ಚಿಕ್ಕಮಗಳೂರು [ಫೆ.01]: ಅಕ್ರಮವಾಗಿ ಆನೆದಂತ ಸಾಗಾಣಿಕೆ ಮಾಡುತ್ತಿದ್ದ ಆರೋಪದ ಮೇಲೆ ಸ್ಥಳೀಯ ಕಾಂಗ್ರೆಸ್‌ ಮುಖಂಡ ಸೇರಿದಂತೆ ನಾಲ್ವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ.

ಶೃಂಗೇರಿ ತಾಲೂಕು ಕಾಂಗ್ರೆಸ್‌ ಐಟಿ ಸೆಲ್‌ ಮುಖಂಡ ಶಬರೀಶ್‌ ಹಾಗೂ ಶೃಂಗೇರಿಯ ವಿಜಯ್‌, ಯೋಗೀಶ್‌, ಮಧುಸೂದನ್‌ ಬಂಧಿತರು. ಆರೋಪಿಗಳು ಮಾರುತಿ ಕಾರಿನಲ್ಲಿ ಆನೆದಂತ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ನಗರದ ಮೂಡಿಗೆರೆ ರಸ್ತೆಯಲ್ಲಿರುವ ಮೂಗ್ತಿಹಳ್ಳಿ ಬಳಿ ಕಾರನ್ನು ತಪಾಸಣೆ ಮಾಡಿದ್ದಾರೆ. 

ಈ ವೇಳೆ ಡ್ಯಾಶ್‌ ಬೋರ್ಡ್‌ನಲ್ಲಿ 1.9 ಕೆ.ಜಿ. ತೂಕದ ಆನೆದಂತ ಪತ್ತೆಯಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿ ದಂತ ಹಾಗೂ ಕಾರನ್ನು ವಶಕ್ಕೆ ಪಡೆದಕೊಂಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇನ್ನು ಆರೋಪಿಗಳನ್ನು ಶನಿವಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಹಾಜರುಪಡಿಸಲು ಕರೆ ತರುವ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಪೊಲೀಸ್‌ ಜೀಪಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಶಬರೀಶ್‌ ಹಾಗೂ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಘೋಷಣೆ ಹಾಕಿದರು.