ಶಿರಾ (ಅ.21): ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಶಾಸಕರಾಗಿದ್ದಾಗ 2500 ಕೋಟಿ ರು. ಅನುದಾನವನ್ನು ಶಿರಾ ಕ್ಷೇತ್ರಕ್ಕೆ ತಂದು ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಈ ಉಪಚುನಾವಣೆಯಲ್ಲಿ ಜಯಚಂದ್ರ ಜಯಭೇರಿ ಬಾರಿಸುವ ಮೂಲಕ ರಾಜ್ಯಕ್ಕೆ, ದೇಶಕ್ಕೆ ದೊಡ್ಡ ಸಂದೇಶ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು. 

ತಾಲೂಕಿನ ದೊಡ್ಡ ಆಲದಮರ, ಬ್ರಹ್ಮಸಂದ್ರ, ತರೂರು, ಭೂಪಸಂದ್ರ ಮತ್ತಿತರ ಗ್ರಾಮಗಳಲ್ಲಿ ರೋಡ್‌ ಶೋ ಮತ್ತು ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಆರ್‌.ಆರ್‌.ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಗಳಿಸುವುದು ಶತಸಿದ್ಧ ಎಂದರು.

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ: ಎಚ್‌ಡಿಕೆ ಗರಂ .

ಈ ಮೂಲಕ ರಾಜ್ಯ ಮತ್ತು ದೇಶಕ್ಕೆ ದೊಡ್ಡ ಸಂದೇಶ ರವಾನೆಯಾಗಲಿದೆ. ರಾಜ್ಯದ ಮುಂದಿನ ಚುನಾವಣಾ ದಿಕ್ಕನ್ನು ಬದಲಿಸಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಿಂದ ಬಿಜೆಪಿ ಸರ್ಕಾರದಿಂದ ಕೂಲಿ ಕಾರ್ಮಿಕರಿಗೆ, ವರ್ತಕರಿಗೆ, ಅಸಂಘಟಿತ ಕಾರ್ಮಿಕರಿಗೆ, ರೈತರಿಗೆ ಶೇ.5 ರಷ್ಟುಸಹಾಯ ಸಿಕ್ಕಿಲ್ಲ ಎಂದು ಆರೋಪಿಸಿದರು.