Asianet Suvarna News Asianet Suvarna News

ಪಂಚಮಸಾಲಿ ಸಮಾಜಕ್ಕೆ ಕೆಲಸ ಮಾಡಿದವರಿಗೆ ಸಚಿವ ಸ್ಥಾನ ಸಿಗಲಿ: ಜಯಮೃತ್ಯುಂಜಯ ಸ್ವಾಮೀಜಿ

ಶ್ರಾವಣ ಮಾಸದಲ್ಲಿ ಪಂಚಮಸಾಲಿಗೆ ಮೀಸಲಾತಿಗಾಗಿ ಮತ್ತೆ ಹೋರಾಟ ಆರಂಭ ಮಾಡಲಾಗುವುದು. ಇಷ್ಟರಲ್ಲಿಯೇ ಪಂಚಮಸಾಲಿ ಸಮಾಜದ ಮುಖಂಡರ ಸಭೆ ನಡೆಸಲಾಗುವುದು. ಶ್ರಾವಣ ಮಾಸದಲ್ಲಿ ಪ್ರತಿ ತಾಲೂಕಿನಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಮೀಸಲಾತಿಗಾಗಿ ಜಾಗೃತಿ ಮೂಡಿಸಲಾಗುವುದು: ಜಯಮೃತ್ಯುಂಜಯ ಸ್ವಾಮೀಜಿ 

Jayamrutunjaya Swamiji Talks Over Minister Post to Panchamasali Community grg
Author
First Published Aug 23, 2023, 11:00 PM IST

ಕೊಪ್ಪಳ(ಆ.23):  ರಾಜ್ಯದ ಸರಕಾರ ಪಂಚಮಸಾಲಿ ಸಮಾಜಕ್ಕೆ ದುಡಿದವರಿಗೆ ಸಚಿವ ಸ್ಥಾನ ನೀಡಬೇಕಿತ್ತು ಈಗ ಇಬ್ಬರಿಗೆ ಸಚಿವ ಸ್ಥಾನ ನೀಡಿದೆಸಮಾಜಕ್ಕಾಗಿ ದುಡಿದ ಲಕ್ಷ್ಮೀ ಹೆಬ್ಬಾಳಕರ್, ವಿಜಯಾನಂದ ಕಾಶಪ್ಪನವರ, ವಿನಯ್‌ ಕುಲಕರ್ಣಿ, ಬಿ.ಆರ್. ಪಾಟೀಲರನ್ನು ಸಚಿವರನ್ನಾಗಿ ಮಾಡಬೇಕಿತ್ತು ಎಂದು ಪಂಚಮಸಾಲಿ ಸಮಾಜದ ಕೂಡಲಸಂಗಮದ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಇಂದು(ಬುಧವಾರ) ನಗರದಲ್ಲಿ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ ಅವರು, ಈಗ ಶಿವಾನಂದ ಪಾಟೀಲರನ್ನು ಮಾಡಿದ್ದು ಎಷ್ಟು ಸರಿ ಎಂದು ಸಮಾಜದವರು ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಇನ್ನೂ ಮೂವರನ್ನು ಸೇರಿಸಿಕೊಳ್ಳಬೇಕು. ಪಂಚಮಸಾಲಿ ಸಮಾಜದ ಶಕ್ತಿ ಏನು ಎಂಬುವುದು ಈ ಚುನಾವಣೆಯಲ್ಲಿ ಗೊತ್ತಾಗಿದೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯ ಏನೇ ಇರಲಿ. ಪಂಚಮಸಾಲಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕು ಎಂದು ಹೇಳಿದರು. 

2ಎ ಮೀಸಲಾತಿ: ನಿಪ್ಪಾಣಿಯಿಂದ ಮತ್ತೆ ಹೋರಾಟ, ಜಯಮೃತ್ಯುಂಜಯ ಸ್ವಾಮೀಜಿ

ಇದೇ ವೇಳೆ ಶ್ರಾವಣ ಮಾಸದಲ್ಲಿ ಪಂಚಮಸಾಲಿಗೆ ಮೀಸಲಾತಿಗಾಗಿ ಮತ್ತೆ ಹೋರಾಟ ಆರಂಭ ಮಾಡಲಾಗುವುದು. ಇಷ್ಟರಲ್ಲಿಯೇ ಪಂಚಮಸಾಲಿ ಸಮಾಜದ ಮುಖಂಡರ ಸಭೆ ನಡೆಸಲಾಗುವುದು. ಶ್ರಾವಣ ಮಾಸದಲ್ಲಿ ಪ್ರತಿ ತಾಲೂಕಿನಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಮೀಸಲಾತಿಗಾಗಿ ಜಾಗೃತಿ ಮೂಡಿಸಲಾಗುವುದು. ಪಂಚಮಸಾಲಿಗೆ 2 ಎ ಮೀಸಲಾತಿ ನೀಡಬೇಕು. ಇಲ್ಲಿವೆ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು. ಈ ನಿಟ್ಟಿನಲ್ಲಿ ಇಂದಿನ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷಕ್ಕೆ ಪಂಚಮಸಾಲಿ ಸಮಾಜದ ಶಕ್ತಿ ಏನು ಎಂಬುವುದು ಗೊತ್ತಾಗಿದೆ. ಮುಖ್ಯಮಂತ್ರಿಗಳ ಮೇಲೆ ನಾವು ಭರವಸೆ ಇಟ್ಟುಕೊಂಡಿದ್ದೇವೆ. 2024 ರ ಲೋಕಸಭಾ ಚುನಾವಣೆಯೊಳಗೆ ಮೀಸಲಾತಿಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

Follow Us:
Download App:
  • android
  • ios