ್ಚು, 1 ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಸಮಾವೇಶ ಹೀಗಿತ್ತು..!

ಈ ಸಂದರ್ಭ ಅವರು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ತಮ್ಮ ಶಿಫಾರಸಿನ ಮೇರೆಗೆ 26 ಮಂದಿ ಅರ್ಜಿದಾರರಿಗೆ ಬಿಡುಗಡೆಯಾದ ಒಟ್ಟು 13,11,353 ರು.ಗಳ ಪರಿಹಾರ ಧನದ ಚೆಕ್ಕನ್ನು ಫಲಾನುಭವಿಗಳಿಗೆ ವಿತರಿಸಿದರು.

ಅಮಿತ್‌ ಶಾಗೆ ಐವನ್‌ ಡಿಸೋಜಾ ನಾಲ್ಕು ಪ್ರಶ್ನೆ

  • ಮಹಾದಾಯಿ ವಿಚಾರದಲ್ಲಿ ಅಂದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರನ್ನು ಮನೆಗೆ ಕರೆಯಿಸಿ ವಿಚಾರ ಬಗೆಹರಿಸುವ ಚುನಾವಣಾ ಗಿಮಿಕ್‌ ಮಾಡಿದ್ದೀರಿ. ಈಗ ಆ ಬಗ್ಗೆ ಕೈಗೊಂಡಿರುವ ಕ್ರಮ ಏನು ತಿಳಿಸಿ?
  • ಕಳೆದ ಬಾರಿ ರಾಜ್ಯಕ್ಕೆ ಭೇಟಿ ನೀಡಿದಾಗ 3 ಲಕ್ಷ ಕೋಟಿ ರು. ಕೇಂದ್ರ ಸರ್ಕಾರ ಅನುದಾನ ನೀಡಿದ್ದು, ಅದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರಿಗೆ ತಲುಪಿಸಿಲ್ಲ ಎಂದು ಹೇಳಿದ್ದೀರಿ. ಈಗ ನಿಮ್ಮ ಸ್ವ ಪಕ್ಷದ ಸರ್ಕಾರವಿದ್ದು ಯಾರಿಗೆ ಎಷ್ಟುತಲುಪಿದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ ಹಾಗೂ ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ನಡೆಯಲಿ.
  • ರಾಜ್ಯದಲ್ಲಿ ಸಂಭವಿಸಿರುವ ನೆರೆಯಿಂದ 35 ಸಾವಿರ ಕೋಟಿ ರು. ನಷ್ಟದ ವರದಿಯನ್ನು ರಾಜ್ಯ ಮತ್ತು ಕೇಂದ್ರಕ್ಕೆ ವೀಕ್ಷಕರು ನೀಡಿದ್ದಾರೆ. ಈವರೆಗೆ ಕೇವಲ 1,800 ಕೋಟಿ ರು. ಮಾತ್ರ ಬಿಡುಗಡೆಯಾಗಿದ್ದು, ರಾಜ್ಯಕ್ಕೆ ಮಲತಾಯಿ ಧೋರಣೆ ಯಾಕೆ ಎಂದು ಉತ್ತರಿಸಿ.

ಕಲ್ಲಡ್ಕ ಪ್ರಭಾಕರ ಭಟ್‌ ಸಂವಿಧಾನ ಓದಲಿ!

ಕಪಾಲಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸಿ ಕನಕಪುರದಲ್ಲಿ ಮಾತಾಡಿರುವ ಆರ್‌ಎಸ್‌ಎಸ್‌ ಮುಖಂಡ ಡಾ. ಪ್ರಭಾಕರ ಭಟ್‌ ಕಲ್ಲಡ್ಕ ಅವರು ಕ್ರೈಸ್ತ ಸಮುದಾಯಕ್ಕೆ ನೋವಾಗುವಂತೆ ನಡೆದುಕೊಂಡಿದ್ದಾರೆ. ರಾಜಕೀಯ ಪ್ರೇರಿತವಾಗಿ ಅವರು ನೀಡಿರುವ ಹೇಳಿಕೆ ಕ್ರೈಸ್ತ ಸಮುದಾಯದ ಜನರಿಗೆ ಮಾನಸಿಕ ವೇದನೆಯನ್ನು ನೀಡಿದೆ ಎಂದು ಐವನ್‌ ಡಿಸೋಜಾ ಹೇಳಿದ್ದಾರೆ. ಪ್ರಭಾಕರ ಭಟ್‌ ಅವರು ಸಾಮರಸ್ಯದ ಬಗ್ಗೆ ಸಂವಿಧಾನ ಓದಿ ತಿಳಿದುಕೊಳ್ಳಲಿ. ಕ್ರೈಸ್ತ ವಿರೋಧಿ ಮಾತನಾಡಿರುವ ಪ್ರಭಾಕರ ಭಟ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow Us:
Download App:
  • android
  • ios