ಮತ್ತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಮೈಸೂರಿನಲ್ಲಿ ಅಧಿಕಾರ ಹಂಚಿಕೆಯಾಗಿದೆ. ಎರಡು ಪಕ್ಷಗಳು ತಲಾ ಎರಡು ಸ್ಥಾನ ಹಂಚಿಕೆ ಮಾಡಿಕೊಂಡಿವೆ. 

ಮೈಸೂರು (ಮಾ.19): ನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಯನ್ನು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳು ತಲಾ ಎರಡರಂತೆ ಹಂಚಿಕೊಂಡಿವೆ.

ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜೆಡಿಎಸ್‌ನ ಎಂ.ಎಸ್‌. ಶೋಭಾ ಆಯ್ಕೆಯಾಗಿದ್ದಾರೆ. ಲೆಕ್ಕಪತ್ರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜೆಡಿಎಸ್‌ನ ಕೆ. ನಿರ್ಮಲಾ ಅವರನ್ನು ಆಯ್ಕೆ ಮಾಡಲಾಗಿದೆ.

ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಉಷಾ ಮತ್ತು ಪಟ್ಟಣ ಯೋಜನೆ ಮತ್ತು ಸುಧಾರಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಿ.ಎಸ್‌. ಸತ್ಯರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ.

ವೈರಿ ಜೊತೆ ಸೇರಿ ಎಚ್‌ಡಿಕೆಗೆ ಸಿದ್ದರಾಮಯ್ಯ ಬಿಗ್ ಶಾಕ್ : ಬಲೆಗೆ ಬಿದ್ದ ದಳಪತಿ .

ಮೇಯರ್‌ ಮತ್ತು ಉಪ ಮೇಯರ್‌ ಸ್ಥಾನವನ್ನು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳು ಅಧಿಕಾರ ಹಂಚಿಕೊಂಡಂತೆಯೇ ಸ್ಥಾಯಿ ಸಮಿತಿಯನ್ನು ತಲಾ ಎರಡರಂತೆ ಹಂಚಿಕೊಂಡು ಆಡಳಿತ ನಡೆಸುತ್ತಿವೆ. ಈ ಎಲ್ಲಾ ಸ್ಥಾಯಿ ಸಮಿತಿ ಸದಸ್ಯರನ್ನು ಮೇಯರ್‌ ಚುನಾವಣೆ ದಿನವೇ ಆಯ್ಕೆ ಮಾಡಲಾಗಿತ್ತು.

ಸ್ಥಾಯಿ ಸಮಿತಿಗಳ ನೂತನ ಅಧ್ಯಕ್ಷರನ್ನು ಮೇಯರ್‌ ರುಕ್ಮಿಣಿ ಮಾದೇಗೌಡ, ಉಪ ಮೇಯರ್‌ ಅನ್ವರ್‌ ಬೇಗ್‌ ಹೂ ಗುಚ್ಛ ನೀಡಿ ಶುಭ ಕೋರಿದರು.

ಮೇಯರ್‌ ಚುನಾವಣೆ ನಡೆದು, ಮೂರು ವಾರ ಕಳೆದಿದ್ದರೂ ಕೂಡ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ವಿಳಂಬವಾಗಿತ್ತು. ಕೊನೆಗೆ ಅದು ಬಗೆಹರಿದಿದ್ದು, ತಲಾ ಎರಡು ಸಮಿತಿಗಳ ಅಧ್ಯಕ್ಷ ಸ್ಥಾನವನ್ನು ಹಂಚಿಕೊಂಡಿವೆ.