ಇನ್ನೂ ಜಾರಿಯಾಗಿಲ್ಲ ಹಲವೆಡೆ ಜಲಜೀವನ್‌ ಯೋಜನೆ

: ತಾಲೂಕಿನ ಹಡವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇನ್ನೂ ಜಲಜೀವನ್‌ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಹಡವನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಧಾ ರಂಗಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Jaljeevan Yojana has not yet been implemented in many places snr

ತುರುವೇಕೆರೆ: ತಾಲೂಕಿನ ಹಡವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇನ್ನೂ ಜಲಜೀವನ್‌ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಹಡವನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಧಾ ರಂಗಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು ತಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಲವಾರು ಗ್ರಾಮಗಳಿಗೆ ಜಲಜೀವನ್‌ ಯೋಜನೆಯಡಿ ಮನೆಮನೆಗೆ ಕೊಳಾಯಿ ಸಂಪರ್ಕ ಕೊಡುವ ಯೋಜನೆ ಮಂಜೂರಾಗಿದೆ. ಟೆಂಡರ್‌ ಪ್ರಕ್ರಿಯೆಯೂ ಮುಗಿದಿದೆ. ಆದರೆ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಪ್ರಕ್ರಿಯೆ ಮುಂದುವರೆದಿಲ್ಲ. ಪಂಚಾಯ್ತಿ ವ್ಯಾಪ್ತಿಗೆ ಬರುವ ಅಪ್ಪಸಂದ್ರ ಸೇರಿದಂತೆ ಹಲವಾರು ಗ್ರಾಮಗಳಿಗೆ ನೀರು ನೀಡಲು ಓವರ್‌ ಹೆಡ್‌ ಟ್ಯಾಂಕ್‌ನ ಅವಶ್ಯಕತೆ ಇದೆ. ಇದನ್ನು ನಿರ್ಮಿಸುವ ಸಲವಾಗಿ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ಸುಧಾರಂಗಸ್ವಾಮಿ ಹೇಳಿದರು.

ಹಡವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಅಪ್ಪಸಂದ್ರ ಸೇರಿದಂತೆ ಯಾವ ಗ್ರಾಮದಲ್ಲಿಯೂ ಜಲಜೀವನ್‌ ಯೋಜನೆ ಜಾರಿಗೊಂಡಿಲ್ಲ. ಆದರೆ ಕೆಲವರು ತಮ್ಮ ಮನೆಗೆ ಅಗತ್ಯವಿರುವ ಕೊಳಾಯಿ ಸಂಪರ್ಕಕ್ಕೆ ಪಂಚಾಯ್ತಿ ವತಿಯಿಂದ ಅನುಮತಿ ಪಡೆದು ಸಂಬಂಧಿಸಿದ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಅವರೇ ಸ್ವಂತ ಖರ್ಚಿನಲ್ಲಿ ಕೊಳಾಯಿಗೆ ತಗುಲುವ ವಸ್ತುಗಳ ವೆಚ್ಚವನ್ನು ಭರಿಸಬೇಕೆಂಬ ನಿಯಮವಿದೆ. ಆದರೆ ಕೆಲವರು ಮನೆಗೆ ನಲ್ಲಿ ಹಾಕಿಸಿಕೊಳ್ಳಲು ಶುಲ್ಕ ಕಟ್ಟಿರುವುದನ್ನು ಜಲಜೀವನ್‌ ಯೋಜನೆಯಡಿ ಕೊಳಾಯಿ ನಿರ್ಮಿಸಲು ಹಣ ಪಡೆದಿದ್ದಾರೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು

ಸುಧಾ ರಂಗಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಜಲಜೀವನ್‌ ಯೋಜನೆ ಅಪ್ಪಸಂದ್ರ ಗ್ರಾಮ ಸೇರಿದಂತೆ ಯಾವ ಗ್ರಾಮಗಳಿಗೂ ಜಾರಿಯಾಗದ ಹಿನ್ನೆಲೆಯಲ್ಲಿ ಗ್ರಾಮಪಂಚಾಯ್ತಿ ವತಿಯಿಂದ ನೀಡಲಾಗುತ್ತಿರುವ ಕುಡಿಯುವ ನೀರಿನ ಯೋಜನೆಗೆ ಮಾತ್ರ ಹಣ ಕಟ್ಟಿಸಿಕೊಳ್ಳಲಾಗುತ್ತಿದೆ. ಶೀಘ್ರದಲ್ಲೇ ಜಲಜೀವನ್‌ ಯೋಜನೆಯಿಂದಲೇ ಮನೆಮನೆಗೆ ಕೊಳಾಯಿ ಸಂಪರ್ಕ ನೀಡಲಾಗುವುದು ಎಂದು ಸುಧಾರಂಗಸ್ವಾಮಿ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ನರಸಪ್ಪ, ರಂಗಸ್ವಾಮಿ ಮತ್ತು ಧನಂಜಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮನೆ ಮನೆಗೆ ನಲ್ಲಿ ನೀರು 3428 ಕೋಟಿ

ಬೆಂಗಳೂರು (ಅ.21): ಜಲಜೀವನ್‌ ಮಿಷನ್‌ ಯೋಜನೆಯಡಿ ರಾಜ್ಯದ ವಿವಿಧೆಡೆ ಜನವಸತಿಗಳ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲು 3428 ಕೋಟಿ ರು. ವೆಚ್ಚದಲ್ಲಿ 24 ಯೋಜನೆಗಳಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ರಾಜ್ಯದ ವಿವಿಧೆಡೆ ಜನಜೀವನ್‌ ಮಿಷನ್‌ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಗೆ 24 ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. 

ಮೈಸೂರು ಜಿಲ್ಲೆಯ ಕೆ.ಆರ್‌.ನಗರ ತಾಲೂಕಿನ ಲಾಲಂದೇವನಹಳ್ಳಿ ಮತ್ತು ಇತರೆ 37 ಜನವಸತಿಗಳಿಗೆ ಕುಡಿಯುವ ನೀರು ಯೋಜನೆಯನ್ನು 35 ಕೋಟಿ ರು. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಾಸನ ಜಿಲ್ಲೆಯ ಆಲೂರು, ಬೇಲೂರು, ಹಾಸನ ಮತ್ತು ಸಕಲೇಶಪುರ ತಾಲೂಕುಗಳ 1477 ಬಹುಗ್ರಾಮ ಕುಡಿಯುವ ಗ್ರಾಮೀಣ ಜನವಸತಿಗಳಿಗೆ ನೀರು ಸರಬರಾಜು ಯೋಜನೆಯನ್ನು 855.39 ಕೋಟಿ ರು. ಪರಿಷ್ಕೃತ ಅಂದಾಜಿಗೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು. ಇದೇ ರೀತಿ ಶಿವಮೊಗ್ಗ ಜಿಲ್ಲೆಯ ಯೋಜನೆಗೆ 313 ಕೋಟಿ, ಕಲಬುರಗಿ ಜಿಲ್ಲೆಗೆ 12 ಕೋಟಿ, ಮಂಡ್ಯ ಜಿಲ್ಲೆಗೆ 943 ಕೋಟಿ, ಉತ್ತರ ಕನ್ನಡಕ್ಕೆ 169 ಕೋಟಿ, ಹಾಸನ 217 ಕೋಟಿ, ದಾವಣಗೆರೆ ಜಿಲ್ಲೆಯ ಯೋಜನೆಗೆ 482 ಕೋಟಿ ಅನುದಾನಕ್ಕೆ ಸಮ್ಮತಿ ಸಿಕ್ಕಿದೆ.

ಮನೆ ಮನೆಗೆ ನಲ್ಲಿ ಸಂಪರ್ಕ ಚುರುಕಿಗೆ ಸಿಎಂ ಬೊಮ್ಮಾಯಿ ಅಪ್ಪಣೆ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಮತ್ತು ಇತೆ 198 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು 313 ಕೋಟಿ ರು. ಮೊತ್ತದಲ್ಲಿ ಅನುಷ್ಠಾನಕ್ಕೆ ಒಪ್ಪಿಗೆ ದೊರೆತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಮತ್ತು ಇತರ 209 ಜನವಸತಿಗಳಿಗೆ ಬಹುಗ್ರಾಮ ನೀರು ಸರಬರಾಜು ಯೋಜನೆಯನ್ನು 170 ಕೋಟಿ ರು. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ಸಿಕ್ಕಿದೆ. ಉತ್ತರ ಕನ್ನಡಜಿಲ್ಲೆಯ ಕಾರವಾರ ತಾಲೂಕಿನ ಗೋಟೆಗಾಳಿ ಮತ್ತು ಇತರೆ 22 ಗ್ರಾಮಗಳ ಮತ್ತು ಕರವಾಡಿ ಮತ್ತು ಇತರೆ 17 ಗ್ರಾಮಗಳ ಸಂಯೋಜಿತ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು 120 ಕೋಟಿ ರು. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಒಪ್ಪಿಗೆ ಸಿಕ್ಕಿದೆ ಎಂದು ಮಾಹಿತಿ ನೀಡಿದರು.

Latest Videos
Follow Us:
Download App:
  • android
  • ios