Asianet Suvarna News Asianet Suvarna News

ಜನಸಂಕಲ್ಪ ಸಮಾವೇಶ ಮುಂದಿನ ಚುನಾವಣೆಗೆ ದಿಕ್ಸೂಚಿ: ಶಾಸಕ ರಾಜೇಶ್

ಶಿರಾದಲ್ಲಿ ಬಿಜೆಪಿ ಪಕ್ಷದಿಂದ ನಡೆದ ಜನಸಂಕಲ್ಪ ಸಮಾವೇಶ ಅಭೂತಪೂರ್ವವಾಗಿ ಯಶಸ್ವಿಯಾಗಿದ್ದು, ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಹಾಗೂ ಈ ಜನಸಂಕಲ್ಪ ಸಮಾವೇಶ ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.

Janasankalpa Samavesh is a compass for the next elections  MLA Rajesh snr
Author
First Published Jan 9, 2023, 5:45 AM IST

 ಶಿರಾ (ಜ. 09):  ಶಿರಾದಲ್ಲಿ ಬಿಜೆಪಿ ಪಕ್ಷದಿಂದ ನಡೆದ ಜನಸಂಕಲ್ಪ ಸಮಾವೇಶ ಅಭೂತಪೂರ್ವವಾಗಿ ಯಶಸ್ವಿಯಾಗಿದ್ದು, ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಹಾಗೂ ಈ ಜನಸಂಕಲ್ಪ ಸಮಾವೇಶ ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್‌ ಪಕ್ಷ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೃಹತ್‌ ಜನಸಂಕಲ್ಪ ಯಾತ್ರೆಯಲ್ಲಿ ಅಪಾರ ಜನಸ್ತೋಮ ಆಗಮಿಸಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ , ಕೇಂದ್ರ ಸಚಿವ ಎ.ನಾರಾಯಣಸ್ವಾಮಿ , ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿಧಾನ ಪರಿಷತ್‌ ಸದಸ್ಯರಾದ ಚಿದಾನಂದ್‌ ಗೌಡ, ಸಚಿವ ಆರ್‌.ಅಶೋಕ್‌, ಶಾಸಕರಾದ ಪೂರ್ಣಿಮಾ ಶ್ರೀನಿವಾಸ್‌, ಮಸಾಲಾ ಜಯರಾಮ್‌, ಸಂಸದ ಪಿಸಿ ಮೋಹನ್‌, ವಿಧಾನ ಪರಿಷತ್‌ ಸದಸ್ಯರಾದ ನವೀನ್‌ ಪ್ರಧಾನ, ಕಾರ್ಯದರ್ಶಿ ಅಶ್ವತ್‌್ಥ ನಾರಾಯಣ್‌, ವಿಕಾಸ್‌ ಪುತ್ತೂರ್‌, ಕಾಡುಗೊಲ್ಲ ನಿಗಮದ ಅಧ್ಯಕ್ಷ ಚಂಗಾವರ ಮಾರಣ್ಣ ಅವರು ಕಾರ್ಯಕ್ರಮ ಯಶಸ್ವಿಗೆ ಬಹಳಷ್ಟುಉತ್ತೇಜನ, ಪ್ರೋತ್ಸಾಹ ಸಹಕಾರ ನೀಡಿದ್ದಾರೆ. ಕಾರ್ಯಕ್ರಮದ ಯಶಸ್ವಿಗೆ ಕಾರಣಕರ್ತರಾಗಿದ್ದಾರೆ. ಕಾರ್ಯಕ್ರಮವು ಸೌಹಾರ್ದಯುತವಾಗಿ ನಡೆದಿದೆ. ಇದಕ್ಕೆ ಸಾರ್ವಜನಿಕರು, ಪೊಲೀಸ್‌ ಇಲಾಖೆಯವರು ಗೊಂದಲ ಬಾರದೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನೆರವೇರಲು ಸಹಕರಿಸಿದ್ದಾರೆ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ಹಳೇ ಮೈಸೂರು ಭಾಗದಲ್ಲಿ ಬಿಜೆಪಿ 35 ಸ್ಥಾನ ಗೆಲ್ಲಬೇಕೆಂದು ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಆ ನಿರೀಕ್ಷೆ ಹುಸಿ ಬಾರದಂತೆ ಬಿಜೆಪಿ ವರಿಷ್ಠರು ಸಂತೋಷದಿಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಶಿರಾ ನಗರವನ್ನು ಕೇಸರಿಮಯವನ್ನಾಗಿ ಮಾಡಿ ಕಾರ್ಯಕರ್ತರು ಹಗಲು ರಾತ್ರಿ ಎನ್ನದೆ ಕಾರ್ಯ ನಿರ್ವಹಿಸಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಲಕ್ಷ್ಮೇಸಾಗರ ಗ್ರಾಪಂ ಸದಸ್ಯ ನಟರಾಜು.ಸಿ, ಪಂಜಿಗಾನಹಳ್ಳಿ ಗ್ರಾ.ಪಂ. ಸದಸ್ಯ ಧನಂಜಯನಾಯ್ಕ, ಸೋರೆಕುಂಟೆ ಗ್ರಾಪಂ ಸದಸ್ಯ ವಿವೇಕಾನಂದ, ಜಿ. ರಂಗನಹಳ್ಳಿ ಗ್ರಾಪಂ ಸದಸ್ಯ ಬಾಬು ಅವರು ಶಾಸಕ ಡಾ. ಸಿ.ಎಂ. ರಾಜೇಶ್‌ ಗೌಡ ಹಾಗೂ ಶಿರಾ ವಿಧಾನಸಭಾ ವಿಸ್ತರಕರಾದ ನಾಗಾರ್ಜುನ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮುಖಂಡರಾದ ಡಿ.ಸತೀಶ್‌, ರಘು, ಕಿಟ್ಟಪ್ಪ, ವಸಂತ್‌ ಕುಮಾರ್‌, ರಮೇಶ್‌, ಶೇಖರ್‌, ಕುಮಾರ್‌, ತಿಮ್ಮಣ್ಣ, ಮತ್ತಿತರರು ಹಾಜರಿದ್ದರು.

8ಶಿರಾ3: ಶಿರಾದ ಪ್ರವಾಸಿ ಮಂದಿರದಲ್ಲಿ ಶಾಸಕ ರಾಜೇಶ್‌ ಗೌಡ, ಶಿರಾ ವಿಧಾನಸಭಾ ವಿಸ್ತರಕರಾದ ನಾಗಾರ್ಜುನ ಸಮ್ಮುಖದಲ್ಲಿ ಲಕ್ಷ್ಮೇಸಾಗರ ಗ್ರಾ.ಪಂ. ಸದಸ್ಯ ನಟರಾಜು.ಸಿ, ಪಂಜಿಗಾನಹಳ್ಳಿ ಗ್ರಾ.ಪಂ. ಸದಸ್ಯ ಧನಂಜಯನಾಯ್ಕ, ಸೋರೆಕುಂಟೆ ಗ್ರಾಪಂ ಸದಸ್ಯ ವಿವೇಕಾನಂದ, ಜಿ. ರಂಗನಹಳ್ಳಿ ಗ್ರಾಪಂ. ಸದಸ್ಯ ಬಾಬು ಬಿಜೆಪಿಗೆ ಸೇರ್ಪಡೆಯಾದರು.

ಬಿಜೆಪಿ ಟೆಂಡರ್ ರದ್ದು

ಬೆಂಗಳೂರು(ಜ.09):  ಇನ್ನು 60 ದಿನಗಳು ಕಳೆದ ಬಳಿಕ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿ ಸರ್ಕಾರ ಪ್ರಸ್ತುತ ತರಾತುರಿಯಲ್ಲಿ ಮಾಡುತ್ತಿರುವ ಎಲ್ಲ ಟೆಂಡರ್‌ಗಳನ್ನೂ ಮರು ಪರಿಶೀಲನೆ ಮಾಡುತ್ತೇವೆ. ಈ ಬಗ್ಗೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಎಚ್ಚರಿಕೆ ಇರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಭಾನುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಆಡಳಿತ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತರಾತುರಿಯಲ್ಲಿ ಅನೇಕ ಯೋಜನೆಗಳಿಗೆ ಟೆಂಡರ್‌ ಕರೆಯಲು ಹೊರಟಿದೆ. ನಾನು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡುತ್ತೇನೆ. ಅಧಿಕಾರಿಗಳು ಯಾರದ್ದೋ ಏಜೆಂಟ್‌ಗಳಾಗಬೇಡಿ. ಗುತ್ತಿಗೆದಾರರು ಸುಮ್ಮನೆ ತೊಂದರೆಗೆ ಸಿಕ್ಕಿಹಾಕಿಕೊಳ್ಳಬೇಡಿ. ಇನ್ನು 60 ದಿನಗಳು ಕಳೆದ ಬಳಿಕ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ನಾವು ಅಧಿಕಾರಕ್ಕೆ ಬಂದ ಕೂಡಲೇ ಆ ಎಲ್ಲ ಟೆಂಡರ್‌ಗಳ ಅಂದಾಜು ಮೊತ್ತವನ್ನು ಮರು ಪರಿಶೀಲನೆ ಮಾಡಿಸುತ್ತೇವೆ ಎಚ್ಚರವಿರಲಿ’ ಎಂದು ಹೇಳಿದರು.

Follow Us:
Download App:
  • android
  • ios