ಹೈಕಮಾಂಡ್ ಮೇಲೆ ಒತ್ತಡ ಹಾಕಲು ದೆಹಲಿಗೆ ತೆರಳಬೇಕಿದ್ದ ಕಾಂಗ್ರೆಸ್ ಶಾಸಕರು ಮಂತ್ರಿ ಸ್ಥಾನಕ್ಕಾಗಿ ದೆಹಲಿ ಚಲೋ ಮಾಡುತ್ತಿರುವುದು ನಾಚಿಕೇಗೇಡಿನ ಸಂಗತಿ ಎಂದು ಸಂಸದ ಜಗದೀಶ ಶೆಟ್ಟರ್ ಲೇವಡಿ ಮಾಡಿದರು.

ಬೆಳಗಾವಿ (ಏ.13): ಜನರ ಸಮಸ್ಯೆಗಳಿದ್ದಲ್ಲಿ ಆ ಬಗ್ಗೆ ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಮಾಡಲು ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದೆಹಲಿಗೆ ತೆರಳಬೇಕಿದ್ದ ಕಾಂಗ್ರೆಸ್ ಶಾಸಕರು ಮಂತ್ರಿ ಸ್ಥಾನಕ್ಕಾಗಿ ದೆಹಲಿ ಚಲೋ ಮಾಡುತ್ತಿರುವುದು ನಾಚಿಕೇಗೇಡಿನ ಸಂಗತಿ ಎಂದು ಸಂಸದ ಜಗದೀಶ ಶೆಟ್ಟರ್ ಲೇವಡಿ ಮಾಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯದ್ದೇ ದೊಡ್ಡ ಚರ್ಚೆಯಾಗಿದೆ. ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸುತ್ತಿಲ್ಲ. ಅಧಿಕಾರ ಹಂಚಿಕೆ ಬಗ್ಗೆ ಏನು ಒಪ್ಪಂದವಾಗಿದೆ ಎನ್ನುವುದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರಗೆ ಬಿಟ್ಟರೇ ಬೇರೆ ಯಾರಿಗೂ ಗೊತ್ತಿಲ್ಲ. ಅದು ಏನಿದೆ ಎನ್ನುವುದನ್ನು ಇಬ್ಬರು ಒಮ್ಮೆ ಹೇಳಿ ಬಿಡಬೇಕಿದೆ. ಆದರೆ, ಇತ್ತ ಜನಸಾಮ್ಯಾನರ ದುಃಖವನ್ನೂ ಕೇಳುತ್ತಿಲ್ಲ ಎಂದು ಆರೋಫಿಸಿದರು.

ಯುದ್ಧದ ಪರಿಸ್ಥಿತಿಯಿಂದ ನಮ್ಮ ದೇಶಕ್ಕೆ ಅಂತಹ ದೊಡ್ಡ ಸಮಸ್ಯೆಯಾಗಿಲ್ಲ. ರಾಹುಲ್ ಗಾಂಧಿಯವರ ಸರ್ಕಾರ ಇದ್ದಿದ್ದರೆ ಸದ್ಯದ ಪರಿಸ್ಥಿತಿ ನಿಯಂತ್ರಿಸಲು ಆಗುತ್ತರಲಿಲ್ಲ. ನಮ್ಮಲ್ಲಿ ಪೆಟ್ರೊಲ್, ಡಿಸೇಲ್ ಬೆಲೆ ಏರಿಕೆಯೂ ಆಗಲಿಲ್ಲ. ಕೊರತೆಯೂ ಆಗಿಲ್ಲ. ದರ ನಿಯಂತ್ರಣದ ಜತೆಗೆ ಯಾವುದೇ ತೊಂದರೆಯಾಗದಂತೆ ಕೇಂದ್ರ ಸರ್ಕಾರ ನಿರ್ವಹಣೆ ಮಾಡಿದೆ. ಮುಖ್ಯವಾಗಿ ನಮ್ಮ ದೇಶದ ಜನ ಸುರಕ್ಷಿತವಾಗಿದ್ದಾರೆ. ಇದಕ್ಕೆ ಮೋದಿ ಆಡಳಿತ ಕಾರಣ, ಅಲ್ಪಸ್ವಲ್ಪ ಕೊರತೆಗಳಾಗಿದ್ದರೂ ಅದನ್ನು ಸರಿಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದರು.

ಸಮಾಜಘಾತಕರ ಮೇಲೆ ಕಠಿಣ ಕ್ರಮ ಅತ್ಯಗತ್ಯ

ಈಚೆಗೆ ಅನ್ಯ ಕೋಮಿನ ಯುವಕನಿಂದ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ನಿವಾಸಕ್ಕೆ ಸಂಸದ ಜಗದೀಶ ಶೆಟ್ಟರ್ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಈ ವೇಳೆ ಮಾತನಾಡಿದ ಅವರು, ಹಿಂದೂ ಸಮಾಜದ ಗೌರವಕ್ಕೆ ದಕ್ಕೆ ತರುವಂತಹ ಇಂತಹ ಕಾರ್ಯಗಳು ಮತ್ತೊಮ್ಮೆ ಆಗದಂತೆ ತಡೆಯಲು ನಾವು ನಮ್ಮ ಧರ್ಮದ ಕುರಿತು ಯುವಜನತೆಯಲ್ಲಿ ಭಕ್ತಿ, ಭಾವನೆ ಬೆಳೆಸುವುದು ಅಗತ್ಯ, ರಾಜ್ಯದಲ್ಲಿ ಜಿಮ್‌ಗಳಲ್ಲಿ ಇಂತಹ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ತರಬೇತುದಾರರ ನಡವಳಿಕೆಯ ಕುರಿತು ನಿಗಾವಹಿಸಿ, ಜಿಮ್ ತೆರೆಯಲು ಪರವಾನಗಿ ನೀಡಲು ಕೆಲವು ಕಠಿಣ ಷರತ್ತು ಹಾಕಬೇಕು ಎಂದರು.

ಕಾಂಗ್ರೆಸ್‌ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆಯಿಂದಲೇ ರಾಜ್ಯದಲ್ಲಿ ಹಿಂದೂ ಹೆಣ್ಣು ಮಕ್ಕಳ ಸುರಕ್ಷತೆಗೆ ಧಕ್ಕೆಯಾಗುವಂತೆ ಮಾಡಿ, ಲವ್ ಜಿಹಾದ್ ನಂತಹ ಪ್ರಕರಣಗಳು ಹೆಚ್ಚಾಗಲು ನೇರ ಕಾರಣವಾಗಿದೆ. ಹೆಣ್ಣು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ, ರಾಜ್ಯದಲ್ಲಿ ಇಂತಹ ಪ್ರಕರಣಗಳು ಮತ್ತೆ ತಲೆಯೆತ್ತದಂತೆ ಎಚ್ಚರ ವಹಿಸುವಂತೆ ಆಗ್ರಹಿಸಿದರು.